ನೀತಿ ಸಂಹಿತೆ ಜಾರಿ: ರಾಯಚೂರು ಜಿಲ್ಲೆಯಲ್ಲಿ ಚುನಾವಣಾಧಿಕಾರಿ ತೆಗೆದುಕೊಂಡ ಸೂಕ್ತ ಕ್ರಮಗಳ ವಿವರ ಇಲ್ಲಿದೆ
ರಾಯಚೂರು, ಮಾರ್ಚ್, 30: ಜಿಲ್ಲೆಯಾದ್ಯಂತ ಮಾರ್ಚ್ 29ರಿಂದಲೇ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಆದ್ದರಿಂದ ಯಾವುದೇ ಕಾರ್ಯಕ್ರಮಗಳು, ಪ್ರತಿಭಟನೆಗಳನ್ನು ನಡೆಸುವುದಕ್ಕೆ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ್ ನಾಯಕ ಸೂಚನೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ಬೆಳಗ್ಗೆ 11:30ರ ಒಳಗಾಗಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ನೀಡಿದ ವಾಹನ ಸೌಲಭ್ಯ ಮತ್ತು ಸರ್ಕಾರಿ ಯಾವುದೇ ಕಟ್ಟಡಗಳನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿದೆ. ಚುನಾವಣೆ ನೀತಿ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ವಿವಿಧ ತಂಡಗಳನ್ನು ರಚಿಸಿದ್ದು, ಅವೆಲ್ಲವೂ ಕಾರ್ಯಪ್ರವೃತ್ತವಾಗಿವೆ ಎಂದರು.

ಜಿಲ್ಲೆಯಲ್ಲಿರುವ ಮತಗಟ್ಟೆಗಳ ವಿವರ
ಜಿಲ್ಲೆಯಲ್ಲಿ ಒಟ್ಟು 1,840 ಮತಗಟ್ಟೆಗಳಿದ್ದು, ಎಲ್ಲ ಕಡೆಗಳಲ್ಲೂ ಮೂಲ ಸೌಲಭ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಒಟ್ಟು 16.18 ಲಕ್ಷ ಮತದಾರರಿದ್ದು, ಅದರಲ್ಲಿ 7.9 ಲಕ್ಷ ಪುರುಷ ಮತದಾರರು, 8.21 ಲಕ್ಷ ಮಹಿಳಾ ಮತದಾರರು ಹಾಗೂ 260 ತೃತೀಯ ಲಿಂಗಿ ಮತದಾರರಿದ್ದಾರೆ. ಹಾಗೆಯೇ 13 ಅನಿವಾಸಿ ಭಾರತೀಯ ಮತದಾರರು ಮತ್ತು 281 ಅಂಚೆ ಮತದಾರರು ಇದ್ದಾರೆ.
ಮತದಾರರ ವಿವರ ಇಲ್ಲಿದೆ
ಮತದಾನ ನಡೆಯುವ ಮೇ 10ರ ಎರಡು ದಿನಗಳ ಮೊದಲು ಮತದಾರ ಚೀಟಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೊಸ ಸೇರ್ಪಡೆ, ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು. 18,071 ಅಂಗವಿಕಲ ಮತದಾರರಿದ್ದಾರೆ. 24 ಸಾವಿರ ಮತದಾರರು 80 ವರ್ಷ ಮೇಲ್ಪಟ್ಟವರಿದ್ದಾರೆ. ಅಂಗವಿಕಲರು ಹಾಗೂ 80 ವರ್ಷ ಮೇಲ್ಪಟ್ಟವರಿಗೆಲ್ಲ 12ಬಿ ಅರ್ಜಿ ನಮೂನೆ ಒದಗಿಸಲಾಗುವುದು. ಅಗತ್ಯ ಏನಿಸಿದವರು ಅರ್ಜಿ ಸಲ್ಲಿಸಿದರೆ ಚುನಾವಣಾ ಸಿಬ್ಬಂದಿ ಅವರ ಮನೆಗಳಿಗೇ ತೆರಳಿ ಮತದಾನ ಸಂಗ್ರಹಿಸಿಕೊಳ್ಳಲಿದ್ದಾರೆ ಎಂದರು.

