Maski Constituency: ಗೆಲುವಿಗಾಗಿ ಪೈಪೋಟಿ; ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಜಟಾಪಟಿ; ಗೆಲ್ಲುವವರಾರು?
ಸದ್ಯ ಕಾಂಗ್ರೆಸ್ ಶಾಸಕರಿರುವ ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದಲ್ಲಿ ಈ ಬಾರೀ ಕಾಂಗ್ರೆಸ್ ಸೋಲಿಸಲು ಬಿಜೆಪಿ ಭರ್ಜರಿಗೆ ಮಾಸ್ಟರ್ ಪ್ಲಾನ್ ನಡೆಸಿದೆ. ವರದಿ, ವಿಶ್ಲೇಷಣೆ ಓದಿ
ಮೌರ್ಯ ವಂಶದ ಚಕ್ರವರ್ತಿ ಅಶೋಕನ ಶಿಲಾ ಶಾಸನ ಹೊಂದಿದ ಮಸ್ಕಿ ಐತಿಹಾಸಿಕ ಹಾಗೂ ಧಾರ್ಮಿಕ ಕ್ಷೇತ್ರವಾಗಿ ಗುರುತಿಸಿಕೊಂಡಿರುವ ಮಾಸಂಗಿಪುರ ಇಂದಿನ ಮಸ್ಕಿ. ದೇವನಾಂಪಿಯನ ಅಶೋಕನ (ದೇವನಾಂಪ್ರಿಯ ಅಶೋಕ) ಎಂಬ ಶಾಸನವನ್ನು 1915ರಲ್ಲಿ ಗಣಿ ಎಂಜಿನಿಯರ್ ಆಗಿದ್ದ ಸಿ. ಬಿಡನ್ ಎಂಬುವರು ಈ ಶಾಸನವನ್ನು ಗುರುತಿಸಿದ್ದಾರೆ.
ಇನ್ನು ಐತಿಹಾಸಿಕ ಹಾಗೂ ಧಾರ್ಮಿಕವಾಗಿ ಮಾತ್ರವಲ್ಲದೇ ರಾಜಕೀಯವಾಗಿಯೂ ಮಸ್ಕಿ ವಿಧಾನಸಭಾ ಕ್ಷೇತ್ರ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಜಟಾಪಟಿ ಸ್ಪರ್ಧೆಗೆ ಸಾಕ್ಷಿಯಾಗಲಿದೆ.
2008 ರಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರ ಮಸ್ಕಿ. ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ನಡೆಯುವುದಕ್ಕೆ ಮಸ್ಕಿ ಆಖಾಡ ಸಿದ್ದವಾಗಿದ್ದು, ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಉಪಚುನಾವಣೆಯಲ್ಲಿ ಸೋಲನುಭವಿಸಿರುವ ಪ್ರತಾಪಗೌಡ ಪಾಟೀಲ್ ಮಸ್ಕಿಯಲ್ಲಿ ಗೆಲ್ಲಲೇಬೇಕು ಎನ್ನುವ ಪಟ್ಟು ತೊಟ್ಟಿದ್ದಾರೆ.

ಬಿಜೆಪಿಯಿಂದ 2008ರಲ್ಲಿ ಶಾಸಕರಾಗಿ ಆಯ್ಕೆಯಾಗಿ ರಾಜಕೀಯ ಪ್ರವೇಶ ಪಡೆದಿರುವ ಪ್ರತಾಪಗೌಡ ಅವರು ಅನಂತರ ಸತತ ಎರಡು ಅವಧಿ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಬಿಜೆಪಿಯಿಂದ ಅಂದು ಸ್ಪರ್ಧಿಸಿದ್ದ ಬಸನಗೌಡ ತುರ್ವಿಹಾಳ ಈಗ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದ ಪ್ರತಾಪಗೌಡ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದು, ಇಬ್ಬರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಪಕ್ಷಗಳನ್ನು ಅದಲಿಬದಲಿ ಮಾಡುವುದು ಪುನಾವರ್ತನೆ ಆಗಿದ್ದರಿಂದ ಉಪಚುನಾವಣೆಯಲ್ಲಿ ಕ್ಷೇತ್ರದ ಶಾಸಕರನ್ನು ಜನರೇ ಬದಲಾಯಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಜಾತಿವಾರು ಮತಗಳನ್ನು ಸೆಳೆಯಲು ಕಾರ್ಯತಂತ್ರ ರೂಪಿಸಿದ್ದಾರೆ. 2018 ರಲ್ಲಿ ಕೇವಲ 213 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ ಪ್ರತಾಪಗೌಡ ಪಾಟೀಲರಿಗೆ ಮಸ್ಕಿ ಕ್ಷೇತ್ರದಲ್ಲಿಯ ಲಿಂಗಾಯತ್ ರು ಬಿಜೆಪಿಗೆ ಬೆಂಬಲಿಸುತ್ತಾರೆ ಎನ್ನುವುದು ತಿಳಿದಿದ್ದ, ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ವೇಳೆ ಬಿಜೆಪಿಗೆ ಸೇರಿದ್ದ ಪ್ರತಾಪಗೌಡ ಪಾಟೀಲ್ ಉಪಚುನಾವಣೆಯಲ್ಲಿ ಸೋಲನ್ನ ಅನುಭವಿಸಿದರು.

