ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಸ್ಕಿ ಉಪ ಚುನಾವಣೆ; ಜನರು ತಕ್ಕಪಾಠ ಕಲಿಸುವುದು ಯಾರಿಗೆ?

|
Google Oneindia Kannada News

ರಾಯಚೂರು, ಮಾರ್ಚ್ 18; ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣೆ ತಯಾರಿ ನಡೆಸಿವೆ. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆಯೇ? ಕಾದು ನೋಡಬೇಕು.

ಮಸ್ಕಿ ಕ್ಷೇತ್ರದ ಉಪ ಚುನಾವಣೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ರಾಷ್ಟ್ರೀಯ ಪಕ್ಷಗಳು ತಯಾರಿಯನ್ನು ನಡೆಸುತ್ತಿವೆ. ಈಗ ಅಧಿಕೃತವಾಗಿ ದಿನಾಂಕ ಘೋಷಣೆ ಆಗಿದ್ದು, ಪ್ರಚಾರ ಕಣ ರಂಗು ಪಡೆದುಕೊಂಡಿದೆ.

ಮಸ್ಕಿ ಕ್ಷೇತ್ರದ ಉಪ ಚುನಾವಣೆ; ಕೆ. ವಿರೂಪಾಕ್ಷಪ್ಪ ಬಿಜೆಪಿಗೆ ಮಸ್ಕಿ ಕ್ಷೇತ್ರದ ಉಪ ಚುನಾವಣೆ; ಕೆ. ವಿರೂಪಾಕ್ಷಪ್ಪ ಬಿಜೆಪಿಗೆ

ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ, ಕಾಂಗ್ರೆಸ್‌ನಿಂದ ಬಸನಗೌಡ ತುರ್ವಿಹಾಳ ಅವರು ಅಭ್ಯರ್ಥಿಯಾಗಲಿದ್ದಾರೆ. ಕಳೆದ ಚುನಾವಣೆಯಲ್ಲಿ ಇಬ್ಬರೂ ಎದುರಾಳಿಗಳಾಗಿದ್ದರು. ಉಪ ಚುನಾವಣೆಯಲ್ಲಿ ಇಬ್ಬರೂ ಸಹ ಪಕ್ಷ ಬದಲಾವಣೆ ಮಾಡಿದ್ದಾರೆ.

ಬಸವಕಲ್ಯಾಣ, ಮಸ್ಕಿ, ಬೆಳಗಾವಿ ಉಪ ಚುನಾವಣೆಗೆ ಉಸ್ತುವಾರಿಗಳ ನೇಮಕ ಬಸವಕಲ್ಯಾಣ, ಮಸ್ಕಿ, ಬೆಳಗಾವಿ ಉಪ ಚುನಾವಣೆಗೆ ಉಸ್ತುವಾರಿಗಳ ನೇಮಕ

ಇಬ್ಬರು ನಾಯಕರು ಪಕ್ಷ ಬದಲಾಯಿಸಿದ್ದಾರೆ. ಆದರೆ, ಅವರ ಬೆಂಬಲಿಗರು ಅನೇಕರು ಇನ್ನೂ ಅಲ್ಲೇ ಉಳಿದಿದ್ದಾರೆ. ಇದರಿಂದಾಗಿ ಉಪ ಚುನಾವಣೆಯಲ್ಲಿ ಯಾರಿಗೆ ಗೆಲುವು ಎಂಬ ಚರ್ಚೆಗಳು ಜೋರಾಗಿವೆ. ಏಪ್ರಿಲ್ 17ರಂದು ಉಪ ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಮಸ್ಕಿ, ಬಸವಕಲ್ಯಾಣ ಉಪಚುನಾವಣೆ: ಕುಮಾರಸ್ವಾಮಿ ಶಸ್ತ್ರತ್ಯಾಗ ಮಸ್ಕಿ, ಬಸವಕಲ್ಯಾಣ ಉಪಚುನಾವಣೆ: ಕುಮಾರಸ್ವಾಮಿ ಶಸ್ತ್ರತ್ಯಾಗ

