ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರಿನಲ್ಲಿ ವಿದ್ಯಾರ್ಥಿಗಳಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

By ರಾಯಚೂರು ಪ್ರತಿನಿಧಿ
|
Google Oneindia Kannada News

Recommended Video

Kargil Vijay Diwas : ರಾಯಚೂರಿನಲ್ಲಿ ವಿದ್ಯಾರ್ಥಿಗಳಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ರಾಯಚೂರು, ಜುಲೈ.26: ಕಾರ್ಗಿಲ್ ವಿಜಯ ದಿನವನ್ನು ಬಸವಶ್ರೀ ವಿದ್ಯಾ ಸಂಸ್ಥೆಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಬಸವಶ್ರೀ ಶಾಲೆಯ ಮಕ್ಕಳು ವಿಜಯದ ಸಂಕೇತವಾಗಿ ಜಾಥಾ ಹಮ್ಮಿಕೊಂಡಿದ್ದರು.

ಜಿಲ್ಲಾ ಕ್ರೀಡಾಂಗಣದ ಬಳಿ ಮಹತ್ಮಾಗಾಂಧಿ ಪ್ರತಿಮೆ ಎದುರು ದೇಶಭಕ್ತಿಯ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಇದೇ ವೇಳೆ ನಿವೃತ್ತ ಸೈನಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ವಿಜಯ್ ದಿವಸ್: ಕಾರ್ಗಿಲ್ ಯುದ್ಧದ ಆ ರೋಚಕ ಕ್ಷಣಕ್ಕೆ 19 ವರ್ಷವಿಜಯ್ ದಿವಸ್: ಕಾರ್ಗಿಲ್ ಯುದ್ಧದ ಆ ರೋಚಕ ಕ್ಷಣಕ್ಕೆ 19 ವರ್ಷ

ನಗರದ ವಿವಿಧೆಡೆ ವಿದ್ಯಾರ್ಥಿಗಳು ಜಾಥಾ ನಡೆಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಸನ್ಮಾನಿತ ಮಾಜಿ ಸೈನಿಕರು, ಕಾರ್ಗಿಲ್ ಯುದ್ಧದ ಸಂದರ್ಭ, ಯುದ್ಧದಲ್ಲಿ ದೇಶ ಗೆಲ್ಲಲೇಬೇಕಾದ ವಾತಾವರಣದ ಬಗ್ಗೆ, ಸೈನಿಕರ ಉತ್ಸಾಹ ಕುರಿತು ಹೇಳಿದರು. ಜೊತೆಗೆ ಇಂದಿನ ವಿದ್ಯಾರ್ಥಿಗಳು, ಯುವಜನರು ದೇಶ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

Kargil Vijay Diwas was celebrated by students in Raichur

ದೇಶಾದ್ಯಂತ ಇಂದು ಕಾರ್ಗಿಲ್ ವಿಜಯೋತ್ಸವ ಆಚರಿಸಲಾಗುತ್ತಿದ್ದು, ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಭಾರತೀಯರು ಗೌರವ ಸಲ್ಲಿಸುತ್ತಿದ್ದಾರೆ. ಜುಲೈ 26 ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ.

ಕಾರ್ಗಿಲ್ ಯುದ್ಧ: ಅನುಜ್ ಎಂಬ ವೀರ ಯೋಧನ ರೋಮಾಂಚನಕಾರಿ ಸಾಹಸಗಾಥೆಕಾರ್ಗಿಲ್ ಯುದ್ಧ: ಅನುಜ್ ಎಂಬ ವೀರ ಯೋಧನ ರೋಮಾಂಚನಕಾರಿ ಸಾಹಸಗಾಥೆ

ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ ಕಾರ್ಗಿಲ್ ವಿಜಯ್ ದಿವಸ್' ಆಚರಣೆ ಮಾಡಲಾಗುತ್ತಿದೆ.

English summary
Kargil Vijay Diwas was celebrated by students in Raichur. Children of Basavashree's school had organized Jatha as a symbol of victory.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X