ರಾಯಚೂರಿನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ, ಪ್ರತಿಭಟನೆ

Posted By:
Subscribe to Oneindia Kannada

ರಾಯಚೂರು, ಜನವರಿ 01: ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಹಟ್ಟಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಹಾಳು ಮಾಡಿ ಅಪಮಾನ ಎಸಗಿದ್ದರಿಂದ ಕುಪಿತಗೊಂಡಿರುವ ಗ್ರಾಮದ ಜನ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ್ದಾರೆ.

ಹಟ್ಟಿ ಗ್ರಾಮದ ಪಾಮನಕಲ್ಲೂರು ಕ್ರಾಸ್ ಬಳಿ ಹಾಕಲಾಗಿದ್ದ ಅಂಬೇಡ್ಕರ್ ಅವರ ಭಾವ ಚಿತತ್ರವುಳ್ಳ ಬೋರ್ಡ್‌ ಅನ್ನು ಕಿಡಿಗೇಡಿಗಳು ಮುರಿದಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಈ ರೀತಿಯ ಘಟನೆ ಇತ್ತೀಚೆಗೆ ಎರಡನೇ ಬಾರಿ ಆಗುತ್ತಿದೆ.

Insult to Ambedkar Photo, Protest from Daliths

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳ ಸದಸ್ಯರು ರಸ್ತೆ ತಡೆ ನಡೆಸಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದಾರೆ. ಸ್ಥಳದಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಶಾಂತಗೊಳಿಸಿದ್ದಾರೆ.

Insult to Ambedkar Photo, Protest from Daliths

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಎಸಗಿದವರನ್ನು ಕೂಡಲೇ ಬಂಧಿಸಬೇಕು ಎಂದು ದಲಿತಪರ ಸಂಘಟನೆಗಳ ಸದಸ್ಯರು ಆಗ್ರಹಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In Raichur's Hatti village some one broke Ambedkar Photo Dalit organizations protesting in demand of arrest the culprits.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