ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಸ್ಕಿ ಉಪ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ

|
Google Oneindia Kannada News

ರಾಯಚೂರು, ಏಪ್ರಿಲ್ 16: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಹಿರಂಗ ಪ್ರಚಾರ ಏಪ್ರಿಲ್ 15ರಂದು ಮುಕ್ತಾಯವಾಗಿದೆ. ಇನ್ನು ಕೋವಿಡ್ ನಿಯಮಗಳ ಪ್ರಕಾರ ಮನೆ ಮನೆ ಪ್ರಚಾರ ಮಾಡಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಆರ್.ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.

ಮಸ್ಕಿ ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏ.15ರ ಸಂಜೆ 7 ಗಂಟೆಯ ಬಳಿಕ ಕ್ಷೇತ್ರದವರಲ್ಲದವರು ಕ್ಷೇತ್ರ ಬಿಟ್ಟು ಹೋಗಬೇಕು. ಚುನಾವಣೆ ನೀತಿ ಸಂಹಿತೆ ಜಾರಿ ಬಳಿಕ ಇದುವರೆಗೆ 60 ದೂರು ದಾಖಲಾಗಿವೆ. 46 ಕೋವಿಡ್ ಪ್ರಕರಣ, 14 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಾಗಿವೆ. ಇದರಲ್ಲಿ 7 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.

ಮಸ್ಕಿ ಉಪ ಚುನಾವಣೆ; ಜನರು ತಕ್ಕಪಾಠ ಕಲಿಸುವುದು ಯಾರಿಗೆ?ಮಸ್ಕಿ ಉಪ ಚುನಾವಣೆ; ಜನರು ತಕ್ಕಪಾಠ ಕಲಿಸುವುದು ಯಾರಿಗೆ?

ಇದುವರೆಗೆ 3.50 ಲಕ್ಷ ಮೌಲ್ಯದ ವಸ್ತು ಹಾಗೂ 1.33 ಲಕ್ಷ ಮೌಲ್ಯದ 355 ಲೀ. ಮದ್ಯ ಜಪ್ತಿ ಮಾಡಲಾಗಿದೆ. ಕೋವಿಡ್ ಸೋಂಕಿತರು ಮತ್ತು ಸಂಪರ್ಕಿತರು ಮತದಾನ ದಿನದ ಸಂಜೆ 6ರಿಂದ 7 ಗಂಟೆಯವರೆಗೆ ಮತದಾನ ಮಾಡಲು ಸಮಯ ನಿಗದಿ ಮಾಡಲಾಗಿದೆ ಎಂದು ಹೇಳಿದರು.

Maski By-Election: Open Campaign Ends On April 15

ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲರಿಗೆ ಕೊರೊನಾ ಸೋಂಕು ಬಾಧಿಸಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕಿತ 18 ಜನರ ವರದಿ ಇನ್ನಷ್ಟೇ ಬರಬೇಕಾಗಿದೆ. ಪ್ರಾಥಮಿಕ ಸಂಪರ್ಕಿತರು ಸಂಜೆ 6 ರಿಂದ 7ಕ್ಕೆ ಮತದಾನ ಮಾಡಬೇಕು ಎಂದರು.

ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕ್ಕಂ ಪ್ರಕಾಶ್ ಮಾತನಾಡಿ, ಕ್ಷೇತ್ರದಲ್ಲಿ ಒಟ್ಟು 62 ಸೂಕ್ಷ್ಮ, 07 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಚುನಾವಣೆ ಕರ್ತವ್ಯಕ್ಕೆ 739 ಪೊಲೀಸ್ ಕಾನ್​​ಸ್ಟೆಬಲ್​, 71 ಎಎಸ್​​ಐ, 25 ಪಿಎಸ್​​ಐ, 07 ಸಿಪಿಐ, 03 ಡಿಎಸ್​ಪಿ, 1 ಸಿಆರ್​ಪಿಎಫ್​​ ಮತ್ತು ಒಂದು ಕೆಎಸ್​​ಆರ್​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಇದುವರೆಗೂ 7 ಐಪಿಸಿ ಪ್ರಕರಣ ದಾಖಲಾಗಿದ್ದು, 18 ಜನರನ್ನು ಬಂಧಿಸಲಾಗಿದೆ. ಹಣ ಹಂಚಿಕೆ ವೈರಲ್ ಆದ ಬಗ್ಗೆ ವಿಡಿಯೋದಲ್ಲಿ ಕಂಡು ಬಂದ ಎಲ್ಲ ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

Recommended Video

' ಖಾಸಗಿ ಹೊಟೇಲ್‌ಗಳನ್ನ ತಾತ್ಕಾಲಿಕ ಆಸ್ಪತ್ರೆಗಳಾಗಿಸಲು ಸಿದ್ಧತೆ' ಕೊರೊನಾ ಚಿಕಿತ್ಸೆ ಕುರಿತು ಸಚಿವ ಸುಧಾಕರ್ ಮಾಹಿತಿ | Oneindia Kannada

English summary
The open campaign for the by-election in the Maski Assembly constituency of Raichur district ends on April 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X