ಇನ್ನೂ ಸಚಿವ ಸ್ಥಾನದ ಆಕಾಂಕ್ಷೆಯಲ್ಲಿದ್ದ ಪ್ರತಾಪಗೌಡ ಸೋಲು ಕಂಡರೂ ಜನಸಂಪರ್ಕದಿಂದ ದೂರವಾಗಿಲ್ಲ. ಆಡಳಿತದಲ್ಲಿ ಬಿಜೆಪಿ ಇರುವುದರಿಂದ ತಮ್ಮದೇ ಆದ ಪರಿಮಿತಿಯಲ್ಲಿ ಕ್ಷೇತ್ರದಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಾ ಬಂದಿದ್ದಾರೆ. ಸರ್ಕಾರದಲ್ಲಿ ಯಾವುದೇ ಸ್ಥಾನಮಾನ ಕೂಡಾ ದೊರೆಯಲಿಲ್ಲ. ಇದನ್ನು ಸರಿಪಡಿಸುವುದಕ್ಕಾಗಿ 2023 ರ ಚುನಾವಣೆಯಲ್ಲೂ ಪ್ರತಾಪಗೌಡ ಅವರನ್ನೇ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸುತ್ತದೆ ಎಂದು ನಿರೀಕ್ಷಿಸಲಾಗುತ್ತಿದೆ.
ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಬಸನಗೌಡ ತುರ್ವಿಹಾಳ ಅವರು ಈಗಾಗಲೇ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದು, ಅವರಿಗೆ ಟಿಕೆಟ್ ಖಚಿತ. ಕ್ಷೇತ್ರದಲ್ಲಿ ಜನ ಬೆಂಬಲ ಯಾಚಿಸುವ ಕಾರ್ಯ ಈಗಾಗಲೇ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಲಭ್ಯವಿರುವ ಅನುದಾನ ಬಳಸಿಕೊಂಡು ಅಭಿವೃದ್ಧಿ ಕಾರ್ಯ ಮಾಡಿರುವುದು ಶ್ರೀರಕ್ಷೆಯಾಗಲಿದೆ ಎನ್ನುವ ವಿಶ್ವಾಸಲ್ಲಿದ್ದಾರೆ.

ಇನ್ನೂ ರಾಯಚೂರು ಜಿಲ್ಲೆಯಲ್ಲಿ ಹಿಡಿತ ಸಾಧಿಸಲು ಮುಂದಾಗಿರುವ ಜೆಡಿಎಸ್ ಪಕ್ಷವು ಅಭ್ಯರ್ಥಿಯ ಹುಡುಕಾಟದಲ್ಲಿದೆ. ಈ ಕ್ಷೇತ್ರವು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವುದರಿಂದ ಹೊರಜಿಲ್ಲೆಗಳಿಂದಲೂ ಪ್ರಭಾವಿಗಳು ಸ್ಪರ್ಧಿಸಲು ಮುಂದೆ ಬರುವ ಸಾಧ್ಯತೆಯೂ ಇದೆ. ಇನ್ನೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನರೆಡ್ಡಿ ಅವರು ಮಸ್ಕಿ ಕ್ಷೇತ್ರದಲ್ಲಿ ಸಕ್ರಿಯತೆ ತೋರಿಸುತ್ತಿದ್ದಾರೆ.
