ಆರು ತಿಂಗಳ ಬಳಿಕ ಭಕ್ತರಿಗೆ ಬಾಗಿಲು ತೆರದ ಮಂತ್ರಾಲಯ ಮಠ

ರಾಯಚೂರು, ಅಕ್ಟೋಬರ್ 02: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು.

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಠದ ಮಹಾದ್ವಾರವನ್ನು ತೆರೆದರು. ಭಕ್ತರು ಅಂತರ ಕಾಯ್ದುಕೊಂಡು ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.

ಮಠದ ಹೊರಗೆ ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆಯಲು ವ್ಯವಸ್ಥೆಗಳನ್ನು ಮಾಡಲಾಗಿದೆ. ಇದು ಸಾಮಾನ್ಯ ದರ್ಶನವಾಗಿದೆ. ವಿಐಪಿಗಳ ದರ್ಶನಕ್ಕೆ ಇನ್ನೂ ಅವಕಾಶವನ್ನು ಕಲ್ಪಿಸಿಲ್ಲ. ಜುಲೈನಲ್ಲಿ ಮಠದ ಬಾಗಿಲು ತೆರೆಯಬಹುದು ಎಂದು ಅಂದಾಜಿಸಲಾಗಿತ್ತು. ಅದರೆ, ಅದನ್ನು ಮುಂದಕ್ಕೆ ಹಾಕಲಾಗಿತ್ತು.

Mantralaya Raghavendra Swamy Mutt Open For Devotees

ಮಠದ ಬಾಗಿಲು ತೆರೆಯುವ ಹಿನ್ನಲೆಯಲ್ಲಿ ಮಠದ ಆವರಣವನ್ನು ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ವಾದ್ಯ, ವೇದಘೋಷಗಳ ಸಮೇತ ಆಗಮಿಸಿದ ಪೀಠಾಧಿಪತಿಗಳು ಭಕ್ತರ ಪ್ರವೇಶಕ್ಕೆ ಅವಕಾಶ ನೀಡಿದರು.

ಮಾರ್ಚ್‌ನಲ್ಲಿ ಲಾಕ್ ಡೌನ್ ಘೋಷಣೆ ಮಾಡಿದಾಗ ಮಠಕ್ಕೆ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಯಿತು. ಸುಮಾರು ಆರು ತಿಂಗಳ ಬಳಿಕ ಈಗ ಮತ್ತೆ ದರ್ಶನವನ್ನು ಆರಂಭಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+