ಮಸ್ಕಿ ಉಪ ಚುನಾವಣೆ; ಪ್ರತಾಪ್ ಗೌಡ ಪಾಟೀಲ್ ನಾಮಪತ್ರ

ರಾಯಚೂರು, ಮಾರ್ಚ್ 24: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದೆ. ಪ್ರತಾಪ್ ಗೌಡ ಪಾಟೀಲ್ ಬುಧವಾರ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬಿಜೆಪಿ ಇನ್ನೂ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿಲ್ಲ.

ಬುಧವಾರ ಪ್ರತಾಪ್ ಗೌಡ ಪಾಟೀಲ್ ಅಂಕಲಿಮಠಕ್ಕೆ ಭೇಟಿ ನೀಡಿದರು. ಗಚ್ಚಿನಮಠಕ್ಕೆ ಭೇಟಿ ಕೊಟ್ಟರು. ಬಳಿಕ ಬಿಜೆಪಿ ಕಚೇರಿಗೆ ಆಗಮಿಸಿದರು. ಅಲ್ಲಿಂದ ಕಾರ್ಯಕರ್ತರ ಜೊತೆ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಬಂದರು.

Maski By Elections Prathap Gouda Patil Files Nomination

ಚುನಾವಣಾಧಿಕಾರಿ ಹಾಗೂ ಲಿಂಗಸಗೂರು ಸಹಾಯಕ ಆಯುಕ್ತ ರಾಜಶೇಖರ ಡಂಬಳ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡುವುದು ಬಾಕಿ ಇದೆ. ಇಂದು ಸಾಂಕೇತಿಕವಾಗಿ ಅವರು ಇಂದು ನಾಮಪತ್ರ ಸಲ್ಲಿಸಿದರು.

2018ರ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಗಳಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ, ಉಪ ಚುನಾವಣೆ ನಡೆಯುತ್ತಿದೆ.

ಈ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ, ಕಾಂಗ್ರೆಸ್‌ನಿಂದ ಬಸನಗೌಡ ತುರ್ವಿಹಾಳ ಅವರು ಅಭ್ಯರ್ಥಿಯಾಗಲಿದ್ದಾರೆ. ಕಳೆದ ಚುನಾವಣೆಯಲ್ಲಿಯೂ ಇಬ್ಬರೂ ಎದುರಾಳಿಗಳಾಗಿದ್ದರು. ಆದರೆ, ಈ ಉಪ ಚುನಾವಣೆಯಲ್ಲಿ ಇಬ್ಬರೂ ಸಹ ಪಕ್ಷ ಬದಲಾವಣೆ ಮಾಡಿದ್ದಾರೆ.

ಕಳೆದ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ (ಕಾಂಗ್ರೆಸ್) 60,387, ಬಸನಗೌಡ ತುರ್ವಿಹಾಳ (ಬಿಜೆಪಿ) 60,174 ಮತಗಳನ್ನು ಪಡೆದಿದ್ದರು. ಜೆಡಿಎಸ್‌ನಿಂದ ರಾಜಾಸೋಮನಾಥ ನಾಯಕ್ 11,392 ಮತಗಳನ್ನು ಪಡೆದಿದ್ದರು. ಈ ಬಾರಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+