ಮಸ್ಕಿಯಲ್ಲಿ ಬಿಜೆಪಿ ಪರ ಮತಬೇಟೆಗೆ ಬರಲಿದ್ದಾರೆ ಮಂಗ್ಲಿ!

ರಾಯಚೂರು, ಏಪ್ರಿಲ್ 12; ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಏಪ್ರಿಲ್ 17ರಂದು ನಡೆಯುವ ಉಪ ಚುನಾವಣೆಗೆ ಬಿರುಸಿನ ಪ್ರಚಾರವನ್ನು ಕೈಗೊಂಡಿವೆ.

ಏಪ್ರಿಲ್ 13ರಂದು ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಪ್ರಚಾರ ಮಾಡಲು ಗಾಯಕಿ ಮಂಗ್ಲಿ ಆಗಮಿಸುತ್ತಿದ್ದಾರೆ. ಈಗಾಗಲೇ ಹಲವು ಸಚಿವರು, ರಾಜ್ಯದ ವಿವಿಧ ಭಾಗಗಳ ಕಾರ್ಯಕರ್ತರು ಮಸ್ಕಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ.

ಮಸ್ಕಿಯಲ್ಲಿ ಕಾಂಗ್ರೆಸ್‌ನಿಂದ ಆರ್‌. ಬಸನಗೌಡ ತುರ್ವಿಹಾಳ, ಬಿಜೆಪಿಯಿಂದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅಭ್ಯರ್ಥಿಗಳು. ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಇದೆ.

Maski By Election Campaign By Mangli On April 13

ನಟ ದರ್ಶನ್ ಅಭಿನಯದ 'ರಾಬರ್ಟ್' ಚಿತ್ರದ ಆಡಿಯೋ ಬಿಡುಗಡೆ ಬಳಿಕ ಗಾಯಕಿ ಮಂಗ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಿದ್ದಾರೆ. 'ರಾಬರ್ಟ್' ಚಿತ್ರದ ತೆಲಗು ಅವತರಿಣಿಕೆಯ 'ಕಣ್ಣೇ ಅದಿರಿಂದಿ' ಹಾಡನ್ನು ಮಂಗ್ಲಿ ಹಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಹಾಡಿನ ಜನಪ್ರಿಯತೆ ಮಂಗ್ಲಿ ಅವರಿಗೆ ಕರ್ನಾಟಕದಲ್ಲಿಯೂ ಅಪಾರ ಅಭಿಮಾನಿಗಳನ್ನು ಹುಟ್ಟು ಹಾಕಿದೆ. ಈಗ ಮಂಗ್ಲಿ ಬಿಜೆಪಿ ಪರವಾಗಿ ಚುನಾವಣೆ ಪ್ರಚಾರ ಮಾಡಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಉಪ ಚುನಾವಣೆಗೆ ಮಂಗ್ಲಿ ಅವರು ಸ್ಟಾರ್ ಪ್ರಚಾರಕಿ.

ಏಪ್ರಿಲ್ 17ರಂದು ಮಸ್ಕಿ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮಸ್ಕಿಯಲ್ಲಿ ಮಂಗ್ಲಿ ಮೋಡಿ ಮಾಡಲಿದ್ದಾರೆಯೇ? ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+