ಜನಾರ್ದನ ರೆಡ್ಡಿ ಈಗಾಗಲೇ ವಿವಿಧ ಸಮುದಾಯಗಳ ಮುಖಂಡರ ಸಭೆ ಮಾಡಿ, ಅಭ್ಯರ್ಥಿಯೊಬ್ಬನನ್ನು ಚುನಾವಣೆ ಕಣಕ್ಕೆ ಇಳಿಸಲಾಗುವುದು ಎಂದು ಘೋಷಿಸಿದ್ದಾರೆ. ಆದರೆ, ಅಭ್ಯರ್ಥಿ ಯಾರು ಎಂಬುದು ಕುತೂಹಲಕಾರಿ ಅಂಶ. ಮಸ್ಕಿ ಕ್ಷೇತ್ರದಲ್ಲಿ ಕೊನೆಗಳಿಗೆಯಲ್ಲಿ ಪಕ್ಷಾಂತರ ನಡೆದರೂ ಅಚ್ಚರಿಪಡಬೇಕಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷದಿಂದಲೂ ಆಯ್ಕೆಯಾಗಿರುವ ಪ್ರತಾಪಗೌಡ ಅವರಿಗೂ ಆಯ್ಕೆಗಳಿವೆ. 2008ರಲ್ಲಿ ಬಿಜೆಪಿ ಸ್ಪರ್ಧಿಸಿ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದಿರುವ ಬಸನಗೌಡ ತುರ್ವಿಹಾಳ ಅವರಿಗೂ ಆಯ್ಕೆಗಳಿವೆ. ಯಾರೂ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎನ್ನುವುದು ಕಾಂಗ್ರೆಸ್, ಬಿಜೆಪಿಯಿಂದ ಅಧಿಕೃತವಾಗಿ ಪಟ್ಟಿ ಬಿಡುಗಡೆಯಾದ ಬಳಿಕವೇ ತಿಳಿಯಲಿದೆ.
2018 ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲು ಸಾಧಿಸಿದ್ರು, ನಂತರ 2021 ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಸನಗೌಡ ತುರ್ವಿಹಾಳ ಹಾಗೂ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ್ ನಡುವೆ ಸ್ಪರ್ದೆ ಏರ್ಪಟ್ಟು , ಕಾಂಗ್ರೆಸ್ ಮಸ್ಕಿಯಲ್ಲಿ ಗೆಲುವಿನ ನಗೆ ಬೀರಿತ್ತು. ಸಚಿವ ಸ್ಥಾನದ ಕನಸು ಕಂಡಿದ್ದ ಪ್ರತಾಪಗೌಡ ಪಾಟೀಲ್ ಉಪಚುನಾವಣೆ ಫಲಿತಾಂಶ ನಿರಾಸೆಯನ್ನ ಮೂಡಿಸಿತ್ತು.
ಇನ್ನೂ 2021ರ ಚುನಾವಣೆಯಲ್ಲಿ ಕಾಂಗ್ರೆಸ್ ನ ಬಸವಗೌಡ ತುರ್ವಹಾಳ 30606 ಅಂತರದಲ್ಲಿ ಗೆಲುವು ಸಾಧಿಸಿದ್ರು. ಅಂದ್ರೆ 86,337 ಮತಗಳನ್ನ ಪಡೆದು ಜಯಗಳಿಸಿದ್ದರು. ಇನ್ನು ಬಿಜೆಪಿಯಿಂದ ಸ್ಪರ್ದೆ ನಡೆಸಿದ್ದ ಪ್ರತಾಪ್ ಗೌಡ ಪಾಟೀಲ 55,731 ಮತಗಳನ್ನ ಪಡೆದು ಸೋಲನ್ನ ಅನುಭವಿಸಿದ್ದರು. ಉಪಚುನಾವಣೆ ಮೂಲಕ ಶಾಸಕ ಸ್ಥಾನ ಪಡೆದಿರುವ ಕಾಂಗ್ರೆಸ್ ಹಾಲಿ ಶಾಸಕ ಬಸನಗೌಡ ತುರ್ವಿಹಾಳ ಮತ್ತೊಮ್ಮೆ ಆಯ್ಕೆಯಾಗುವ ವಿಶ್ವಾಸದಲ್ಲಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಬಾರೀ ಫೈಪೋಟಿ ಏರ್ಪಡಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications