ಅಪ್ಪನದೊಡ್ಡಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದಲ್ಲಿ ಹಲ್ಲಿ ಪತ್ತೆ, ವಿದ್ಯಾರ್ಥಿಗಳು ಅಸ್ವಸ್ಥ
ರಾಯಚೂರು, ಜುಲೈ, 02: ಊಟದಲ್ಲಿ ಹಲ್ಲಿ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಯಚೂರು ತಾಲೂಕಿನ ಅಪ್ಪನದೊಡ್ಡಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಇದರಿಂದ ಆತಂಕಗೊಂಡ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂದೆ ಜಮಾವಣೆಗೊಂಡಿದ್ದಾರೆ.
ಶಾಲೆಯಲ್ಲಿ ಮಕ್ಕಳಿಗಾಗಿ ಮಧ್ಯಾಹ್ನ ಬಿಸಿಯೂಟಕ್ಕೆ ಉಪ್ಪಿಟ್ಟು ಮಾಡಿದ್ದರು. ಅದನ್ನು ಎಲ್ಲ ಮಕ್ಕಳಿಗೆ ಬಡಿಸಲಾಗಿದ್ದು, ಈ ವೇಳೆ ಪಾತ್ರೆಯ ಅಡಿಯಲ್ಲಿ ಸತ್ತ ಹಲ್ಲಿಯೊಂದು ಪತ್ತೆಯಾಗಿದೆ. ಅಷ್ಟರಲ್ಲಾಗಲೇ ಉಪ್ಪಿಟ್ಟು ತಿಂದ ಹಲವು ಮಕ್ಕಳಿಗೆ ಹೊಟ್ಟೆ ತೊಳೆಸಲು ಆರಂಭವಾಯಿತು. ಬಳಿಕ ಕೆಲವು ಮಕ್ಕಳು ವಾಂತಿ ಮಾಡಲು ಶುರು ಮಾಡಿದರು. ಈ ಪೈಕಿ ಮೂರು ಮಕ್ಕಳು ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಯಾಪಲದಿನ್ನಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲೆಯಲ್ಲಿ ಇಬ್ಬರು ಅಡುಗೆ ಸಿಬ್ಬಂದಿಯ ನಿರ್ಲಕ್ಷದಿಂದ ಈ ಘಟನೆ ನಡೆದಿದೆ ಎಂದು ಆಪಾದಿಸಲಾಗಿದೆ. ಇನ್ನು ಇದೀಗ ಸ್ಥಳಕ್ಕೆ ಯಾಪಲದಿನ್ನಿ ಪೊಲೀಸರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸಿಬ್ಬಂದಿಗಳ ವಿಚಾರಣೆ ನಡೆಸಿದ್ದಾರೆ. ಶಾಲೆಯ ಆವರಣದಲ್ಲಿ ವೈದ್ಯರು ಮೊಕ್ಕಾಂ ಹೂಡಿದ್ದಾರೆ. ಅಲ್ಲದೆ ಕ್ಯಾಂಪಸ್‌ನಲ್ಲಿ ಪೋಷಕರು ಕೂಡಾ ಜಮಾಯಿಸಿದ್ದಾರೆ. ಎಲ್ಲ ಮಕ್ಕಳ ಆರೋಗ್ಯದ ಮೇಲೆ ವೈದ್ಯರು ನಿಗಾ ಇಟ್ಟಿದ್ದಾರೆ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತಿರುವುದಾಗಿ ಇಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಪ್ಪನದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 70ಕ್ಕೂ ಅಧಿಕ ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿ ಅಸ್ವಸ್ಥರಾದ ಘಟನೆ ಜರುಗಿದೆ.
ವಿಷಯ ತಿಳಿಯುತ್ತಿದ್ದಂತೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಶ್ರೀ ಬಸನಗೌಡ ದದ್ದಲ್ ರವರು ದಿಢೀರನೇ ಯಾಪಲದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಅಪ್ಪನದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ನಂತರ ಮಾತನಾಡಿದ ಶಾಸಕರು, ಫೋಷಕರು ಯಾರು ಕೂಡ ಗಾಬರಿ ಪಡುವ ಅವಶ್ಯಕತೆ ಇಲ್ಲ. ಎಲ್ಲಾ ಮಕ್ಕಳ ಆರೋಗ್ಯ ಸಹಜ ಸ್ಥಿತಿಗೆ ಬಂದಿದೆ ಎಂದರು.
ನಂತರ ಅಪ್ಪನದೊಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಕೋಣೆಗೆ ಬೇಟಿ ನೀಡಿ ಅಕ್ಕಿ, ಬೇಳೆ ಇತರ ಅಡುಗೆ ಸಾಮಾಗ್ರಿಗಳನ್ನು ಮತ್ತು ಸ್ವಾಚ್ಚತೆಯನ್ನು ಪರಿಶೀಲಿಸಿದ ನಂತರ ಅಧಿಕಾರಿಗಳಿಂದ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಬಾಸ್ಕರ್ ಗೌಡ,ಶ್ರೀನಿವಾಸ ರೆಡ್ಡಿ, ವಡ್ಡೆಪಲ್ಲಿ ಸೂಗುರಪ್ಪ ನಾಯಕ, ವೆಂಕಟೇಶ,ಆಂಜಿನೇಯ್ಯ ವಕೀಲರು, ತಿಮ್ಮಪ್ಪ, ಈರಣ್ಣ ಮಡಿವಾಳ ಬಶೀರ್ ರಘುನಾಥನಹಳ್ಳಿ, ಚನ್ನಬಸವ, ಸಾಬಣ್ಣ, ವಿರೇಶ,ಊರಿನ ಮುಖಂಡರುಗಳು ಗ್ರಾಮಸ್ಥರು ಫೋಷರು , ವಿದ್ಯಾರ್ಥಿಗಳು ಡಿಎಸ್ ರವರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಉಪಸ್ಥಿತರಿದ್ದರು.
-
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications