ರಾಯಚೂರು: ವಿಷ ಸೇವಿಸಿ ಒಟ್ಟಿಗೆ ಪ್ರಾಣ ಬಿಟ್ಟ ಪ್ರೇಮಿಗಳು

Posted By:
Subscribe to Oneindia Kannada

ರಾಯಚೂರು, ಡಿಸೆಂಬರ್ 28: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಅಮರೇಶ್ವರ ದೇವಸ್ಥಾನದ ಬಳಿ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯಾದಗಿರಿ ಜಿಲ್ಲೆಯ ಸಗರ ಗ್ರಾಮದ ನಿವಾಸಿಗಳಾದ ಅಮರೇಶ (18), 15 ವರ್ಷದ ಭಾಗ್ಯಶ್ರೀ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಇವರ ಪ್ರೀತಿಗೆ ಹುಡುಗಿ ಮನೆಯಲ್ಲಿ ವಿರೋಧವಿದ್ದರಿಂದ ಇಬ್ಬರು ಮನೆಯಿಂದ ಓಡಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Lovers commits suicide by consuming poison in Raichur district

ನಿನ್ನೆ ಬುಧವಾರ ಅಮರೇಶ್ವರ ದೇವಸ್ಥಾನಕ್ಕೆ ಬಂದಿದ್ದ ಪ್ರೇಮಿಗಳು, ದೇವರ ದರ್ಶನ ಪಡೆದು ಬಳಿಕ ದೇವಾಲಯದ ಪಕ್ಕದ ಗುಡ್ಡ ಪ್ರದೇಶಕ್ಕೆ ಹೋಗಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಲಿಂಗಸೂರು ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Lovers committed suicide by consuming poison at Amareshwara temple, lingasugur taluk Raichur district.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