Devadurga Constituency: ಗೆಲುವಿಗಾಗಿ ಪೈಪೋಟಿ, ಬಿಜೆಪಿ ಸೋಲಿಸಲು ಕೈ-ದಳ ರಣತಂತ್ರ; ಗೆಲ್ಲೋರ್ಯಾರು?
ಸದ್ಯ ಬಿಜೆಪಿ ಶಾಸಕರಿರುವ ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರದಲ್ಲಿ ಈ ಬಾರೀ ಬಿಜೆಪಿ ಸೋಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ಲಾನ್ ನಡೆಸಿದೆ. ವರದಿ, ವಿಶ್ಲೇಷಣೆ ಓದಿ
ರಾಯಚೂರು ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರವೂ ಎಸ್ ಟಿ ಮೀಸಲು ಕ್ಷೇತ್ರವಾಗಿದೆ. ಈ ಕ್ಷೇತ್ರವೂ ಮೊದಲಿನಿಂದ ಕಾಂಗ್ರೆಸ್ ನ ಭದ್ರಕೋಟೆ ಆಗಿತ್ತು. ಆದರೆ ದಿನೇ ದಿನ ಬದಲಾದ ರಾಜಕೀಯ ಬೆಳವಣಿಗೆಯಿಂದ ಇಡೀ ಕ್ಷೇತ್ರದ ಚಿತ್ರಣವೇ ಬದಲಾಗಿದೆ. ಅತೀ ಹಿಂದುಳಿದ ತಾಲೂಕಾ ಎಂಬ ಹಣೆಪಟ್ಟಿ ಹೊತ್ತಿರುವ ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಬಡತನ, ಅನಕ್ಷರತೆ, ಅಪೌಷ್ಟಿಕತೆ, ಬಾಲ ಕಾರ್ಮಿಕ ಪದ್ಧತಿ, ಗೂಳೆ ಹೋಗುವುದು ಸಮಸ್ಯೆ ಬಹುದೊಡ್ಡ ಮಟ್ಟದಲ್ಲಿದೆ.
2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ವೆಂಕಟೇಶ ನಾಯಕ ಅವರು ಶಾಸಕರಾಗಿ ಆಯ್ಕೆಯಾದರು. ಆದರೆ, 2015ರಲ್ಲಿ ನಡೆದ ರೈಲು ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದರು.ನಂತರ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುಕಂಡಿತು.ವೆಂಕಟೇಶ ನಾಯಕರ ಮೊಮ್ಮಗ ಶಿವನಗೌಡ ನಾಯಕ ಉಪ ಚುನಾವಣೆಯಲ್ಲಿ ಬಿಜೆಪಿಗೆ ಕ್ಷೇತ್ರವನ್ನು ಗೆದ್ದುಕೊಟ್ಟರು.

2013ರ ಚುನಾವಣೆಯಲ್ಲಿ ಬಿಜೆಪಿಯ ಶಿವನಗೌಡ ನಾಯಕ 58,370 ಮತ ಪಡೆದಿದ್ದರು. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. 2016ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಕೆ.ಶಿವನಗೌಡ ನಾಯಕ 72,647 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ನ ಎ.ರಾಜಶೇಖರ ನಾಯಕ 55,776 ಮತ, ಜೆಡಿಎಸ್‌ನ ಕರೆಮ್ಮ ನಾಯಕ 9,156 ಮತಗಳನ್ನು ಪಡೆದಿದ್ದಾರೆ.
2018 ರಲ್ಲಿ ಭಾರತೀಯ ಜನತಾ ಪಾರ್ಟಿ ಯ ಶಿವನಗೌಡ ನಾಯಕ ಗೆಲುವು ಸಾಧಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ಯ ರಾಜಶೇಖರ ನಾಯಕ 21045 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.

ಈ ಬಾರೀ ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಮಧ್ಯೆ ಈ ಸಲ ಶ್ರೀಕೋನ ಸ್ಪರ್ಧೆ ಏರ್ಪಡಲಿದೆ. ಬಿಜೆಪಿಯ ಹಾಲಿ ಶಾಸಕ ಕೆ.ಶಿವನಗೌಡ ನಾಯಕರೇ ಈ ಬಾರೀಯೂ ಅಭ್ಯರ್ಥಿ ಆಗಲಿದ್ದು, ಜೆಡಿಎಸ್ ಈಗಾಗಲೇ ತನ್ನ ಅಧಿಕೃತ ಅಭ್ಯರ್ಥಿ ಕೆ. ಕರೆಮ್ಮ ಜಿ. ನಾಯಕ ಹೆಸರನ್ನ ಘೋಷಣೆ ಮಾಡಿದೆ.
ಇತ್ತ ಕಾಂಗ್ರೆಸ್‌ನಲ್ಲಿ ಇನ್ನೂ ಅಭ್ಯರ್ಥಿಯ ಘೋಷಣೆ ಆಗಿಲ್ಲ. ಆದ್ರೂ ಸಹ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ವಿ.ನಾಯಕರೇ ಅಭ್ಯರ್ಥಿ ಎಂದು ಹೇಳಲಾಗುತ್ತಿದ್ದರೂ, ಅವರಿಗಿಂತ ಬಿ.ವಿ.ನಾಯಕ ಅವರ ತಮ್ಮ ನ ಹೆಂಡತಿ ಶ್ರೀದೇವಿ ಆರ್.ರಾಜಶೇಖರ ನಾಯಕರೇ ಅಬ್ಬರದ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ. ಈ ಗೊಂದಲದ ನಡುವೆಯೇ ಶ್ರೀದೇವಿ ನಾಯಕ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಾ ಮತಬೇಟೆ ಶುರು ಮಾಡಿದ್ದಾರೆ.
