ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: ಪ್ರವಾಹದಲ್ಲಿ ಕೊಚ್ಚಿ ಹೋದ ಯುವಕ

|
Google Oneindia Kannada News

ರಾಯಚೂರು, ಅಕ್ಟೋಬರ್ 11: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಕಿರು ಜಲಾಶಯದಿಂದ ಏಕಾಏಕಿ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಿದ್ದರಿಂದ ಮಸ್ಕಿ ಹಳ್ಳದಲ್ಲಿ ಇಬ್ಬರು ಯುವಕರು ಸಿಲುಕಿ, ಹೊರಬರಲಾಗದೆ ಪರದಾಡುತ್ತಿದ್ದಾರೆ. ಹಳ್ಳಕ್ಕೆ ಬಹಿರ್ದಸೆಗೆಂದು ಹೋಗಿದ್ದ ಚನ್ನಬಸಪ್ಪ ಹಾಗೂ ಜಲೀಲ ಎಂಬುವವರ ಹಳ್ಳದ ಮಧ್ಯೆ ಸಿಲುಕಿಕೊಂಡಿದದಾರೆ. ಮಸ್ಕಿ ನಾಲೆಯ ಜಲಾನಯನ ಪ್ರದೇಶಗಳಾದ ಗಜೇಂದ್ರಗಡ, ಕುಷ್ಟಗಿ ಭಾಗದಲ್ಲಿ ಭಾರೀ ಪ್ರಮಾಣ ಮಳೆಯಾಗಿದ್ದರಿಂದ ಮಸ್ಕಿ ಆಣೆಕಟ್ಟೆಯಿಂದ ನೀರು ಹೊರ ಬಿಡಲಾಗಿದೆ.

ಕಿರು ಜಲಾಶಯದ ನಾಲ್ಕು ಗೇಟ್ ಗಳ ಮೂಲಕ 1,600 ಕ್ಯೂಸೆಕ್ಸ್ ನೀರು ಹೊರ ಬಿಡಲಾಗಿದ್ದು, ಭಾರಿ ಮಳೆ ಹಿನ್ನೆಲೆ ಮಸ್ಕಿ ನಾಲಾ ಯೋಜನೆಯಿಂದ ಅಪಾರ ಪ್ರಮಾಣದ ನೀರು ಬಿಟ್ಟ ಹಿನ್ನೆಲೆ ಹಳ್ಳಕ್ಕೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ.

ಹಳ್ಳದಲ್ಲಿ ಸಿಲುಕಿಕೊಂಡಿದ್ದರು

ಹಳ್ಳದಲ್ಲಿ ಸಿಲುಕಿಕೊಂಡಿದ್ದರು

ಬೆಳಗಿನ ಜಾವ ಮಸ್ಕಿ ಪಟ್ಟಣದ ಬಳಿಯ ಹಳ್ಳದಲ್ಲಿ ನೀರು ಕಡಿಮೆ ಇರುವಾಗ ಬಹಿರ್ದಸೆಗೆ ಹೋಗಿದ್ದ ಇಬ್ಬರು ಯುವಕರು ಏಕಾಏಕಿ ನೀರು ಬಂದಿದ್ದರಿಂದ ವಾಪಸ್ಸು ಬರಲು ಆಗದೆ ಹಳ್ಳದಲ್ಲಿ ಸಿಲುಕಿಕೊಂಡಿದ್ದರು. ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕದಳ, ಪೊಲೀಸರು ಭೇಟಿ ಆಗಮಿಸಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ. ಆದರೆ ಹಳ್ಳದಲ್ಲಿ ಕ್ಷಣಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಹಳ್ಳದ ಮಧ್ಯದಲ್ಲಿ ಸಿಲುಕಿರುವುದರಿಂದ ಯುವಕರನ್ನು ಹೊರತರಲು ಸಿಬ್ಬಂದಿ ಹರಸಾಹಸಪಟ್ಟರು.

ಕರ್ನಾಟಕದಲ್ಲಿ ಭಾನುವಾರ, ಸೋಮವಾರ ಭಾರಿ ಮಳೆ ಮುನ್ಸೂಚನೆಕರ್ನಾಟಕದಲ್ಲಿ ಭಾನುವಾರ, ಸೋಮವಾರ ಭಾರಿ ಮಳೆ ಮುನ್ಸೂಚನೆ

ಭಾನುವಾರ ಮತ್ತು ಸೋಮವಾರ ಭಾರಿ ಮಳೆಯಾಗಲಿದೆ

ಭಾನುವಾರ ಮತ್ತು ಸೋಮವಾರ ಭಾರಿ ಮಳೆಯಾಗಲಿದೆ

ರಕ್ಷಣಾ ಕಾರ್ಯದಲ್ಲಿ ಒಬ್ಬ ಯುವಕನನ್ನು ರಕ್ಷಿಸಲಾಗಿದ್ದು, ಇನ್ನೊಬ್ಬ ಯುವಕ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾನೆ. ರಾಜ್ಯದ ವಿವಿದೆಡೆ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಮತ್ತು ಸೋಮವಾರ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾಗ ಕುಸಿತದಿಂದಾಗಿ ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಮತ್ತು ಇತರ ಜಿಲ್ಲೆಗಳಲ್ಲಿ ಎರಡು ದಿನ ಮಳೆಯ ಮುನ್ಸೂಚನೆ ನೀಡಲಾಗಿದೆ.

ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಭಾನುವಾರ ಮತ್ತು ಸೋಮವಾರ ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಶನಿವಾರ ಸಂಜೆ 7.30ರ ಬಳಿಕ ಭಾರೀ ಮಳೆಯಾಗಿದೆ. ಇಂದು ಸಹ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮಳೆ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರುವಂತೆ ಸರ್ಕಾರ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ.

ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆ

ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆ

ಸೋಮವಾರ ಕರಾವಳಿ ಜಿಲ್ಲೆಗಳ ಜೊತೆ ಉತ್ತರ ಕರ್ನಾಟಕದ ಜಿಲ್ಲೆಗಳಾದ ರಾಯಚೂರು, ಗದಗ, ಕೊಪ್ಪಳ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಭಾನುವಾರ ಬೆಳಗ್ಗೆಯೂ ಮೋಡ ಕವಿದ ವಾತಾವರಣವಿದ್ದು, ತುಂತುತು ಮಳೆಯಾಗುತ್ತಿದೆ. ಧಾರವಾಡ ಜಿಲ್ಲೆಯ ನವಲಗುಂದದಲ್ಲಿ 130 ಮಿ.ಮೀ ಮಳೆಯಾಗಿದೆ.

Recommended Video

ಹಿಂದು ದೇವಸ್ಥಾನ ಹೊಡಿಯೋ ಅಂತ ಕೆಟ್ಟ ಮನಸ್ಸು ಯಾಕೆ?? | Oneindia Kannada

English summary
Due to heavy rains in northern Karnataka, a large volume of water has been released from the Muski taluk reservoir in Raichur district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X