ರಾಯಚೂರು ಜಿಲ್ಲೆಯಲ್ಲಿ 6 ತಿಂಗಳಿನಿಂದ ಅಂಗನವಾಡಿಗಳಿಗೆ ಹಾಲಿನ ಪೌಡರ್ ಪೂರೈಕೆ ಸ್ಥಗಿತವಾಗಿದ್ದು ಏಕೆ?, ಕಾರಣ ತಿಳಿಯಿರಿ
ರಾಯಚೂರು, ಮೇ, 29: ಮಕ್ಕಳು ಸದೃಢವಾಗಿ ಬೆಳೆಯಬೇಕು ಮತ್ತು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಕಾರಣಕ್ಕೆ ಅಂಗನವಾಡಿಗಳಿಗೆ ಹಾಲಿನ ಪೌಡರ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ, ಜಿಲ್ಲೆ ಸೇರಿ ರಾಜ್ಯಾದ್ಯಂತ ಕಳೆದ ಆರು ತಿಂಗಳಿನಿಂದ ಹಾಲಿನ ಪೌಡರ್ ಸರಬರಾಜು ಸ್ಥಗಿತಗೊಂಡಿದ್ದು, ಮಕ್ಕಳು ಅಪೌಷ್ಟಿಕತೆಯಿಂದ ಬಳಲುವಂತಾಗಿದೆ.
ತೀವ್ರ ಅಪೌಷ್ಟಿಕತೆ ಎದುರಿಸುತ್ತಿರುವ ಜಿಲ್ಲೆ ಸೇರಿ ನಾನಾ ಕಡೆಯ ಅಂಗನವಾಡಿ ಮಕ್ಕಳು ಹಾಗೂ ಗರ್ಭಿಣಿಯರು, ಬಾಣಂತಿಯರಿಗೆ ಹಾಲು ನೀಡಲು ಅಂಗನವಾಡಿ ಮಕ್ಕಳಿಗೆ ಕ್ಷೀರ ಭಾಗ್ಯ, ತಾಯಂದಿರಿಗೆ ಮಾತೃಪೂರ್ಣ ಯೋಜನೆಯಡಿ ಸರ್ಕಾರ ಹಾಲಿನ ಪುಡಿ ಪೂರೈಕೆ ಮಾಡುತ್ತಿತ್ತು. ಆದರೆ ಕಳೆದ ಡಿಸೆಂಬರ್‌ನಿಂದ ಹಾಲಿನ ಪೌಡರ್ ವಿತರಿಸದೆ ಕೇವಲ ಅಕ್ಕಿ, ಸಕ್ಕರೆ ಮಿಶ್ರಣ ಮಾಡಿದ ಹಿಟ್ಟು ನೀಡಲಾಗುತ್ತಿದೆ.

ಮತ್ತೊಂದೆಡೆ ಕೆನೆಭರಿತ ಹಾಲು ನೀಡುತ್ತಿರುವುದರಿಂದ ಅಂಗನವಾಡಿ ಮಕ್ಕಳು ನಿತ್ಯವೂ ಹಾಲು ಕೇಳುತ್ತಿವೆ. ಮಕ್ಕಳಿಗೆ ಹೇಗೊ ಹೇಳಬಹುದು. ಆದರೆ, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಈ ಬಗ್ಗೆ ವಿವರಿಸುವುದು ಕಷ್ಟವಾಗಿದೆ. ಅಂಗನವಾಡಿಗೆ ಬರುವವರು ಹಾಲು ಕೊಡಿ ಎಂದು ಕೇಳುತ್ತಿದ್ದಾರೆ. ನಮಗೂ ಹೇಳಿ ಹೇಳಿ ಸಾಕಾಗಿದೆ ಎನ್ನುತ್ತಾರೆ ಅಂಗನವಾಡಿ ಕಾರ್ಯಕರ್ತೆಯರು.
ಹಾಲಿನ ಕೊರತೆ ಇದಕ್ಕೆ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಹಾಲು ಉತ್ಪಾದಕ ಸಂಘಗಳಲ್ಲಿ ನಿಗಿದಿತ ಪ್ರಮಾಣದ ಹಾಲು ಬಾರದ ಹಿನ್ನೆಲೆ ಹಾಲಿನ ಪೌಡರ್ ವಿತರಣೆಯಾಗುತ್ತಿಲ್ಲಎನ್ನಲಾಗಿದೆ. ಈ ಮಧ್ಯೆ ಕೆಎಂಎಫ್ ಸರಬರಾಜು ಮಾಡುವ ಹಾಲಿನ ಪೌಡರ್ ಬೆಲೆಯಲ್ಲಿ 275 ರಿಂದ 325 ರೂಪಾಯಿ ಏರಿಕೆ ಮಾಡಿದೆ. ಈ ಏರಿಕೆಯ ಬಗ್ಗೆ ಹಣಕಾಸು ಇಲಾಖೆಯಿಂದ ಒಪ್ಪಿಗೆ ಪಡೆದ ನಂತರ ಹಾಲಿನ ಪೌಡರ್ ವಿತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಾಲಿನ ಪೌಡರ್ ಯಾರಿಗೆ ಎಷ್ಟು ಬೇಕಿದೆ?
ರಾಯಚೂರು ಜಿಲ್ಲೆಯಲ್ಲಿ ಪ್ರತಿ ತಿಂಗಳು 40-42 ಕ್ವಿಂಟಾಲ್ ಮಕ್ಕಳಿಗೆ, 8 ರಿಂದ 13 ಕ್ವಿಂಟಾಲ್ ತಾಯಂದಿರಿಗೆ ಹಾಲಿನ ಪೌಡರ್ ಬೇಕಿದೆ. ಡಿಸೆಂಬರ್ ತಿಂಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಹಾಲಿನ ಪುಡಿ ನೀಡಿದ್ದ ಕೆಎಂಎಫ್, ಜನವರಿ ತಿಂಗಳಿನಿಂದ ನೀಡಿಲ್ಲಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಡಿಸೆಂಬರ್ ತಿಂಗಳಿನಿಂದ ಜಿಲ್ಲೆಯಲ್ಲಿ ಹಾಲಿನ ಪೌಡರ್ ಸರಬರಾಜು ಆಗುತ್ತಿಲ್ಲ. ಆದರೆ, ಮಕ್ಕಳು ದಿನವೂ ಹಾಲು ಕೇಳುತ್ತಿದ್ದಾರೆ. ಈ ಕುರಿತು ಮೇಲಾಧಿಕಾರಿಗಳಿಗೆ ತಿಳಿಸಿದರೆ, ಹೊಸ ಸರ್ಕಾರ ಪೂರ್ಣ ಪ್ರಮಾಣದಲ್ಲಿ ರಚನೆಯಾದ ಬಳಿಕ ಹಾಲಿನ ಪೌಡರ್ ಕೊಡಬಹುದು ಎಂದು ಹೇಳುತ್ತಿದ್ದಾರೆ ಅಂತಾ ರಾಯಚೂರು ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಎಚ್.ಪದ್ಮ ತಿಳಿಸಿದ್ದಾರೆ.
ಇನ್ನು ಕಳೆದ ಡಿಸೆಂಬರ್ ತಿಂಗಳಿನಿಂದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಯಲ್ಲಿ ಹಾಲಿನ ಕೊರತೆಯಿಂದ ಅಂಗನವಾಡಿ ಕೇಂದ್ರಗಳಿಗೆ ಹಾಲಿನ ಪೌಡರ್ ವಿತರಣೆ ಮಾಡಿಲ್ಲ. ಸರ್ಕಾರ ಈ ಕುರಿತು ಹೊಸ ಯೋಜನೆ ಜಾರಿಗೆ ತರುತ್ತಿದೆ ಎಂದು ನಮ್ಮ ಮೇಲಾಧಿಕಾರಿಗಳು ತಿಳಿಸಿದ್ದಾರೆ ಅಂತಾ ರಾಯಚೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚೇತನ್ ಕುಮಾರ್ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications