ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರು ವಿದ್ಯಾರ್ಥಿನಿ ಸಾವು : ಎಚ್.ಡಿ.ಕುಮಾರಸ್ವಾಮಿ ವಿಷಾದ

|
Google Oneindia Kannada News

Recommended Video

ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಸಾವಿಗೆ ವಿಷಾಧ ವ್ಯಕ್ತಪಡಿಸಿದ ಎಚ್ ಡಿ ಕೆ

ರಾಯಚೂರು, ಏಪ್ರಿಲ್ 19 : ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.

ಏಪ್ರಿಲ್ 13ರಂದು ಪರೀಕ್ಷೆ ಬರೆಯಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆಯಾಗಿದ್ದಳು. ಏಪ್ರಿಲ್ 16ರಂದು ಕಾಲೇಜಿನಿಂದ ನಾಲ್ಕು ಕಿ.ಮೀ.ದೂರದಲ್ಲಿ ಆಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ರಾಯಚೂರು ವಿದ್ಯಾರ್ಥಿನಿ ಸಾವು, ಅನುಮಾನಕ್ಕೆ ಕಾರಣವಾದ ಅಂಶಗಳುರಾಯಚೂರು ವಿದ್ಯಾರ್ಥಿನಿ ಸಾವು, ಅನುಮಾನಕ್ಕೆ ಕಾರಣವಾದ ಅಂಶಗಳು

ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲು ಮಾಡಿಕೊಂಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ, ಪೊಲೀಸರು ವಿಚಾರಣೆ ನಡೆಸುತ್ತಿದ್ದು ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ರಾಯಚೂರಿನಲ್ಲಿ ವಿದ್ಯಾರ್ಥಿನಿಯ ನಿಗೂಢ ಸಾವು, ಕಟ್ಟೆಯೊಡೆದ ಆಕ್ರೋಶರಾಯಚೂರಿನಲ್ಲಿ ವಿದ್ಯಾರ್ಥಿನಿಯ ನಿಗೂಢ ಸಾವು, ಕಟ್ಟೆಯೊಡೆದ ಆಕ್ರೋಶ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಟ್ವೀಟ್ ಮಾಡಿದ್ದು ಇದೊಂದು ಪೈಶಾಚಿಕ ಕೃತ್ಯ ಎಂದು ಖಂಡಿಸಿದ್ದಾರೆ. ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಪ್ರಕರಣ ಅತೀವ ನೋವು ತಂದಿದೆ' ಎಂದು ವಿಷಾದ ವ್ಯಕ್ತಪಡಿಸಿದ್ದಾರೆ....

ಎಚ್.ಡಿ.ಕುಮಾರಸ್ವಾಮಿ ಟ್ವೀಟ್

'ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣದ ಕುರಿತು ರಾಯಚೂರು ಎಸ್ ಪಿ ಯವರಿಂದ ಮಾಹಿತಿ ಪಡೆದಿದ್ದು ಒಬ್ಬನನ್ನು ಬಂಧಿಸಿದ್ದು ತನಿಖೆ ಮುಂದುವರೆದಿದೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಪೈಶಾಚಿಕ ಕೃತ್ಯ ಖಂಡನೀಯ

'ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಯಾವ ಪರೀಕ್ಷೆಯಲ್ಲೂ ಫೇಲ್ ಆಗಿಲ್ಲ

ಯಾವ ಪರೀಕ್ಷೆಯಲ್ಲೂ ಫೇಲ್ ಆಗಿಲ್ಲ

'ಪರೀಕ್ಷೆಯಲ್ಲಿ ಅವಳು ಫೇಲ್ ಆಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಅವಳು ಯಾವ ಪರೀಕ್ಷೆಯಲ್ಲಿಯೂ ಫೇಲ್ ಆಗಿಲ್ಲ. 6ನೇ ಸೆಮಿಸ್ಟರ್ ಕ್ಲಿಯರ್ ಇದೆ' ಎಂದು ವಿದ್ಯಾರ್ಥಿನಿ ತಾಯಿ ಹೇಳಿದ್ದಾರೆ.

ಒಂದು ದಿನ ಶವ ಅಲ್ಲೇ ಇತ್ತು

ಒಂದು ದಿನ ಶವ ಅಲ್ಲೇ ಇತ್ತು

ವಿದ್ಯಾರ್ಥಿನಿ ಶವ ಬೆಟ್ಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಏಪ್ರಿಲ್ 15ರಂದೇ ಪತ್ತೆಯಾಗಿತ್ತು, ಪೊಲೀಸರ ಗಮನಕ್ಕೂ ಬಂದಿತ್ತು. ಕೊಳೆತ ಸ್ಥಿತಿಯಲ್ಲಿದ್ದ ಶವವನ್ನು ಒಂದು ದಿನ ಬಿಟ್ಟು ಪೊಲೀಸರು ಕೆಳಗಿಳಿಸಿದ್ದಾರೆ. ಫೋರೆನ್ಸಿಕ್ ತಜ್ಞರ ತಂಡ ಬರುವ ತನಕ ಶವವನ್ನು ಹಾಗೆ ಬಿಟ್ಟಿದ್ದಾರೆ ಎಂದು ಆರೋಪ ಮಾಡಲಾಗುತ್ತಿದೆ.

ಆರೋಪಿ ಬಂಧನ

ಆರೋಪಿ ಬಂಧನ

ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದರ್ಶನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. 'ಸುದರ್ಶನ್ ನನ್ನ ಮಗಳ ಸಹಪಾಠಿಯಲ್ಲ. ಆತ ಕಾಲೇಜಿನಲ್ಲೆ ಕೆಲಸ ಮಾಡುತ್ತಿದ್ದ' ಎಂದು ವಿದ್ಯಾರ್ಥಿನಿ ತಾಯಿ ಹೇಳಿದ್ದಾರೆ.

English summary
In a tweet Karnataka Chief Minister H.D.Kumaraswamy said that one arrested in connection with the Raichur engineering student death case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X