Ramadan 2023:ಪವಿತ್ರ ರಂಜಾನ್ ಹಬ್ಬದ ಆಚರಣೆ ಹೇಗೆ ಮತ್ತು ಯಾಕೆ..?
ರಾಯಚೂರು, ಏಪ್ರಿಲ್ 22: ಮುಸ್ಲಿಮರ ಪವಿತ್ರ ಮಾಸ ರಂಜಾನ್ ಶುಕ್ರವಾರ ಮುಗಿದಿದ್ದು, ಶನಿವಾರ ಶವ್ವಲ್ ಮೊದಲನೇ ದಿನದಂದು ಈದ್-ಉಲ್- ಫಿತರ್ (ರಂಜಾನ್) ಹಬ್ಬ ಆಚರಿಸಲು ಸಜ್ಜಾಗಿದ್ದಾರೆ.
ರಂಜಾನ್ ಹಬ್ಬದ ಸಂಪ್ರದಾಯದಂತೆ ಒಂದು ತಿಂಗಳ ಕಾಲ ಮುಸ್ಲಿಮರು ಉಪವಾಸ ವೃತ ಆಚರಿಸಿದ್ದಾರೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅನ್ನ, ನೀರು ಬಿಟ್ಟು ಉಪವಾಸ ವೃತ ಆಚರಿಸುತ್ತಾರೆ. ಉಪವಾಸ (ರೋಜಾ) ಮಾತ್ರವಲ್ಲದೇ ದಾನ ( ಝಕಾತ್) ನಮಾಜ್, ಕುರಾನ್ ಪಠನ, ತರಾವೀಹ್ ಮಾಡುವ ಮೂಲಕ ದೇವರನ್ನು ( ಅಲ್ಲಾಹ್ ನನ್ನು) ಸ್ಮೃತಿಸಲಾಗುತ್ತದೆ.

ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ, ಇದು ಒಂಬತ್ತನೇ ತಿಂಗಳು. ಲೂನಾರ್ ಕ್ಯಾಲೆಂಡರ್ ಅನ್ನು ಇಸ್ಲಾಂ ಧರ್ಮದವರು ಅನುಸರಿಸುತ್ತಾರೆ. ಕಾರಣ, ಅದರಲ್ಲಿ ರಂಜಾನ್ ದಿನಾಂಕ ಬದಲಾಗುತ್ತಿರುತ್ತದೆ. ಈ ಆಚರಣೆಯ ನಂಬಿಕೆಯಂತೆ, ಅಲ್ಲಾನೊಂದಿಗಿನ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು, ಉಪವಾಸ ಎಂಬುದು ಆತ್ಮಸ್ಥೈರ್ಯ ಹೆಚ್ಚಿಸಲು, ಹಸಿವಿನ ಮಹತ್ವ ಮತ್ತು ಅದೃಷ್ಟ ಸಂಪಾದನೆ ಮಾಡಲು ಶ್ರದ್ಧೆಯಿಂದ ಉಪವಾಸವನ್ನು ಆಚರಿಸುತ್ತಾರೆ.
ತಿಂಗಳ ಪ್ರತಿಯೊಂದು ದಿನ ಮುಸ್ಲಿಮರು, ಈ ಹಬ್ಬದ ಆಚರಣೆ ಮೂಲಕ ಅಲ್ಲಾನಲ್ಲಿ ನಂಬಿಕೆ ಇಟ್ಟುಕೊಳ್ಳುತ್ತಾರೆ. ಪ್ರಾರ್ಥನೆ, ಕುರಾನ್ ಪಠಣ ಮತ್ತು ದಾನ-ಧರ್ಮದಲ್ಲಿ ತೊಡಗುವುದು ಮಾತ್ರವಲ್ಲದೇ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ತಮ್ಮ ಒಡನಾಟವನ್ನು ಇನ್ನಷ್ಟು ಗಟ್ಟಿಯಾಗಿಸುತ್ತಾರೆ.

ಸೂರ್ಯೋದಯದಕ್ಕಿಂತ ಮುಂಚೆ ಕುಟುಂಬ ಸದಸ್ಯರೊಂದಿಗೆ ಸೇವಿಸುವ ಆಹಾರ ವೇಳೆ ( ಸಹಿರಿ) ಹಾಗೂ ಸೂರ್ಯಾಸ್ತದ ವೇಳೆ ಉಪವಾಸ ಮುರಿಯುವ ವೇಳೆ (ಇಫ್ತಾರ್) ಉಪವಾಸದ ಪ್ರಮುಖ ಸಮಯ ಈಫ್ತಿಯಾರ್ ವೇಳೆಯಲ್ಲಿ ಎಲ್ಲರೂ ಒಂದೇ ಕಡೆ ಸೇರಿ ಮಸೀದಿಗಳಲ್ಲಿ, ಕೆಲವರು ಮನೆಗಳಲ್ಲಿ ಸೇರಿ ಖರ್ಜೂರ, ಬಾಳೆ ಹಣ್ಣು, ಕಲ್ಲಂಗಡಿ ಸೇರಿದಂತೆ ಎಲ್ಲಾ ಬಗೆಯ ಹಣ್ಣು- ಹಂಪಲು ತಂದು ಒಂದೆಡೆ ಸೇರಿಸಿ ಸಾಮೂಹಿಕವಾಗಿ ಸೇವಿಸುವ ಮೂಲಕ ಉಪವಾಸ ವೃತ ಮುಗಿಸುತ್ತಾರೆ. ಆ ಮೂಲಕ ಬಡವ, ಶ್ರೀಮಂತ ಉನ್ನತ, ಕನಿಷ್ಟ ಎಂಬ ಬೇಧಬಾವ ಮರೆತು ಮಾನವಿಯತೆ ಮೆರೆಯುವ ಮೂಲಕ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುತ್ತಾರೆ.
ರಂಜಾನ್ ನ ಕೊನೆಯ ಹತ್ತು ದಿನಗಳಲ್ಲಿ ಪ್ರವಾದಿ ಮೊಹಮ್ಮದ್‌ರನ್ನು ಕುರಾನ್ ಮೂಲಕ ನೆನಪಿಸಿಕೊಳ್ಳುವುದು ಎಂಬ ನಂಬಿಕೆ ಇದೆ. ಈ ಅವಧಿಯಲ್ಲಿ ಮುಸ್ಲಿಮರು ಮಸೀದಿಯಲ್ಲೇ ತಂಗುವುದು ಅಥವಾ ಮಲಗುತ್ತಾರೆ. ಈ ಮೂಲಕ ಧಾರ್ಮಿಕ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಾರೆ.
ಸದ್ಕೆ ಫಿತ್ರ್ ಎಂದರೇನು?
ಮುಸ್ಲಿಮರು ಆಸ್ತಿ ಒಳ್ಳವರು ಸದ್ಕೆ ಫಿತರ್ ಅಂದರೆ ಮುಸ್ಲಿಮರು ಕುಟುಂಬದ ಪ್ರತಿ ಸದಸ್ಯರು ತಲಾ 2 ಕೆಜಿ ಗೋಧಿ ಅಥವಾ ಅಕ್ಕಿ ಇತರೆ ಧಾನ್ಯವನ್ನು ಒಟ್ಟು ಕುಟುಂಬ ಸದಸ್ಯರ ಲೆಕ್ಕದಲ್ಲಿ ತಲಾ 2 ಕೆಜಿ ದಾನ ಮಾಡಬೇಕು. ಇದು ಈದ್ ಉಲ್ ಫಿತರ್ ನಮಾಜ್ ಮಾಡುವ ಮುನ್ನ ಕಡ್ಡಾಯವಾಗಿ ನೀಡಬೇಕು. ಇಸ್ಲಾಂನಲ್ಲಿ ಬಡ, ನಿರ್ಗತಿಕರಿಗೆ ಸಹಾಯ ಮಾಡಲು ಕಡ್ಡಾಯವಾಗಿ ಈ ನಿಯಮ ರೂಪಿಸಲಾಗಿದೆ ಎಂದು ಮುಸ್ಲಿಂ ಧರ್ಮಗುರು ಶೇಖ್ ಫಾರೂಕ್ ಮೌಲಾನಾ ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications