ಮಂತ್ರಾಲಯದಲ್ಲಿ ಸ್ಥಳೀಯ ಲಾಕ್ ಡೌನ್; ಭಕ್ತರಿಗೆ ಪ್ರವೇಶವಿಲ್ಲ

ರಾಯಚೂರು, ಏಪ್ರಿಲ್ 30; ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಹಲವು ರಾಜ್ಯಗಳು ಲಾಕ್ ಡೌನ್ ಘೋಷಣೆ ಮಾಡಿವೆ. ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧವನ್ನು ಹೇರಿವೆ.

ಮಂತ್ರಾಲಯ ಮಠದಲ್ಲಿ ಭಕ್ತರ ಹಿತದೃಷ್ಟಿಯಿಂದ ಸ್ಥಳೀಯವಾದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಶುಕ್ರವಾರ ಶ್ರೀ ರಾಘವೇಂದ್ರಸ್ವಾಮಿ ಮಠದ ಆಡಳಿತ ಮಂಡಳಿ ಈ ಕುರಿತು ಪ್ರಕಟಣೆ ಹೊರಡಿಸಿದೆ.

ಮೇ 1ರ ಶನಿವಾರದಿಂದಲೇ ಸ್ಥಳೀಯ ಲಾಕ್ ಡೌನ್ ಜಾರಿಗೆ ಬರಲಿದೆ. ಈ ಅವಧಿಯಲ್ಲಿ ಭಕ್ತರಿಗೆ ಪ್ರತ್ಯಕ್ಷ ದರ್ಶನ, ತೀರ್ಥ, ಪ್ರಸಾದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಮುಂದಿನ ಸೂಚನೆ ತನಕ ಭಕ್ತರು ಮಂತ್ರಾಲಯಕ್ಕೆ ಬರಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Lock Down In Mantralayam Devotes Entry Banned From May 1

ಸ್ಥಳೀಯ ಲಾಕ್ ಡೌನ್ ಇದ್ದರೂ ಸಹ ಎಂದಿನಂತೆ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು, ಪಂಚಾಮೃತ, ರಥೋತ್ಸವಾದಿ ಸೇವೆಗಳು ನಡೆಯಲಿವೆ. ಭಕ್ತರು ಆನ್‌ಲೈನ್ ಮೂಲಕ ಈ ಸೇವೆಗಳಲ್ಲಿ ಪಾಲ್ಗೊಳ್ಳಬಹುದಾಗಿದೆ.

ಕೋವಿಡ್ 2ನೇ ಅಲೆಯ ಹಿನ್ನಲೆಯಲ್ಲಿ ಸರ್ಕಾರದ ನಿಯಮಗಳ ಪ್ರಕಾರ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ವತಿಯಿಂದ ಈ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಕರ್ನಾಟಕ, ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಮಠಕ್ಕೆ ಭಕ್ತರು ಆಗಮಿಸುತ್ತಾರೆ. ಕೋವಿಡ್ ಸೋಂಕು ಹರಡುವಿಕೆ ತಡೆಯಲು ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+