• search
  • Live TV
ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂತ್ರಾಲಯದ ಸುಬುಧೇಂದ್ರ ತೀರ್ಥರಿಗೆ ಗೌರವ ಡಾಕ್ಟರೇಟ್

By Lekhaka
|

ರಾಯಚೂರು, ನವೆಂಬರ್ 18: ಗುಲ್ವರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಭಾಜನರಾಗಿದ್ದಾರೆ.

ಸುಬುಧೇಂದ್ರ ತೀರ್ಥರ ಸಾಮಾಜಿಕ ಸೇವೆ, ಪಾಂಡಿತ್ಯ ಹಾಗೂ ಸೇವಾ ಕಾರ್ಯಗಳನ್ನು ಗುರುತಿಸಿ ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಿರುವುದಾಗಿ ತಿಳಿದುಬಂದಿದೆ.

ಇನ್ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ ಅವರಿಗೆ ಗೌರವದ ಮತ್ತೊಂದು ಗರಿ!

ಅವರ ಧಾರ್ಮಿಕ ಪಾಂಡಿತ್ಯದ ಜೊತೆಗೆ ಸಾಮಾಜಿಕ ಸೇವೆಯನ್ನು ಗುರುತಿಸಿ ಡಾಕ್ಟರೇಟ್ ನೀಡಲು ತೀರ್ಮಾನ ಕೈಗೊಂಡಿರುವುದಾಗಿ ವಿವಿ ಸಿಂಡಿಕೇಟ್ ಸದಸ್ಯ ಡಾ. ಶರಣಬಸವ ಪಾಟೀಲ ಜೋಳದ ಹೆಡಗಿ ತಿಳಿಸಿದ್ದಾರೆ. ಸುಬುದೇಂಧ್ರ ಶ್ರೀಗಳು ರಾಜ್ಯದಲ್ಲಿ ಪ್ರವಾಹದ ಪ್ರಕೃತಿ ವಿಕೋಪ ಎದುರಾದ ಸಂದರ್ಭದಲ್ಲಿ ಜನರಿಗೆ ಸಹಾಯ ಹಸ್ತ ಚಾಚಿದ್ದರು. ಸಾಲ ಭಾದೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೂ ಆರ್ಥಿಕವಾಗಿ ನೆರವು ನೀಡಿದ್ದಾರೆ.

ಅವರ ಈ ಸಮಾಜ ಸೇವೆಯನ್ನು ಗುರುತಿಸಿ ಗೌರವಾರ್ಥವಾಗಿ ಡಾಕ್ಟರೇಟ್ ನೀಡಲಾಗುತ್ತಿದೆ. ನವೆಂಬರ್ 20ರಂದು ನಡೆಯಲಿರುವ ವಿವಿಯ 38ನೇ ಘಟಿಕೋತ್ಸವದಲ್ಲಿ ಸುಬುಧೇಂದ್ರ ತೀರ್ಥರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.

English summary
Gulbarga University is conferring Hon. Doctorate to Subhudendra Teertha Swamiji of Mantralaya Raghavendra math
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X