ಒಂದು ಕಾಲದಲ್ಲಿ ದೇವದುರ್ಗ ರಾಜಕೀಯ ಅಂದ್ರೆ ಅರಕೇರಾ ಕುಟುಂಬಕ್ಕೆ ಮೀಸಲಾದ ಕ್ಷೇತ್ರವಾಗಿತ್ತು. ಕಳೆದ 2008ರಿಂದ ಎಸ್ ಟಿ ಮೀಸಲು ಕ್ಷೇತ್ರವಾಗಿದ್ದ ಬಳಿಕ ಈವರೆಗೆ ಅರಕೇರಾ ಕುಟುಂಬದವರೇ ರಾಜಕೀಯ ಮಾಡಿದ್ರು. ಆದ್ರೆ 2023ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕರೆಮ್ಮ ಜಿ.ನಾಯಕ ಅರಕೇರಾ ಕುಟುಂಬ ರಾಜಕೀಯಕ್ಕೆ ಟಕ್ಕರ್ ನೀಡಲು ಸಜ್ಜಾದಂತೆ ಕ್ಷೇತ್ರದಲ್ಲಿ ಗೋಚರಿಸುತ್ತಿದೆ.
ಈಗಾಗಲೇ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಪಂಚರತ್ನ ಯಾತ್ರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕರೆಮ್ಮ ಜಿ. ನಾಯಕ ತನ್ನ ಬಲ ಪ್ರದರ್ಶನ ಮಾಡಿದ್ರು. ಕ್ಷೇತ್ರದ ಜನರು ಸಹ ಕರೆಮ್ಮ ಪರವು ಒಲವು ತೋರಿಸಲು ಶುರು ಮಾಡಿದ್ದಾರೆ. ಜೆಡಿಎಸ್ ಪಕ್ಷವೂ ದೇವದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್ ಕರಮ್ಮಗೆ ಘೋಷಣೆ ಮಾಡಿದ ಬಳಿಕ ಕರೆಮ್ಮ ತನ್ನ ಗೆಲುವಿಗಾಗಿ ದೇವದುರ್ಗ ಕ್ಷೇತ್ರದಲ್ಲಿ ಭರ್ಜರಿ ಓಡಾಟ ನಡೆಸಿದ್ದಾರೆ.
ಇನ್ನೂ ದೇವದುರ್ಗ ಕ್ಷೇತ್ರದಲ್ಲಿ ಮೇಲ್ನೋಟಕ್ಕೆ ಕಾಂಗ್ರೆಸ್, ಜೆಡಿ ಎಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಕಂಡು ಬರುತ್ತಿದೆ. ಆದ್ರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುವುದು ತಿಳಿಯದೇ ಇರುವುದರಿಂದ ಬಿಜೆಪಿ ಮತ್ತು ಜೆಡಿಎಸ್ ಮಧ್ಯೆ ನೇರ ಹಣಾಹಣಿ ನಡೆಯಲಿದೆ ಎಂದು ಹೇಳಲಾಗಿದೆ.
ಇತ್ತ ದೇವದುರ್ಗದ ಬಿಜೆಪಿ ಹಾಲಿ ಶಾಸಕ ಕೆ. ಶಿವನಗೌಡ ನಾಯಕ, ಈವರೆಗೆ ಎರಡು ಸಾರ್ವಜನಿಕ ಚುನಾವಣೆ ಹಾಗೂ ಎರಡು ಉಪ ಚುನಾವಣೆ ಸೇರಿ ಒಟ್ಟು ನಾಲ್ಕು ಬಾರಿ ಗೆದ್ದು ಶಾಸಕರಾಗಿ ಆಯ್ಕೆ ಆಗಿದ್ದಾರೆ. ದೇವದುರ್ಗ ಕ್ಷೇತ್ರದ ಮತದಾರರ ನಾಡಿ ಮಿಡಿತ ಶಾಸಕ ಕೆ.ಶಿವನಗೌಡ ನಾಯಕ ಅರಿತಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇವದುರ್ಗ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕರೆಮ್ಮ. ಜಿ.ನಾಯಕರಿಗೆ ಹೋದೆಲ್ಲೆಲ್ಲಾ ಅನುಕಂಪದ ಅಲೆ ಜೊತೆಗೆ ಉತ್ತಮ ಸ್ಪಂದನೆ ಸಿಗುತ್ತಿದೆ.
ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ವಿ.ನಾಯಕ, ರಾಜಶೇಖರ ನಾಯಕ, ಶ್ರೀದೇವಿ ನಾಯಕ, ರವಿಪಾಟೀಲ್ ಈ ಬಾರಿ ಚುನಾವಣೆಗೆ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದು, ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲಿ ಬಾರಿ ಪೈಪೋಟಿ ಏರ್ಪಟ್ಟಿದೆ. ಸದ್ಯ ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತ ನಡೆಸುತ್ತಿರುವ ಶಿವನಗೌಡ ನಾಯಕ ಮತ್ತೆ ಅಧಿಕಾರಕ್ಕೇರುವ ನಿರೀಕ್ಷೆಯಲ್ಲಿದ್ದು, ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇನ್ನು ಜೆಡಿಎಸ್ ಪಕ್ಷದಿಂದ ಕರೆಮ್ಮ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಈ ಕ್ಷೇತ್ರದಲ್ಲಿ ಒಟ್ಟು ಮತದಾರರು 2,27,826 ಜನರು ಇದ್ದು, ಅದರಲ್ಲಿ 1,15,696 ಮಹಿಳಾ ಮತದಾರರು ಇದ್ರೆ, 1, 12, 101 ಪುರುಷ ಮತದಾರರು ಇದ್ದಾರೆ, ಇನ್ನುಳಿದ 26 ಇತರೆ ಮತದಾರರಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications