• search
 • Live TV
ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಿಸಿಎಂ ಸ್ಥಾನ ಕೊಡದಿದ್ದರೆ ರಾಜೀನಾಮೆ: ಶ್ರೀರಾಮುಲು

|
   ರಾಜೀನಾಮೆ ಕೊಡ್ತಾರಾ ಬಿ.ಶ್ರೀರಾಮುಲು | SRI RAMULU | ONEINDIA KANNADA

   ರಾಯಚೂರು, ಡಿಸೆಂಬರ್ 26: ವಾಲ್ಮೀಕಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ, ನಾನು ಸೇರಿದಂತೆ ಸಮುದಾಯದ ಎಲ್ಲ ಶಾಸಕರು ರಾಜೀನಾಮೆ ನೀಡಲು ಸಿದ್ದವಿರುವುದಾಗಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

   ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು ಅವರು, ವಾಲ್ಮೀಕಿ ಸಮುದಾಯಕ್ಕೆ ಒಂದು ಡಿಸಿಎಂ ಹುದ್ದೆ ಕೊಡಲೇಬೇಕು, ಇಲ್ಲದಿದ್ದರೆ ವಾಲ್ಮೀಕಿ ಸಮುದಾಯದ ಸ್ವಾಮೀಜಿ ಹೇಳಿದ ಹಾಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ತಿಳಿಸಿದರು.

   ಮತ್ತೆ ಶ್ರೀರಾಮುಲು ವಿರುದ್ಧ ಗುಡುಗಿದ ಸಿದ್ದರಾಮಯ್ಯ

   ಉಪ ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಡಿಸಿಎಂ ಹುದ್ದೆಯನ್ನು ರಮೇಶ್ ಜಾರಕಿಹೊಳಿ ಸೇರಿದಂತೆ ಸಮುದಾಯದ ಯಾರಿಗಾದರೂ ಕೊಟ್ಟರೂ ಸ್ವಾಗತಿಸಿತ್ತೇನೆ. ನನಗೆ ನೀಡಬೇಕು ಅಂತೆನಿಲ್ಲ, ನನಗೆ ಡಿಸಿಎಂ ಹುದ್ದೆ ನೀಡಬೇಕು ಎಂಬುದು ಅಭಿಮಾನಿಗಳ, ಕಾರ್ಯಕರ್ತರ ಅಭಿಪ್ರಾಯವಾಗಿದೆ ಎಂದರು.

   ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ನನಗೆ ಡಿಸಿಎಂ ಹುದ್ದೆ ಸಿಗುತ್ತದೆ ಎಂದು ಅಂದುಕೊಂಡಿದ್ದರು, ಆದರೆ ಹೈಕಮಾಂಡ್ ಅಂತಿಮ ನಿರ್ಧಾರ ಮಾಡುತ್ತದೆ, ಯಾವುದೇ ಜವಾಬ್ದಾರಿ ಕೊಟ್ಟರೂ ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ಶ್ರೀರಾಮುಲು ಹೇಳಿದರು.

   English summary
   If the Valmiki community is not given a deputy chief minister position, all MLAs in the community will be ready to resign, Minister B. Sriramulu said.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X