ಮತದಾನ ನಡೆಯುವ ಐದು ದಿನಗಳ ಮೊದಲೇ ಅಂಗವಿಕಲ ಮತ್ತು ವಯಸ್ಸಾದವರಿಂದ ಮತಗಳನ್ನು ಸಂಗ್ರಹಿಸಲಾಗುವುದು. ಇದು ಕೂಡ ಗುಪ್ತ ಮತದಾನ ಆಗಿರುತ್ತದೆ ಎಂದು ಹೇಳಿದರು. ಪ್ರತಿಯೊಂದು ವಿಧಾನಸಭೆ ಕ್ಷೇತ್ರಕ್ಕೆ ಚುನಾವಣಾ ಅಧಿಕಾರಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿಯನ್ನು ನೇಮಿಸಲಾಗಿದ್ದು, ಅಲ್ಲದೆ ಚುನಾವಣೆ ನೀತಿ ಸಂಹಿತೆ ಕುರಿತು ನಿಗಾ ವಹಿಸಲು 68 ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಅಭ್ಯರ್ಥಿಗಳ ಖರ್ಚು ಹಾಗೂ ಮಾಧ್ಯಮಗಳಲ್ಲಿ ಪ್ರಕಟವಾಗುವ ಜಾಹೀರಾತು ಮೊತ್ತ ಇತ್ಯಾದಿ ಅಂಕಿ ಸಂಖ್ಯೆಗಳನ್ನು ಕಲೆಹಾಕಲು ಅಂಕಿ-ಅಂಶ ಜಾಗೃತಿ ತಂಡಗಳನ್ನು ಕೂಡ ಮಾಡಲಾಗಿದೆ. ಅಲ್ಲದೆ ಒಟ್ಟು 23 ಕಡೆಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗುತ್ತಿದ್ದು, ಅಲ್ಲಿ ವಿಡಿಯೋ ಚಿತ್ರೀಕರಣ ತಂಡವೂ ಇರಲಿದೆ ಎಂದು ತಿಳಿಸಿದರು. 50 ಸಾವಿರ ರೂಪಾಯಿ ಮೇಲ್ಪಟ್ಟು ನಗದು ಕಂಡುಬಂದರೆ, ಅದಕ್ಕೆ ಸೂಕ್ತ ದಾಖಲೆಗಳನ್ನು ತೋರಿಸಬೇಕು. ದಾಖಲೆ ತೋರಿಸುವವರೆಗೂ ಅದನ್ನು ಸಂಬಂಧಿಸಿದ ವಿಭಾಗದಲ್ಲಿ ಇರಿಸಲಾಗುತ್ತದೆ ಎಂದರು.
ಸಾರ್ವಜನಿಕವಾಗಿ ನಡೆಯುವ ಯಾವುದೇ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಪಡೆದುಕೊಳ್ಳಲೇಬೇಕು. ಪ್ರತಿಭಟನೆಗಳನ್ನು ಮಾಡುವಂತಿಲ್ಲ. ಪ್ರತಿಭಟನೆ ಮಾಡುವಂತಿದ್ದರೆ ಮೊದಲೇ ಅನುಮತಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ ಮಾತನಾಡಿ, ಯಾವುದೇ ಅಭ್ಯರ್ಥಿ ಪರವಾಗಿ ಮಾಧ್ಯಮಗಳಲ್ಲಿ ಪ್ರಕಟವಾಗುವ ಪೇಯ್ಡ್ ನ್ಯೂಸ್‌ಗಳ ಬಗ್ಗೆ ನಿಗಾ ವಹಿಸುವುದಕ್ಕೆ ಸಮಿತಿ ಮಾಡಲಾಗಿದೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಒಂದು ಮಹಿಳಾ ವಿಶೇಷ ಮತಗಟ್ಟೆ ಹಾಗೂ ಮಾದರಿ ಮತಗಟ್ಟೆಗಳನ್ನು ಮಾಡಲಾಗುವುದು ಎಂದರು.
ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಮತಗಟ್ಟೆಗಳಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಕಲ್ಪಿಸುವುದಕ್ಕೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಮಾತನಾಡಿ, ಚುನಾವಣೆ ನೀತಿ ಸಂಹಿತೆ ಹಾಗೂ ನಿಯಮಗಳ ಕುರಿತು ಈಗಾಗಲೇ ಎರಡು ಸುತ್ತಿನಲ್ಲಿ ಪೊಲೀಸರಿಗೆ ತರಬೇತಿ ನೀಡಲಾಗಿದೆ. ಸಾರ್ವಜನಿಕರು ಯಾವುದೇ ಅಮಿಷಕ್ಕೆ ಒಳಗಾಗದೆ ಮತದಾನ ಮಾಡಬೇಕು. ದೂರು ಸಲ್ಲಿಸಿದರೆ ತಮಗೆ ತೊಂದರೆ ಬರುತ್ತದೆ ಎಂದು ಸಾರ್ವಜನಿಕರು ಆತಂಕ ಪಡಬೇಕಿಲ್ಲ. ದೂರುದಾರರ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದರು.
ರೌಡಿ ಶೀಟರ್‌ಗಳಿಂದ ಬಾಂಡ್ ಪಡೆದುಕೊಳ್ಳಲಾಗಿದೆ
ಜಿಲ್ಲೆಯಲ್ಲಿರುವ ಎಲ್ಲಾ 1679 ರೌಡಿ ಶೀಟರ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಸುಮಾರು 1,400 ರೌಡಿ ಶೀಟರ್‌ಗಳಿಂದ ಬಾಂಡ್ ಪಡೆದುಕೊಳ್ಳಲಾಗಿದೆ. ಇಂತಹ ವ್ಯಕ್ತಿಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಕಾನೂನು ಕ್ರಮ ಜರುಗಿಸಲಾಗುವುದು. ಹಾಗೆಯೇ ಸುಮಾರು 1,200 ಲೀಟರ್ ಅಕ್ರಮ ಮದ್ಯ ಜಪ್ತಿ ಮಾಡಲಾಗಿದೆ. ಇದುವರೆಗೂ 15 ಲಕ್ಷ ರೂಪಾಯಿವರೆಗೂ ದಾಖಲೆಯಿಲ್ಲದ ಹಣವನ್ನು ಜಪ್ತಿ ಮಾಡಲಾಗಿದ್ದು, ದಾಖಲೆ ತೋರಿಸಿದರೆ ಮರಳಿಸಲಾಗುವುದು ಎಂದು ತಿಳಿಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications