ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರು ತಾಲೂಕಿನಲ್ಲಿ ಶಾಲೆಗಳಿಗೆ ರಂಗು ತುಂಬಿದ ನರೇಗಾ

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು ಜಲೈ, 27: ರಾಯಚೂರು ತಾಲ್ಲೂಕಿನ ಡಿ.ಯದ್ಲಾಪುರ ಗ್ರಾಮ ಪಂಚಾಯಿತಿಯು ನರೇಗಾ ಯೋಜನೆ ಅಡಿಯಲ್ಲಿ ಶಾಲಾ ಮಕ್ಕಳಿಗೆ ಸುಸಜ್ಜಿತ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಿದ್ದು, ಗಂಜಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಕರ್ಷಕವಾಗಿ ಭೋಜನಾಲಯ ಕಟ್ಟಡವನ್ನು ನಿರ್ಮಿಸಿದೆ.

ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ನೀಡುವಲ್ಲಿ ಶಾಲಾ ಶಿಕ್ಷಕರು ತೊಂದರೆ ಅನುಭವಿಸುತ್ತಿದ್ದರು. ಇದೀಗ ನರೇಗಾ ಯೋಜನೆಯ ಅಡಿಯಲ್ಲಿ12.50 ಲಕ್ಷ ರೂಪಾಯಿ ವೆಚ್ಚದಲ್ಲಿ ಉತ್ತಮವಾದ ಭೋಜನಾಲಯ ಕಟ್ಟಡ ನಿರ್ಮಿಸಿದ್ದು, ಮಕ್ಕಳು ಒಂದೇ ಕಡೆ ಕುಳಿತು ಊಟ ಮಾಡಲು ಅನುಕೂಲವಾಗಿದೆ.
ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವುದರ ಜೊತೆಗೆ ಶಾಲೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳ ಕಾರ್ಯವೈಖರಿ ಪ್ರಶಂಸೆಗೆ ಕಾರಣವಾಗಿದೆ.

ನರೇಗಾ ಯೋಜನೆಯಡಿ ಆದ್ಯತಾ ಕಾಮಗಾರಿಗಳಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಮೊದಲ ಆಧ್ಯತೆ ನೀಡಿ, ಭೋಜನಾಲಯ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಇದರಿಂದಾಗಿ ಗಂಜಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 359 ಮಕ್ಕಳಿಗೆ ಅನುಕೂಲವಾಗಿದೆ. ಈ ಬಗ್ಗೆ ಡಿ.ಯದ್ಲಾಪುರ ಗ್ರಾಮ ಪಂಚಾಯಿತಿ ಪಿಡಿಒ ಚೆನ್ನಮ್ಮ ಮಾತನಾಡಿ 'ಗ್ರಾಮೀಣ ಸಮುದಾಯವನ್ನು ಅರ್ಥಿಕವಾಗಿ ಸದೃಢ ಪಡಿಸುವಲ್ಲಿ ನರೇಗಾ ಮುಖ್ಯವಾದ ಯೋಜನೆಯಾಗಿದೆ. ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಲು ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆದ್ಯತೆ ನೀಡಲಾಗಿದೆ'ಎಂದರು.

ಶಾಲೆಯ ಅಭಿವೃದ್ಧಿ ಕಾರ್ಯಕ್ಕೆ ಮೊದಲ ಆದ್ಯತೆ

ಶಾಲೆಯ ಅಭಿವೃದ್ಧಿ ಕಾರ್ಯಕ್ಕೆ ಮೊದಲ ಆದ್ಯತೆ

ಮಾನ್ವಿ ತಾಲ್ಲೂಕಿನ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಗಳು ಕೈಜೋಡಿಸಿರುವುದು ಸ್ಥಳೀಯರ ಸಂತಸಕ್ಕೆ ಕಾರಣವಾಗಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಅಡುಗೆ ಕೋಣೆ, ಭೋಜನಾಲಯ, ಕಾಂಪೌಂಡ್ ಗೋಡೆ, ಶೌಚಾಲಯ, ಆಟದ ಮೈದಾನಗಳ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವುದು ಗಮನಾರ್ಹ ಸಂಗತಿಯಾಗಿದೆ. ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವುದರ ಜೊತೆಗೆ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ಮೂಲಕ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಿರುವ ಅಧಿಕಾರಿಗಳ ಕಾರ್ಯವೈಖರಿ ಪ್ರಶಂಸೆಗೆ ಕಾರಣವಾಗಿದೆ.

