ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಸ್ಕಿಯಲ್ಲಿ ಬಿಜೆಪಿಗೆ ಮುಖಭಂಗ; ಕಾಂಗ್ರೆಸ್ ಜಯಭೇರಿ

|
Google Oneindia Kannada News

ರಾಯಚೂರು, ಮೇ 2: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ ಅವರು 30,641 ಮತಗಳಿಗೂ ಅಧಿಕ ಮುನ್ನಡೆ ಪಡೆದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರಿಗೆ ಸೋಲುಣಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

Karnataka By Elections Results 2021 Live Updates: ಬಸವಕಲ್ಯಾಣ ಬಿಜೆಪಿ ತೆಕ್ಕೆಗೆ, ಮಸ್ಕಿ ಕಾಂಗ್ರೆಸ್ ವಶಕ್ಕೆ Karnataka By Elections Results 2021 Live Updates: ಬಸವಕಲ್ಯಾಣ ಬಿಜೆಪಿ ತೆಕ್ಕೆಗೆ, ಮಸ್ಕಿ ಕಾಂಗ್ರೆಸ್ ವಶಕ್ಕೆ

ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ 86,222 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ 55,581 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

Maski By Election Results 2021: Congress Candidate Basanagowda Turavihal Wins

Recommended Video

ಮಸ್ಕಿ ಗೆಲುವಿನ ನಂತರ ಮಾತಾಡಿದ ಕೆಪಿಸಿಸಿ ಅಧ್ಯಕ್ಷ !!

ಇನ್ನು ಕಳೆದ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲರು ತಮ್ಮ ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲಾಗಿತ್ತು.

English summary
Maski By Election Results 2021 Winner: Congress Candidate Basanagowda Turavihal has won the Maski constituency with a margin of 12,987 votes by defeating Pratap gowda Patil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X