ಕಾರು ಅಪಘಾತದಲ್ಲಿ ಕಾಂಗ್ರೆಸ್ ಶಾಸಕನ ಮೊಮ್ಮಗ ಸಾವು
ಲಿಂಗಸಗೂರು, ಆಗಸ್ಟ್ 09: ಇಂದು ಮಧ್ಯಾಹ್ನ ಲಿಂಗಸಗೂರಿನ ಹೊರ ವಲಯದಲ್ಲಿ ನಡೆದ ಕಾರು ಅಪಘಾತದಲ್ಲಿ ಕಾಂಗ್ರೆಸ್ ಶಾಸಕರ ಮೊಮ್ಮಗ ಅಸುನೀಗಿದ್ದಾರೆ.
ಲಿಂಗಲಗೂರಿನ ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ಅವರ ಮೊಮ್ಮಗ ಲಿಂಗನಗೌಡ ಅವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಗೆ ಅಪ್ಪಳಿಸಿದ ಪರಿಣಾಮ ಲಿಂಗನಗೌಡ ಅವರು ಸ್ಥಳದಲ್ಲಿಯೇ ಜೀವ ಬಿಟ್ಟಿದ್ದಾರೆ.
ಘಟನೆಯು ಲಿಂಗಸಗೂರು ತಾಲ್ಲೂಕು ಮುದುಗಲ್ ಗ್ರಾಮದ ಹೊರವಲಯದಲ್ಲಿ ನಡೆದಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿ ಲಿಂಗೇಗೌಡ ಹೊರತಾಗಿ ಮತ್ತಾರೂ ಇರಲಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಾಸಕ ಅಮರೇಗೌಡ ಬಯ್ಯಾಪುರ ಅವರು ಕುಷ್ಟಗಿ ಕ್ಷೇತ್ರದಿಂದ ಎರಡನೇ ಗೆದ್ದಿದ್ದಾರೆ. ಈ ಮುಂಚೆ ಲಿಂಗಸಗೂರು ಕ್ಷೇತ್ರದಿಂದ ಎರಡು ಬಾರಿ ಗೆದ್ದಿದ್ದರು. ಅವರು ಸಚಿವ ಸ್ಥಾನ ಆಕಾಂಕ್ಷಿಯೂ ಆಗಿದ್ದರು. ಆದರೆ ಸಂಪುಟದಲ್ಲಿ ಅವರಿಗೆ ಸ್ಥಾನ ಸಿಕ್ಕಿಲ್ಲ. ಈಗ ಮೊಮ್ಮಗನನ್ನು ಕಳೆದುಕೊಂಡಿದ್ದಾರೆ.












Click it and Unblock the Notifications