ಮಸ್ಕಿಯಲ್ಲಿ ಬಿಜೆಪಿಗೆ ಮುಖಭಂಗ; ಕಾಂಗ್ರೆಸ್ ಜಯಭೇರಿ
ರಾಯಚೂರು, ಮೇ 2: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ ಅವರು 30,641 ಮತಗಳಿಗೂ ಅಧಿಕ ಮುನ್ನಡೆ ಪಡೆದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರಿಗೆ ಸೋಲುಣಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ 86,222 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ 55,581 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ಇನ್ನು ಕಳೆದ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲರು ತಮ್ಮ ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲಾಗಿತ್ತು.
Recommended Video
ಮಸ್ಕಿ ಗೆಲುವಿನ ನಂತರ ಮಾತಾಡಿದ ಕೆಪಿಸಿಸಿ ಅಧ್ಯಕ್ಷ !!












Click it and Unblock the Notifications