ರಾಯಚೂರಿನಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸಿಕ್ಕಿದ್ದು ಶವವಾಗಿ; ಯುವಕ ಬಂಧನ
ರಾಯಚೂರು, ಆಗಸ್ಟ್ 22: ರಾಯಚೂರಿನ ಬಸ್ ನಿಲ್ದಾಣದಿಂದ ಕಾಣೆಯಾಗಿದ್ದ ವಿದ್ಯಾರ್ಥಿನಿಯೊಬ್ಬಳು ಐದು ದಿನಗಳ ಬಳಿಕ ಆಂಧ್ರ ಪ್ರದೇಶದ ಕರ್ನೂಲ್ ಸಮೀಪ ತುಂಗಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಸಂಬಂಧ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಗಣಮೂರು ಗ್ರಾಮದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಆಗಸ್ಟ್ 16ರಂದು ರಾಯಚೂರಿನ ಬಸ್ ನಿಲ್ದಾಣದಿಂದ ನಾಪತ್ತೆಯಾಗಿದ್ದಳು. ಕಾಲೇಜಿಗೆ ಹೋಗಿ ಬರುವೆನೆಂದು ಹೇಳಿ ಮನೆಯಿಂದ ಹೊರಟಿದ್ದಳು. ಆದರೆ ಸಂಜೆಯಾದರು ಮನೆಗೆ ವಾಪಸ್ಸಾಗಿರಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ಆಗಸ್ಟ್ 17ರಂದು ರಾಯಚೂರು ಮಹಿಳಾ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು.
ಆದರೆ ಆಕೆಯ ಶವ ಐದು ದಿನಗಳ ನಂತರ ಆಂಧ್ರದ ಕರ್ನೂಲ್ ನ ಸುಂಕೇಶ್ವರ ಜಲಾಶಯ ಬಳಿ ತುಂಗಭದ್ರ ನದಿಯಲ್ಲಿ ಪತ್ತೆಯಾಗಿತ್ತು.

ಪೋಷಕರ ಆರೋಪದ ಹಿನ್ನೆಲೆಯಲ್ಲಿ ಗ್ರಾಮದ ಆಟೋ ಚಾಲಕ ವೀರೇಂದ್ರ ಎಂಬುವವನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ತನಿಖೆಯನ್ನ ಮುಂದುವರಿಸಿದ್ದಾರೆ.












Click it and Unblock the Notifications