ಮಸ್ಕಿ ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ

ರಾಯಚೂರು, ಮಾರ್ಚ್ 29: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದರು. ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಸೋಮವಾರ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರವನ್ನು ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಈ ಸಮಯದಲ್ಲಿ ಉಪಸ್ಥಿತರಿದ್ದರು.

ಸಚಿವ ಬಿ. ಶ್ರೀರಾಮುಲು ಈ ಕುರಿತು ಟ್ವೀಟ್ ಮಾಡಿದ್ದಾರೆ. "ಮಸ್ಕಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಪ್ರತಾಪ್ ಗೌಡ ಪಾಟೀಲ್ ಅವರು ನಾಮಪತ್ರ ಸಲ್ಲಿಸುವ ವೇಳೆ ನಾನು ಉಪಸ್ಥಿತನಿದ್ದೆ" ಎಂದು ಹೇಳಿದ್ದಾರೆ.

Maski By Elections BJP Candidate Prathap Gouda Patil Files Nomination

"ಕ್ಷೇತ್ರದಲ್ಲೆಡೆ ಬಿಜೆಪಿ ಪರ ಅಲೆ ಇರುವುದು ಕಂಡುಬಂದಿದ್ದು, ಜನರ ಉತ್ಸಾಹ ನಮ್ಮ ಗೆಲುವಿನ ಭವಿಷ್ಯ ತೋರಿಸುತ್ತಿದೆ. ನಿಮ್ಮ‌ ಪ್ರೀತಿ ಸದಾ ಹೀಗೇ ಇರಲಿ" ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಮಸ್ಕಿ ಉಪ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 30ರ ಮಂಗಳವಾರ ಕೊನೆಯ ದಿನವಾಗಿದೆ. ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್, ಕಾಂಗ್ರೆಸ್ ಪಕ್ಷದಿಂದ ಆರ್‌. ​ಬಸನಗೌಡ ತುರ್ವಿಹಾಳ ಅಭ್ಯರ್ಥಿಗಳು. ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವುದಿಲ್ಲ ಎಂದು ಘೋಷಣೆ ಮಾಡಿದೆ.

2018ರ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ, ಉಪ ಚುನಾವಣೆ ಎದುರಾಗಿದೆ.

ಆರ್‌. ​ಬಸನಗೌಡ ತುರ್ವಿಹಾಳ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದರು. ಈ ಬಾರಿ ಅವರು ಕಾಂಗ್ರೆಸ್ ಸೇರಿ ಉಪ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+