ಕೂಲಿ ಕಾರ್ಮಿಕರಿಗೂ ಸತತ 7 ದಿನ ಕೆಲಸ

ಕೂಲಿ ಕಾರ್ಮಿಕರಿಗೂ ಸತತ 7 ದಿನ ಕೆಲಸ

ಚೀಕಲಪರ್ವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನರೇಗಾ ಯೋಜನೆ ಅಡಿಯಲ್ಲಿ ಆಕರ್ಷಕ ಕಾಂಪೌಂಡ್ ಗೋಡೆ ನಿರ್ಮಿಸಲಾಗಿದೆ. 24 ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಿಸಲಾಗಿದ್ದು, 180 ಜನ ಕೂಲಿಕಾರ್ಮಿಕರಿಗೆ ಸತತ 7 ದಿನ ಕೆಲಸ ನೀಡಲಾಗಿದೆ. 2020-21ನೇ ಸಾಲಿನಲ್ಲಿ ತಾಲ್ಲೂಕಿನ 17 ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ 52 ಅಡುಗೆ ಕೋಣೆ ನಿರ್ಮಿಸಲಾಗಿದ್ದು, 8 ಕಾಮಗಾರಿಗಳು ಪ್ರಗತಿಯಲ್ಲಿವೆ.

ಯಾವೆಲ್ಲ ಕಾಮಗಾರಿಗಳಿಗೆ ಚಾಲನೆ?

ಯಾವೆಲ್ಲ ಕಾಮಗಾರಿಗಳಿಗೆ ಚಾಲನೆ?

ಮದ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 3 ಶಾಲೆಗಳಿಗೆ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸಲಾಗಿದೆ. ಬ್ಯಾಗವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. 2021-22ನೇ ಸಾಲಿನಲ್ಲಿ 18 ಶಾಲೆಗಳಲ್ಲಿ ಭೋಜನಾಲಯಗಳ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, 8 ಕಾಮಗಾರಿಗಳು ಪೂರ್ಣಗೊಂಡಿವೆ. 6 ಕಾಮಗಾರಿಗಳು ಪ್ರಗತಿಯಲ್ಲಿದ್ದು, 4 ಕಾಮಗಾರಿಗಳು ಆರಂಭವಾಗಬೇಕಿದೆ. 14 ಶಾಲೆಗಳಲ್ಲಿ ಶೌಚಾಲಯಗಳ ವ್ಯವಸ್ಥೆ, 10 ಶಾಲೆಗಳಲ್ಲಿ ಆಟದ ಮೈದಾನ ಹಾಗೂ 16 ಶಾಲೆಗಳಲ್ಲಿ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.

ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು

ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು

ನಂತರ ನರೇಗಾ ಯೋಜನೆಯ ಐಇಸಿ ಸಂಯೋಜಕ ಧನರಾಜ ಮಾತನಾಡಿ, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ನರೇಗಾ ಯೋಜನೆ ಮೂಲಕ ಸರ್ಕಾರಿ ಶಾಲೆಗಳ ಪ್ರಗತಿಗೂ ಆದ್ಯತೆ ನೀಡಲಾಗುತ್ತಿದೆ ಎಂದರು. ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಲು ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆದ್ಯತೆ ನೀಡಲಾಗಿದೆ ಎಂದು ಮಾನ್ವಿ ತಾಲೂಕಿನ ತಾಲ್ಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ

ಅಣ್ಣಾರಾವ್ ಹೇಳಿದರು. ನಂತರ ಸಾಮಾಜಿಕ ಕಾರ್ಯಕರ್ತ ಶರಣಕುಮಾರ ಮುದ್ದಂಗುಡ್ಡಿ ಮಾತನಾಡಿ ನರೇಗಾ ಯೋಜನೆಯಡಿಯಲ್ಲಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿರುವುದು ಉತ್ತಮ ಕಾರ್ಯ ಎಂದರು.

English summary
D. Yadlapura village panchayat of Raichur taluk has come forward to provide well-equipped facilities for school children under the Narega scheme and has constructed an attractive canteen building in Government Senior Primary School of Ganjali village. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X