ಕೈ ತಪ್ಪಿದ ಬಿಜೆಪಿ ಟಿಕೆಟ್, ಕೆ.ಎಸ್.ಈಶ್ವರಪ್ಪ ಆಪ್ತ ಕಾಂಗ್ರೆಸ್‌ಗೆ!

Recommended Video

      ಕೆ ಎಸ್ ಈಶ್ವರಪ್ಪನವರ ಆಪ್ತ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ | Oneindia Kannada

      ಬೆಂಗಳೂರು, ಏಪ್ರಿಲ್ 25 : ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಾಗ ಬಿಜೆಪಿ ನಾಯಕರಿಗೆ ಕೆ.ವಿರೂಪಾಕ್ಷಪ್ಪ ಮುಜುಗರ ತಂದಿದ್ದಾರೆ. ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ.

      ಕೆ.ವಿರೂಪಾಕ್ಷಪ್ಪ ಅವರು ಬೆಂಗಳೂರಿಗೆ ಮುಖ್ಯಮಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಆಗಮಿಸಿದ್ದಾರೆ. ಕಾಂಗ್ರೆಸ್ ಸೇರುವುದಾಗಿ ಅವರು ಘೋಷಣೆ ಮಾಡಿದ್ದು, ಇಂದು ಅಥವ ನಾಳೆ ಪಕ್ಷ ಸೇರುವ ಸಾಧ್ಯತೆ ಇದೆ.

      ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತರಾದ ಕೆ.ವಿರೂಪಾಕ್ಷಪ್ಪ ಅವರು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಧ್ಯಕ್ಷರಾಗಿದ್ದರು. 2018 ರ ಚುನಾವಣೆಗೆ ಸಿಂಧನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು.

      Karnataka elections : K Virupakshappa to join Congress

      ಬಿಜೆಪಿ ಸಿಂಧನೂರು ಕ್ಷೇತ್ರಕ್ಕೆ ಕೊಲ್ಲಾ ಶೇಷಗಿರಿ ರಾವ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಅವರು, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಈಗ ಕಾಂಗ್ರೆಸ್ ಸೇರುತ್ತಿದ್ದಾರೆ.

      ಕೊಪ್ಪಳದ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಕೆ.ಎಸ್.ಈಶ್ವರಪ್ಪ ಜೊತೆ ಗುರುತಿಸಿಕೊಂಡ ನಾಯಕರು. ಚುನಾವಣೆಗೆ ಸ್ಪರ್ಧಿಸಲು ಈಶ್ವರಪ್ಪ ಅವರಿಗೆ ಟಿಕೆಟ್ ಸಿಕ್ಕಿದೆ. ಆದರೆ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಧ್ಯಕ್ಷರಾದ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ಕೈ ತಪ್ಪಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+