Landslide in Raichur Gold Mine: ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ: ಕಾರ್ಮಿಕ ಸಾವು, ನಾಲ್ವರಿಗೆ ಗಂಭೀರ ಗಾಯ

ರಾಯಚೂರು ಜುಲೈ 12: ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿಯ ಆವರಣದಲ್ಲಿ ಭೂಕುಸಿತ ಸಂಭವಿಸಿದ್ದು ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಹಟ್ಟಿ ಚಿನ್ನದ ಗಣಿ ಕಂಪನಿಯ ಆವರಣದಲ್ಲಿ ಮಲ್ಲಪ್ಪ ಶಾಫ್ಟ್‌ನ ಭೂಮಿಯ ಕೆಳಮೈ ವಿಭಾಗದಲ್ಲಿ ಶುಕ್ರವಾರ ಬೆಳಗಿನ ಜಾವ 3.30ಕ್ಕೆ ಭೂಕುಸಿತವಾಗಿದೆ. ಈ ವೇಳೆ ಇಲ್ಲಿದ್ದ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Landslide in Raichur gold mine Laborer Death four seriously injured

ಭೂಕುಸಿತದಲ್ಲಿ ಮೌನೇಶ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಯಾಸಪಟ್ಟು ಮೌನೇಶ ಅವರ ಶವ ಹೊರ ತೆಗೆಯಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರಿಗೆ ಕಂಪನಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳಿಸಲಾಗಿದೆ.

ಮೃತರು ಸಂಬಂಧಿಕರು ಹಾಗೂ ಕಾರ್ಮಿಕರ ಮುಖಂಡರು ಮೃತನ ಕುಟುಂಬದವರಿಗೆ ಪರಿಹಾರ ಘೋಷಿಸುವವರೆಗೂ ಶವ ಪರೀಕ್ಷೆಗೆ ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ. ಹೀಗಾಗಿ ಕಂಪನಿಯ ಆವರಣದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದೆ.

Landslide in Raichur gold mine Laborer Death four seriously injured

ಗಣಿ ಕಂಪನಿ ಆಸ್ಪತ್ರೆಗೆ ಕಾರ್ಯ ನಿರ್ವಾಹಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ, ಅಧಿಕಾರಿಗಳು ಕಾರ್ಮಿಕ ಸಂಘದ ಮುಖಂಡರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ

ಗಣಿ ಕಂಪನಿ ನಿಗಮದ ಅಧ್ಯಕ್ಷ ಜೆ ಪಾಟೀಲ್ ಕುಟುಂಬದ ಜತೆ ಮಾತುಕತೆ ನಡೆಸಿದರು. 50 ಲಕ್ಷ ನೀಡಬೇಕೆಂದು ಕಾರ್ಮಿಕರು ಬೇಡಿಕೆ ಇಟ್ಟಿದ್ದರು. ಆದರೆ ಕಾನೂನಿನಲ್ಲಿ ಅಷ್ಟು ಅನುದಾನ ನೀಡಲು ಸಾಧ್ಯವಿಲ್ಲ ಎಂದ ಅವರು 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದರು. ಗಣಿ ಕಂಪನಿಯಲ್ಲಿ ಭೂಮಿ ಆಳದಲ್ಲಿ ಕೆಲಸ ಮಾಡುವ ಪ್ರತಿ ಕಾರ್ಮಿಕನಿಗೆ 25 ಲಕ್ಷ ಇಸ್ಸುರಿಯಸ್ಸ್ ಮಾಡಿಸಲಾಗುವುದು ಅದರ ಅನುದಾನವನ್ನು ಗಣಿ ಕಂಪನಿಗೆ ಬರಿಸಬೇಕು ಅದಕ್ಕೆ ಬೇಕಾದ ಹಣವನ್ನು ಆಡಳಿತ ಮಂಡಳಿ ಬರಿಸಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+