ಇಬ್ಬರು ನಾಯಕರ ಕ್ಷೇತ್ರ ಬದಲು

ಇಬ್ಬರು ನಾಯಕರ ಕ್ಷೇತ್ರ ಬದಲು

ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ, ಕಾಂಗ್ರೆಸ್‌ನಿಂದ ಬಸನಗೌಡ ತುರ್ವಿಹಾಳ ಅವರು ಅಭ್ಯರ್ಥಿಯಾಗಲಿದ್ದಾರೆ. 2018ರ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ ಕಾಂಗ್ರೆಸ್‌ನಲ್ಲಿದ್ದರು. ಬಸನಗೌಡ ತುರ್ವಿಹಾಳ ಬಿಜೆಪಿಯಲ್ಲಿದ್ದರು. ಈಗ ಇಬ್ಬರು ಪಕ್ಷಗಳು ಅದಲು ಬದಲಾಗಿವೆ. ಆದ್ದರಿಂದ, ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.

ಪಾಠ ಕಲಿಸುತ್ತೇವೆ ಎನ್ನುವ ಮಾತು

ಪಾಠ ಕಲಿಸುತ್ತೇವೆ ಎನ್ನುವ ಮಾತು

ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂಬ ಮಾತುಗಳು ಹಬ್ಬಿವೆ. ಇಬ್ಬರೂ ನಾಯಕರು ಪಕ್ಷವನ್ನು ಬದಲಾಯಿಸಿದರೂ ಕೆಲವು ಕಾರ್ಯಕರ್ತರು ಮೂಲ ಪಕ್ಷದಲ್ಲಿ ಉಳಿದಿದ್ದಾರೆ. ಯಾರು, ಯಾರಿಗೆ ಪಾಠ ಕಲಿಸುತ್ತಾರೆ? ಎಂದು ಕಾದು ನೋಡಬೇಕು.

ಉಪ ಚುನಾವಣೆ ಪಕ್ಷವೋ, ವ್ಯಕ್ತಿಯೋ?

ಉಪ ಚುನಾವಣೆ ಪಕ್ಷವೋ, ವ್ಯಕ್ತಿಯೋ?

ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಆದ್ಯತೆಯೋ?, ವ್ಯಕ್ತಿಗೋ? ಎಂಬುದು ತಿಳಿಯಬೇಕಿದೆ. ಪ್ರತಾಪಗೌಡ ಪಾಟೀಲ, ಬಸನಗೌಡ ತುರ್ವಿಹಾಳ ಪುನಃ ಎದುರಾಳಿಗಳಾಗಿದ್ದು, ಜನರು ಯಾರ ಬೆಂಬಲಕ್ಕೆ ನಿಲ್ಲಲಿದ್ದಾರೆ? ಎಂದು ಕಾದು ನೋಡಬೇಕಿದೆ.

Recommended Video

ಉಪ ಚುನಾವಣೆಗೆ ಸಚಿವರಿಗೆ ಖಡಕ್ ವಾರ್ನಿಂಗ್ ! | Oneindia Kannada
2018ರ ಫಲಿತಾಂಶ

2018ರ ಫಲಿತಾಂಶ

2018ರ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ (ಕಾಂಗ್ರೆಸ್) 60,387, ಬಸನಗೌಡ ತುರ್ವಿಹಾಳ (ಬಿಜೆಪಿ) 60,174 ಮತಗಳನ್ನು ಪಡೆದಿದ್ದರು. ಜೆಡಿಎಸ್‌ನಿಂದ ರಾಜಾಸೋಮನಾಥ ನಾಯಕ್ 11,392 ಮತಗಳನ್ನು ಪಡೆದಿದ್ದರು.

English summary
Election commission of India announced by election schedule for Maski, Raichur district. Pratap Gowda Patil may contest from BJP and Basanagouda Turvihal from Congress. Election on April 17 and counting will be held on May 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X