ಮಾನ್ವಿಯಲ್ಲಿ ಅಕ್ರಮ ಮರಳು ಗಣಿಕಾರಿಕೆಗಿಲ್ಲ ಕಡಿವಾಣ, ಇದಕ್ಕೆ ಪ್ರಮುಖ ಕಾರಣ ಇಲ್ಲಿದೆ
ರಾಯಚೂರು, ಆಗಸ್ಟ್, 11: ಮಾನ್ವಿ ತಾಲೂಕಿನ ಬುರಾನಪುರ ಸಮೀಪ ಅಕ್ರಮವಾಗಿ ಮರಳು ಸಂಗ್ರಹಿಸಿದ ಸ್ಥಳಕ್ಕೆ ತೆರಳಿದ್ದ ಹಟ್ಟಿಚಿನ್ನದ ಗಣಿ ಸಿಬ್ಬಂದಿ ನೀಲಪ್ಪ ಎಂಬುವರ ಮೇಲೆ ಮರಳು ದಂಧೆಕೋರರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಘಟನೆ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದೆ.
2018ರ ಡಿಸೆಂಬರ್‌ನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ತಡೆಗೆ ಮುಂದಾಗಿದ್ದ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಅವರ ಮೇಲೆ ಮರಳು ತುಂಬಿದ ಲಾರಿ ಹರಿದು ಮೃತಪಟ್ಟಿದ್ದರು. ಇದೀಗ ಮತ್ತೆ ಹಲ್ಲೆ ನಡೆದಿರುವುದು ನೌಕರರು ಮರಳು ಗಣಿಗಾರಿಕೆ ನಿರ್ವಹಣೆ ಕರ್ತವ್ಯಕ್ಕೆ ಹಾಜರಾಗಲು ಹಿಂದೇಟು ಹಾಕುವಂತೆ ಮಾಡಿದೆ. ತಾಲೂಕಿನ ತುಂಗಭದ್ರ ನದಿ ಪಾತ್ರದಲ್ಲಿ ಕೆಲ ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆ ದಂಧೆಗೆ ಕಡಿವಾಣ ಇಲ್ಲದಂತಾಗಿದೆ.

ಸರ್ಕಾರ ಅಧಿಕೃತವಾಗಿ ಮರಳುಗಾರಿಕೆ ಹಾಗೂ ಸಂಗ್ರಹ ಘಟಕಗಳನ್ನು ಆರಂಭಿಸಿದ್ದರೂ ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳ ಮಧ್ಯೆ ಸಮನ್ವಯದ ಕೊರತೆ ಪ್ರಭಾವಿಗಳ ಒತ್ತಡ ಅಕ್ರಮ ಮರಳು ದಂಧೆಗೆ ಕಡಿವಾಣ ಬೀಳುತ್ತಿಲ್ಲ ಎಂಬುದು ಸ್ಥಳೀಯ ಸಂಘ ಸಂಸ್ಥೆಗಳ ಆರೋಪವಾಗಿದೆ. ಮಾನ್ವಿ ತಾಲೂಕಿನ ಉಮಳಿಪನ್ನೂರು, ಮದ್ಲಾಪೂರ, ಚೀಕಲಪರ್ವಿ ಹಾಗೂ ಯಡಿವಾಳ ಗ್ರಾಮಗಳಲ್ಲಿ ಒಟ್ಟು 5 ಮರಳು ಗಾಣಿಗಾರಿಕೆ ಘಟಕಗಳನ್ನು ಜಿಲ್ಲಾಡಳಿತ ಈ ಹಿಂದೆ ಗುರುತಿಸಿತ್ತು.
ಆದರೆ ಈಚೆಗೆ ರಾಜ್ಯ ಸರ್ಕಾರ ಚೀಕಲಪರ್ವಿ ಹಾಗೂ ಯಡಿವಾಳ ಗ್ರಾಮದ ಎರಡು ಘಟಕಗಳಲ್ಲಿ ಮಾತ್ರ ಮರಳು ಗಣಿಗಾರಿಕೆ ನಿರ್ವಹಣೆಯನ್ನು ಹಟ್ಟಿ ಚಿನ್ನದ ಗಣಿ ನಿಗಮಕ್ಕೆ ವಹಿಸಿತ್ತು. ಪ್ರತಿ ದಿನ ಸರ್ಕಾರಕ್ಕೆ ರಾಜಧನ (ರಾಯಲ್ಟಿ) ಪಾವತಿಸಿದ ನೂರಾರು ಲಾರಿ, ಟಿಪ್ಪರ್‌ಗಳಲ್ಲಿ ಮರಳು ಸಾಗಾಣಿಕೆಗೆ ಅವಕಾಶ ಕಲ್ಪಸಿದರೂ ವಿವಿಧೆಡೆ ಅಕ್ರಮವಾಗಿ ಮರಳು ಸಂಗ್ರಹ ಹಾಗೂ ಸಾಗಾಣಿಕೆ ಕಂಡುಬಂದಿದೆ.
ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾಗಳ ವ್ಯವಸ್ಥೆ ಇಲ್ಲದಿರುವುದು, ಹೆಚ್ಚಿನ ಸಂಖ್ಯೆಯ ತಪಾಸಣಾ ಸಿಬ್ಬಂದಿ ಕೊರತೆ ಹಾಗೂ ಅಧಿಕಾರಿಗಳ ಕಟ್ಟುನಿಟ್ಟಿನ ಕಾರ್ಯಚರಣೆಯ ವೈಪಲ್ಯವೇ ಅಕ್ರಮ ಮರಳು ದಂಧೆಗೆ ಕಾರಣವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಸಿಬ್ಬಂದಿ ಮೇಲೆ ಹಲ್ಲೆ ಘಟನೆ ನಂತರ ಯಡಿವಾಳ ಹಾಗೂ ಚೀಕಲಪರ್ವಿ ಗ್ರಾಮಗಳ ಮರಳು ಸಂಗ್ರಹ ಘಟಕ (ಸ್ಟಾಕ್ ಯಾರ್ಡ್)ಗಳಿಂದ ಮರಳು ಸಾಗಣೆಗೆ ಹಾಗೂ ಮರಳು ತುಂಬುವ ಕಾರ್ಯವನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ.
ಇತ್ತೀಚೆಗೆ ಕಲಬುರಗಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ನಡೆಸಲು ಹೋಗಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಿದ್ದ ಘಟನೆ ಮಾಸುವ ಮುನ್ನವೇ, ರಾಯಚೂರಿನಲ್ಲಿ ಅಂಥದ್ದೇ ಘಟನೆ ನಡೆದಿದೆ. ತುಂಗಭದ್ರಾ ನದಿ ತೀರದ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ನಡೆಸಿ, ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ತೆಗೆದುಕೊಂಡು ಹೋಗುತ್ತಿದ್ದ ರಕ್ಷಣಾ ಪಡೆ ಸಿಬ್ಬಂದಿಯ ಮೇಲೆ ಕಿರಾತಕರು ಹಲ್ಲೆ ನಡೆಸಿದ್ದಾರೆ. ಮಾನ್ವಿ ತಾಲೂಕಿನ ಬೂರನಾಪುರ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ.
ರಕ್ಷಣಾ ಪಡೆಯಲ್ಲಿದ್ದ ಮಾಜಿ ಯೋಧ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ರಕ್ಷಣಾ ಪಡೆಯ ಸಿಬ್ಬಂದಿ ನೀಲಪ್ಪ ಎನ್ನುವರ ಮೇಲೆ ಕಬ್ಬಿಣದ ಜಾಕ್‌ನಿಂದ 6 ಜನ ಗುಂಪು ಹಲ್ಲೆ ನಡೆಸಿದೆ. ಈ ಕುರಿತಂತೆ ದೂರು ದಾಖಲಿಸಲಾಗಿದೆ.
ಸಿಬ್ಬಂದಿ ಮೇಲೆ ಅಕ್ರಮ ಮರಳು ದಂಧೆಕೋರರಿಂದ ನಡೆದ ಹಲ್ಲೆ ಘಟನೆಯ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ತಹಶೀಲ್ದಾರ್ ರಾಜು ಫಿರಂಗಿ ಹೇಳಿದರು. ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಕಂದಾಯ, ಗಣಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಮನ್ವಯ ಕಂಡುಕೊಳ್ಳಬೇಕು. ಜೊತೆಗೆ ಕಟ್ಟುನಿಟ್ಟಿನ ಕಾರ್ಯಾಚರಣೆ ಅಗತ್ಯ ಎಂದು ಮಾನ್ವಿ ಜನಶಕ್ತಿ ಕೇಂದ್ರದ ಅಧ್ಯಕ್ಷ ಪ್ರಭುರಾಜ ಕೊಡ್ಲಿ ಹೇಳಿದರು.
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications