Kichcha Sudeep in Raichur: 'ಚಿನ್ನ'ದ ನಾಡಿನಲ್ಲಿ 'ರನ್ನ'ನ ಭರ್ಜರಿ ಮತಬೇಟೆ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಇದ್ದು, ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ರಾಜಕೀಯ ಪಕ್ಷಗಳು ಮತ್ತು ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ನಾಯಕರೂ ಕ್ಷೇತ್ರಗಳಲ್ಲಿ ಭರ್ಜರಿ ಸಮಾವೇಶ ಹಾಗೂ ರೋಡ್ ಶೋ ಮಾಡುತ್ತಿದ್ದಾರೆ. ಮೇ 10ರಂದು ನಡೆಯುವ ಮತದಾನಕ್ಕೂ ಮುನ್ನ ಮತದಾರರ ಮನಗೆಲ್ಲಲು ನಾನಾ ಕಸರತ್ತು ನಡೆಸುತ್ತಿದ್ದಾರೆ.

Karnataka Election 2023: Kichcha Sudeep Campaign For BJP Candidates In Raichur District

ಈ ಬಾರಿಯ ಚುನಾವಣೆಯಲ್ಲಿ ರಾಜಕೀಯ ನಾಯಕರು ಮಾತ್ರವಲ್ಲದೆ, ಸಿನಿಮಾ ತಾರೆಯರು ಪ್ರಚಾರದ ಅಖಾಡದಲ್ಲಿ ಧೂಳೆಬ್ಬಿಸುತ್ತಿದ್ದಾರೆ. ಕಳೆದ ಒಂದು ಹತ್ತು ದಿನಗಳಿಂದ ಬಿಜೆಪಿ ಅಭ್ಯರ್ಥಿಗಳ ಪರ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಮೇ 4ರಂದು ಚಿನ್ನದ ನಾಡು ರಾಯಚೂರು ಜಿಲ್ಲೆಯಲ್ಲಿ ಕಿಚ್ಚನ ಅಬ್ಬರ

ಇನ್ನು ಕಿಚ್ಚ ಸುದೀಪ್ ಅವರು ಗುರುವಾರ, ಮೇ 4ರಂದು ರಾಯಚೂರು ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ದೇವದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ್ ಪರ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.

ನಂತರ ಕಿಚ್ಚ ಸುದೀಪ್ ಅವರು 11.40ಕ್ಕೆ ರಾಯಚೂರು ಜಿಲ್ಲೆ ಲಿಂಗಸುಗೂರು ಕ್ಷೇತ್ರದ ಗುಡಗುಂಟಿಯಲ್ಲಿ ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಪರ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ.

ಇನ್ನು ಮಧ್ಯಾಹ್ನ 3 ಗಂಟೆಗೆ ರಾಯಚೂರು ಜಿಲ್ಲೆ ಮಾನ್ವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವಿ. ನಾಯಕ್ ಪರವಾಗಿ ರೋಡ್ ಶೋ ಮೂಲಕ ಕಿಚ್ಚ ಸುದೀಪ್ ಮತಯಾಚಿಸಲಿದ್ದಾರೆ.

Karnataka Election 2023: Kichcha Sudeep Campaign For BJP Candidates In Raichur District

ಆ ಬಳಿಕ ರಾಯಚೂರು ಜಿಲ್ಲೆ ಮಸ್ಕಿ ಕ್ಷೇತ್ರದ ತುರವಿಹಾಳದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ರೋಡ್ ಶೋ ನಡೆಸಲಿದ್ದಾರೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.

ಬಿಜೆಪಿ ಅಭ್ಯರ್ಥಿಗೆ ಬುದ್ಧಿಮಾತು ಹೇಳಿದ ಕಿಚ್ಚ ಸುದೀಪ್

ಬುಧವಾರ ಕಾಂಗ್ರೆಸ್​ ಅಭ್ಯರ್ಥಿ ಮತ್ತು ನಾಯಕರನ್ನು ಟೀಕೆ ಮಾಡಿ ಮಾತನಾಡುತ್ತಿದ್ದ ಬಿಜೆಪಿ ಅಭ್ಯರ್ಥಿ ಅಮೀನ್ ರೆಡ್ಡಿ ಅವರ ಮೈಕ್ ಪಡೆದ ಕಿಚ್ಚ ಸುದೀಪ್, ಯಾರನ್ನು ಟೀಕೆ ಮಾಡಬೇಡಿ, ನಾವು ಮಾಡುವ ಕೆಲಸದ ಮೇಲೆ ನಮಗೆ ವಿಶ್ವಾಸ ಇರಬೇಕು. ನಾವು ಯಾರ ಬಗ್ಗೆಯೂ ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಸಲಹೆ ನೀಡಿದರು.

ಕನ್ನಡದ ಚಿತ್ರರಂಗದ ಪರವಾಗಿ ನಾವು ಬಂದಿರುವ ಸಂದರ್ಭದಲ್ಲಿ ನಮ್ಮ ಎದುರು ಈ ರೀತಿ ಮಾತನಾಡುವುದು ತಪ್ಪಾಗುತ್ತದೆ. ನಿಮ್ಮ ಈ ಬೆಂಬಲ ನನಗೆ ತುಂಬಾ ಖುಷಿಯಾಗುತ್ತಿದೆ. ಒಬ್ಬ ವ್ಯಕ್ತಿಗೆ ಹಠ ಇರಬೇಕು, ಅದು ಅಮೀನ್ ರೆಡ್ಡಿ ಅವರಿಗೆ ಇದೆ. ಅವರಿಗೆ ನೀವು ಎಲ್ಲರೂ ಬೆಂಬಲ ನೀಡಿ ಎಂದು ಮತದಾರರಿಗೆ ಮತ್ತು ಅಭಿಮಾನಿಗಳಿಗೆ ಕಿಚ್ಚ ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+