ಕೂಲಿ ಕಾರ್ಮಿಕರ ಆರೋಗ್ಯ ರಕ್ಷಣೆಗೆ 'ನರೇಗಾ’ ತಪಾಸಣೆ: ರಾಜ್ಯದಲ್ಲಿ ರಾಯಚೂರು ಜಿಲ್ಲೆಗೆ 5ನೇ ಸ್ಥಾನ
ರಾಯಚೂರು, ಜುಲೈ 04: ನರೇಗಾ ಕೂಲಿ ಕಾರ್ಮಿಕರ ಆರೋಗ್ಯ ರಕ್ಷಣೆಗೆ ರಾಯಚೂರು ಜಿಲ್ಲಾ ಪಂಚಾಯಿತಿ ವಿಶೇಷ ಯೋಜನೆ ರೂಪಿಸಿ 73 ಸಾವಿರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿ ದಾಖಲೆ ಬರೆದಿದೆ. ಜಿಲ್ಲೆಯ 179 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ನರೇಗಾ ಕಾಮಗಾರಿ ಅನುಷ್ಠಾನದಲ್ಲಿದ್ದು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಕಾರ್ಮಿಕರಿರುವ ಸ್ಥಳಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ಚಿಕಿತ್ಸೆ ನೀಡಲು ಜಿಲ್ಲಾ ಪಂಚಾಯಿತಿ ವಿಶಿಷ್ಟ ಯೋಜನೆ ರೂಪಿಸಿ ಗಮನ ಸೆಳೆದಿದೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ 5.45 ಲಕ್ಷ ಉದ್ಯೋಗ ಚೀಟಿ ಇರುವ ಕಾರ್ಮಿಕರು ಕೆಲಸ ಮಾಡುತ್ತಿದ್ದು ಇವರೆಲ್ಲರ ಆರೋಗ್ಯ ರಕ್ಷಣೆಗೆ ಕ್ರಮಕೈಗೊಳ್ಳಲಾಗಿದೆ. ಸಮೀಕ್ಷೆಯೊಂದಿಗೆ ಆರೋಗ್ಯ ಜಾಗೃತಿ ಮೂಡಿಸಲು ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ (ನರೇಗಾ) ಯೋಜನೆಯ ಕಾರ್ಮಿಕರಿಗೆ ಅವರ ಕೆಲಸದ ಸ್ಥಳದಲ್ಲೇ ಆರೋಗ್ಯ ತಪಾಸಣೆ ನಡೆಸಲು ಪ್ರತಿ ತಾಲೂಕಿನಲ್ಲಿ ಇಬ್ಬರು ವೈದ್ಯರನ್ನೊಳಗೊಂಡ 6 ರಿಂದ 7 ತಂಡಗಳನ್ನು ರಚಿಸಿ ಆರೋಗ್ಯ ತಪಾಸಣೆಗೆ ನಿಯೋಜಿಸಲಾಗಿತ್ತು.

ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರಿ ಮೀರಿದ ಸಾಧನೆಯಾಗಿದೆ. ಕೂಲಿ ಕಾರ್ಮಿಕರಿಗೆ ಗಂಭೀರ ಕಾಯಿಲೆಗಳಿದ್ದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನರೇಗಾದಡಿ ಕೈಗೊಂಡಿರುವ ಆರೋಗ್ಯ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 2023ರ ಮೇ 23ರಿಂದ ಜಿಲ್ಲಾ ಪಂಚಾಯಿತಿಯಿಂದ ಜಿಲ್ಲೆಯ 179 ಗ್ರಾಮ ಪಂಚಾಯಿತಿಗಳಲ್ಲಿ ಆರೋಗ್ಯ ಗ್ರಾಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಳೆದ ಒಂದು ತಿಂಗಳಲ್ಲಿ 73 ಸಾವಿರ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗಿದೆ.
ಜಿಲ್ಲೆಯಲ್ಲಿ 5,45,886 ಸಕ್ರಿಯ ಕೂಲಿಕಾರರಿದ್ದು, ಮೊದಲ ಹಂತದಲ್ಲಿ 76 ಸಾವಿರ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಗಿದ್ದು ಶೇಕಡಾ 95.31 ರಷ್ಟು ಗುರಿ ಮುಟ್ಟಲಾಗಿದೆ. ನರೇಗಾ ಕೂಲಿಕಾರರ ಪೈಕಿ ಮಹಿಳೆಯರು, ಹಿರಿಯ ನಾಗರಿಕರು, ವಿಕಲಚೇತನರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡಲಾಗಿದೆ. ಇದಲ್ಲದೇ ಬುಡಕಟ್ಟು ಸಮುದಾಯವೇ ಹೆಚ್ಚು ವಾಸವಾಗಿರುವ ರಾಯಚೂರು ಜಿಲ್ಲೆಯ ದೇವದುರ್ಗ, ಬಂಡೆಗುಂಡ ತಾಂಡಾ, ಸಾಸ್ವಿಗೇರಾ, ಲಿಂಗಸೂಗೂರು ತಾಲೂಕಿನ ಈಚನಾಳ ಹಾಗೂ ರಾಯಚೂರು ತಾಲೂಕಿನ ಗ್ರಾಮ ಪಂಚಾಯಿತಿನಲ್ಲಿ ಬಾಪೂರು ಜನಾಂಗದ ಬುಡಕಟ್ಟು ಗ್ರಾಮಗಳು ಮತ್ತು ತಾಂಡಾಗಳಲ್ಲೂಆರೋಗ್ಯ ತಪಾಸಣೆ ನಡೆಸಿ ರಾಜ್ಯದಲ್ಲೇ 5ನೇ ಸ್ಥಾನ ಪಡೆದ ಜಿಲ್ಲೆಯಾಗಿದೆ.
ಜಿಲ್ಲೆಯ 7 ತಾಲೂಕುಗಳಲ್ಲಿ ಸುಮಾರು 76, 970 ಆರೋಗ್ಯ ತಪಾಸಣೆ ಮಾಡುವ ಗುರಿಯಿತ್ತು. ಅದರಲ್ಲಿ ದೇವದುರ್ಗ 13,160, ಲಿಂಗಸೂಗೂರು 12,408, ಮಾನ್ವಿ 7,520, ಮಸ್ಕಿ 7,896, ರಾಯಚೂರು 13,912, ಸಿಂಧನೂರು 11,695, ಸಿರವಾರ 6,768 ಒಟ್ಟ 73,359 ನರೇಗಾ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ.

ಆರೋಗ್ಯ ತಪಾಸಣೆಯಲ್ಲಿ ಮಹಿಳೆಯರು ಹಾಗೂ 50 ವರ್ಷ ದಾಟಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಧುಮೇಹ ನ್ಯೂನತೆ ಹಾಗೂ ಅಧಿಕ ರಕ್ತದೊತ್ತಡ ಕಂಡು ಬಂದಲ್ಲಿ ಎನ್‌ಸಿಡಿ ಕ್ಲಿನಿಕ್‌ಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಅಗತ್ಯ ಔಷಧವನ್ನೂ ಪೂರೈಸಲಾಗಿದೆ. ಜುಲೈ ಮೊದಲ ವಾರದಿಂದ ಮತ್ತೆ ನರೇಗಾ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಅಭಿಯಾನ ಆರಂಭವಾಗಲಿದೆ.
ಕೂಲಿ ಕಾರ್ಮಿಕರಲ್ಲಿ ಶೇಕಡಾ 50ಕ್ಕಿಂತಲೂ ಹೆಚ್ಚಿನವರು ಮಹಿಳೆಯರಿದ್ದಾರೆ. ಅವರಿಗೆ ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ಮೊದಲಾದ ಸಮಸ್ಯೆಗಳ ತಪಾಸಣೆ ನಡೆಸಲು ರಾಯಚೂರು ಜಿಲ್ಲಾಪಂಚಾಯಿತಿ ಮುಂದಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ನರೇಗಾ ಕೂಲಿಕಾರರಿಗೆ ನಿರಂತರವಾಗಿ ಆರೋಗ್ಯ ತಪಾಸಣೆ ನಡೆಸಲಾಗಿದೆ. ನಮಗೆ ಕೊಟ್ಟಿರುವ ಗುರಿಯಲ್ಲಿ ಶೇಕಡಾ 95.31 ರಷ್ಟು ಪೂರ್ಣಗೊಳಿಸಿ ರಾಜ್ಯದಲ್ಲಿ 5ನೇ ಸ್ಥಾನ ಪಡೆದಿದ್ದೇವೆ ಎಂದು ರಾಯಚೂರು ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ್ ಕುರೇರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ, ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಬಡವರಿಗೆ ನರೇಗಾ ಕೆಲಸ ನೀಡಲಾಗಿದೆ. ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಯಶಸ್ವಿಗೆ ಜಿಲ್ಲಾ ಪಂಚಾಯಿತಿ ಕಾರ್ಯ ಯೋಜನೆ ರೂಪಿಸಿ ಜಿಲ್ಲೆಯ ತಾಲೂಕುಗಳ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ನರೇಗಾ ಕೆಲಸ ನೀಡಿದ್ದರಿಂದ ಸಾಧ್ಯವಾದಷ್ಟು ಮಟ್ಟಿಗೆ ಗುಳೆ ತಪ್ಪಿಸಲು ಪ್ರಯತ್ನಿಸಲಾಗಿದೆ ಎಂದು ರಾಯಚೂರು ಜಿಲ್ಲಾ ಪಂಚಾಯಿತಿ ನರೇಗಾ ಯೋಜನಾ ನಿರ್ದೇಶಕ ಪ್ರಕಾಶ್ ವಿ. ತಿಳಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications