ಅಮೆರಿಕದ ನ್ಯೂಜೆರ್ಸಿಯಲ್ಲಿ ರಾಯಚೂರಿನ ಯುವ ವೈದ್ಯ ಸಾವು

ರಾಯಚೂರು, ಮಾರ್ಚ್ 29: ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಗಾಂಧಿನಗರ ಗ್ರಾಮದ ಮಣಿದೀಪ್ ನಂದಿಗಮ್ (28) ಅಮೆರಿಕದ ನ್ಯೂಜೆರ್ಸಿಯಲ್ಲಿ ಮೃತಪಟ್ಟಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ವೃತ್ತಿಯಿಂದ ವೈದ್ಯರಾಗಿದ್ದ ಮಣಿದೀಪ್ ನಂದಿಗಮ್ ಅವರು ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿರುವ ಬಗ್ಗೆ ಅಲ್ಲಿ ನೆಲೆಸಿರುವ ಕುಟುಂಬದ ಸಂಬಂಧಿಗಳು ಅವರ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಮಣಿದೀಪ್ ಅವರು ಸಂಶಯಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಆತಂಕಕ್ಕೆ ಒಳಗಾಗಿರುವ ಅವರ ತಂದೆ ಶ್ರೀನಿವಾಸ್ ಮತ್ತು ತಾಯಿ ಪದ್ಮಾ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

Karnataka Raichur based doctor Nandigam Manideep died in new jersey

ಮಂಗಳೂರಿನ ಮಣಿಪಾಲದಲ್ಲಿರುವ ಕಸ್ತೂರಬಾ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಪದವಿ ಪಡೆದಿದ್ದ ಮಣಿದೀಪ್, ಸ್ನಾತಕೋತ್ತರ ಪದವಿಗಾಗಿ ಮೂರು ವರ್ಷಗಳ ಹಿಂದೆ ನ್ಯೂಜೆರ್ಸಿಯ ಸೇಂಟ್ ಪೀಟರ್ಸ್ ವಿಶ್ವವಿದ್ಯಾಲಯದ ಆಸ್ಪತ್ರೆ ಸೇರಿದ್ದರು. ಅಲ್ಲಿಯೇ ಅವರು ವೈದ್ಯಕೀಯ ವೃತ್ತಿ ಆರಂಭಿಸಿದ್ದರು.

ನ್ಯೂಜೆರ್ಸಿಯಲ್ಲಿ ಸಾಫ್ಟ್‌ ವೇರ್ ಎಂಜಿನಿಯರ್ ಆಗಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಮಣಿದೀಪ್ ವಾಸಿಸುತ್ತಿದ್ದರು. ಗುರುವಾರ ಮಾಮೂಲಿಯಂತೆ ಆಸ್ಪತ್ರೆಯ ಕ್ಯಾಂಪಸ್‌ಗೆ ತೆರಳಿದ್ದರು ಎನ್ನಲಾಗಿದೆ. ಆದರೆ, ಅಲ್ಲಿ ಅವರು ಮೃತಪಟ್ಟಿರುವ ಸುದ್ದಿ ಬಂದಿದೆ.

ಕೃಷಿಕರಾಗಿರುವ ಶ್ರೀನಿವಾಸ್ ಅವರ ಇನ್ನೊಬ್ಬ ಮಗ ಎಂಜಿನಿಯರ್ ಆಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+