ರಾಯಚೂರು ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಸರ್ಕಾರದ ಅನುಮೋದನೆ

ರಾಯಚೂರು, ಫೆಬ್ರವರಿ.25: ರಾಯಚೂರು ಜಿಲ್ಲೆಯಲ್ಲಿ ಅಸ್ತಿತ್ವದಲ್ಲಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಪ್ರವರ್ಗ-2 ವಿಜ್ಞಾನ ಕೇಂದ್ರವಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ತಿಳಿಸಿದ್ದಾರೆ.

ಅಂದಾಜು 22.25 ಕೋಟಿ ವೆಚ್ಚದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟದ ಅನುಮೋದನೆ ದೊರೆತಿದೆ ಎಂದರು. ಸಚಿವ ಎನ್ ಎಸ್ ಬೋಸರಾಜು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ರಾಜ್ಯಾದ್ಯಂತ ವಿದ್ಯಾರ್ಥಿಗಳು, ಶಿಕ್ಷಣತಜ್ಞರು ಮತ್ತು ಸಾರ್ವಜನಿಕರಲ್ಲಿ ವೈಜ್ಞಾನಿಕ ಕುತೂಹಲ ಮತ್ತು ತಿಳುವಳಿಕೆಯನ್ನು ಬೆಳೆಸುವಲ್ಲಿ ವಿಜ್ಞಾನ ಕೇಂದ್ರಗಳು ಮತ್ತು ತಾರಾಲಯಗಳ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ್ದಾರೆ.

Government approved the proposal for upgrading Raichur science center

ಎನ್ ಎಸ್ ಬೋಸರಾಜು ಅಧ್ಯಕ್ಷತೆಯ ಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಡಿಯಲ್ಲಿ ಅಗತ್ಯ ಹಣಕಾಸಿನ ಸೌಲಭ್ಯದೊಂದಿಗೆ ರಾಯಚೂರಿನಲ್ಲಿ 10 ಎಕರೆ ವಿಸ್ತೀರ್ಣದಲ್ಲಿ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಯಿತು. ಈ ವಿಜ್ಞಾನ ಕೇಂದ್ರವನ್ನು ಮುಂದುವರಿಸುವ ಉದ್ದೇಶದಿಂದ ಎನ್ ಎಸ್ ಬೋಸರಾಜು ಅವರು ದೆಹಲಿಯಲ್ಲಿ ಕೇಂದ್ರ ಸಂಸ್ಕೃತಿ ಸಚಿವರೊಂದಿಗೆ ಖುದ್ದಾಗಿ ತೊಡಗಿಸಿಕೊಂಡು, ಅದರ ಉನ್ನತೀಕರಣಕ್ಕಾಗಿ ಕೆಲಸ ಮಾಡಿದ್ದಾರೆ.

"ರಾಯಚೂರಿನಲ್ಲಿ 22.25 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆ ಪ್ರಸ್ತಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ವಿಜ್ಞಾನ ಕೇಂದ್ರ ಸ್ಥಾಪನೆಯಿಂದ ರಾಯಚೂರು ಭಾಗದಲ್ಲಿ ಜನರಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ಹಾಗೂ ಶೈಕ್ಷಣಿಕವಾಗಿಯೂ ಪ್ರಗತಿ ಸಾಧಿಸಲು ಹಾಗೂ ಜಿಲ್ಲೆಯ ಅಭಿವೃದ್ಧಿಗೆ ನೆರವಾಗಲಿದೆ. ಸರ್ವರಿಗೂ ವಿಜ್ಞಾನ ಹಾಗೂ ಸುಲಭ ವಿಜ್ಞಾನದ ಮೂಲಕ ಸರ್ವರ ಪ್ರಗತಿಯೇ ನಮ್ಮ ಸರ್ಕಾರದ ಪ್ರಮುಖ ಗುರಿ" ಎಂದು ಸಚಿವ ಎನ್ ಎಸ್ ಬೋಸರಾಜು ಟ್ವೀಟ್ ಮಾಡಿದ್ದಾರೆ.

"ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆಯು ಕೇಂದ್ರ ತಂಡದಿಂದ ಸಮಗ್ರ ಮೌಲ್ಯಮಾಪನ ನಡೆಯಿತು. ರಾಷ್ಟ್ರೀಯ ವಿಜ್ಞಾನ ಮ್ಯೂಸಿಯಂನಿಂದ ವಿಜ್ಞಾನದ ಸಂಸ್ಕೃತಿಯನ್ನು ಉತ್ತೇಜಿಸುವ ಯೋಜನೆಯಲ್ಲಿ ವಿವರಿಸಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿ ಮೌಲ್ಯಮಾಪನ ನಡೆಸಲಾಯಿತು. ತರುವಾಯ, ತಂಡದ ವರದಿಯನ್ನು ಆಧರಿಸಿ, ಕೇಂದ್ರವನ್ನು ಪ್ರವರ್ಗ-2 ವಿಜ್ಞಾನ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆಯನ್ನು ಸಂಪುಟಕ್ಕೆ ಸಲ್ಲಿಸಲಾಯಿತು. ಕೂಲಂಕುಷವಾದ ಚರ್ಚೆಯ ನಂತರ, ಸಂಪುಟ ಸಭೆಯಲ್ಲಿ ಪ್ರಸ್ತಾವನೆಯು ಸರ್ವಾನುಮತದ ಅನುಮೋದನೆಯನ್ನು ಪಡೆಯಿತು" ಎಂದು ಸಚಿವ ಎನ್ ಎಸ್ ಬೋಸರಾಜು ಹೇಳಿಕೆಯಲ್ಲಿ ಸೇರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+