ವರುಣಾ ಆಯ್ತು, ಇದೀಗ ಮಸ್ಕಿಯಲ್ಲಿ ಬಿಜೆಪಿ ಪ್ರಚಾರ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಲು ತೂರಾಟ
2023ರ ವಿಧಾನಸಭೆ ಚುನಾವಣೆಯ ಕಾವು ಬಿಸಿಲಿನ ಧಗೆಯಂತೆ ದಿನದಿಂದ ದಿನಕ್ಕೆ ಏರಿಕೆಯಾಗುತಲಿದ್ದು, ಪ್ರಚಾರದ ಭರಾಟೆಯಲ್ಲಿ ರಾಜಕೀಯ ಪಕ್ಷಗಳ ನಡುವೆ ಗಲಾಟೆಗಳು ನಡೆಯುತ್ತಿವೆ. ಇದೀಗ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಮಧ್ಯೆ ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಕಲ್ಲು ತೂರಾಟದ ಪ್ರಕರಣಗಳು ಕೇಳಿಬಂದಿವೆ.
ಮೇ 10ರಂದು ನಡೆಯುವ ಮತದಾನಕ್ಕೆ ಮುನ್ನ ಎಲ್ಲ ಪಕ್ಷಗಳು ಮತ್ತು ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಪ್ರಚಾರದಲ್ಲಿ ಮಗ್ನರಾಗಿದ್ದಾರೆ. ಇದೇ ವೇಳೆ ರಾಯಚೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆಯಷ್ಟೇ ರಾಜ್ಯದ ಹೈ-ವೋಲ್ಟೇಜ್ ಕ್ಷೇತ್ರ ವರುಣಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೆ, ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದರು.
ಸ್ವತಃ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಣ್ಣನ ಮಕ್ಕಳೇ ಬಿಜೆಪಿ ಅಭ್ಯರ್ಥಿ ಇರುವ ವಾಹನದ ಮೇಲೆ ಕಲ್ಲು ತೂರಾಟ ನಡೆಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರೇರಣೆ ಎಂದು ಆರೋಪಿಸಲಾಗಿದೆ.
ಇದೀಗ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ತುರ್ವಿಹಾಳ ಪಟ್ಟಣದಲ್ಲಿ ಬಿಜೆಪಿ ಪಕ್ಷದ ಪ್ರಚಾರ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಶುಕ್ರವಾರ(ಏ.28) ಬೆಳಿಗ್ಗೆಯಿಂದ ಕ್ರುಸರ್ ವಾಹನದ ಮೂಲಕ ಬಿಜೆಪಿ ಕಾರ್ಯಕರ್ತರು ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ಪ್ರಚಾರ ಮಾಡುತ್ತಿದ್ದರು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಬೆಂಬಲಿಗರು ಬಿಜೆಪಿ ಕ್ರುಸರ್ ವಾಹನದ ಗಾಜು ಒಡೆದು ಅಟ್ಟಹಾಸ ಮೆರೆದಿದ್ದಾರೆ. ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಿಂದ ಬಿಜೆಪಿ ಪ್ರಚಾರದ ವಾಹನಗಳ ಮೇಲೆ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.
ಕೊರಟಗೆರೆಯಲ್ಲಿ ಜಿ. ಪರಮೇಶ್ವರ್‌ಗೆ ಕಲ್ಲೇಟು
ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭೆ ಕ್ಷೇತ್ರದ ಭೈರೇನಹಳ್ಳಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್ ಅವರಿಗೆ ಕಲ್ಲೇಟು ಬಿದ್ದಿದೆ. ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಪ್ರಚಾರ ಮಾಡುತ್ತಿದ್ದಾಗ ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಮೇಲಕ್ಕೆತ್ತಿದರು.
ಈ ವೇಳೆ ಜೆಸಿಬಿ ಮೂಲಕ ಹೂ ಸುರಿದು, ಕ್ರೇನ್ ಮೂಲಕ ಹೂವಿನ ಹಾರ ಹಾಕಲು ಮುಂದಾಗಿದ್ದಾಗ ಜಿ. ಪರಮೇಶ್ವರ್ ತಲೆಗೆ ಕಲ್ಲೇಟು ಬಿದ್ದಿದ್ದು, ತಲೆಯಿಂದ ರಕ್ತ ಸುರಿಯಲಾರಂಭಿಸಿತು. ಕೂಡಲೇ ಜಿ. ಪರಮೇಶ್ವರ್ ಅವರನ್ನ ಕೆಳಗಿಳಿಸಿದ ಕಾರ್ಯಕರ್ತರು, ಹತ್ತಿರದ ಅಕ್ಕಿರಾಂಪುರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ತುಮಕೂರಿನ ಸಿದ್ದಾರ್ಥ್ ಆಸ್ಪತ್ರೆಯಲ್ಲಿ ವೈದ್ಯರ ತಂಡದಿಂದ ಸೂಕ್ತ ಚಿಕಿತ್ಸೆ ನೀಡಲಾಗಿದೆ.
ಹಾಸನದ ಅರಸೀಕೆರೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಹೊಡೆದಾಟ
ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದ ನಾಗರಹಳ್ಳಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಗ್ರಾಮದ ಜೆಡಿಎಸ್ ಕಾರ್ಯಕರ್ತ ಕಿರಣ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಬ್ಲೇಡ್‌ನಿಂದ ಇರಿದ ಆರೋಪ ಕೇಳಿಬಂದಿದೆ.
ಶುಕ್ರವಾರ ರಾತ್ರಿ ಅರಸೀಕೆರೆ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ. ಶಿವಲಿಂಗೇಗೌಡ ಪರ ಪ್ರಚಾರಕ್ಕೆ ಪತ್ನಿ ಹಾಗೂ ಪುತ್ರ ತೆರಳಿದ್ದರು. ಈ ವೇಳೆ ಏಕೆ ಜೋರಾಗಿ ಕೂಗುತ್ತಿದ್ದೀರಾ ಎಂದು ಕೇಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಗುಂಪು ಕಿರಣ್ ಮೇಲೆ ಹಲ್ಲೆ ಮಾಡಿದೆ. ಗಂಡಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications