ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪುಟ ವಿಸ್ತರಣೆ ; ಯಡಿಯೂರಪ್ಪ ಸರ್ಕಾರಕ್ಕಿಲ್ಲ ಧಕ್ಕೆ

|
Google Oneindia Kannada News

ರಾಯಚೂರು, ಜನವರಿ 25: ಸಂಪುಟ ವಿಸ್ತರಣೆ ಯಾವಾಗ?. ಕರ್ನಾಟಕದಲ್ಲಿ ಬಹು ಚರ್ಚಿತವಾಗಿರುವ ವಿಚಾರ ಇದು. ಅದರಲ್ಲಿಯೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶುಕ್ರವಾರ ರಾಜ್ಯಕ್ಕೆ ವಾಪಸ್ ಆದ ಬಳಿಕ ಚರ್ಚೆ ಕಾವೇರಿದೆ.

ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಮಸ್ಕಿಯಲ್ಲಿ ಮಾಧ್ಯಮಗಳ ಜೊತೆ ಶನಿವಾರ ಮಾತನಾಡಿದರು. "ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಬಿಜೆಪಿಗೆ ಬಂದಿರುವ 17 ಶಾಸಕರಿಂದ ರಾಜ್ಯದ ಬಿಜೆಪಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ" ಎಂದರು.

ಬೆಂಗಳೂರಿಗೆ ಬರ್ತಿದ್ದಂತೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಯಡಿಯೂರಪ್ಪ ಬೆಂಗಳೂರಿಗೆ ಬರ್ತಿದ್ದಂತೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಯಡಿಯೂರಪ್ಪ

2018ರಲ್ಲಿ ಕಾಂಗ್ರೆಸ್‌ನಿಂದ ಮಸ್ಕಿ ಕ್ಷೇತ್ರದಲ್ಲಿ ಗೆದ್ದಿದ್ದ ಪ್ರತಾಪ್ ಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸ್ಪೀಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದರು. ಮಸ್ಕಿ ಕ್ಷೇತ್ರದ ಉಪ ಚುನಾವಣೆ ಇನ್ನೂ ಘೋಷಣೆಯಾಗಬೇಕಿದ್ದು, ಪ್ರತಾಪ್ ಗೌಡ ಪಾಟೀಲ್ ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ.

ಸಂಪುಟ ವಿಸ್ತರಣೆಗೂ ಮುನ್ನ ಸಂತೋಷ್, ಸಿಎಂ ಭೇಟಿ: ಚರ್ಚೆ ಏನಾಯ್ತು?ಸಂಪುಟ ವಿಸ್ತರಣೆಗೂ ಮುನ್ನ ಸಂತೋಷ್, ಸಿಎಂ ಭೇಟಿ: ಚರ್ಚೆ ಏನಾಯ್ತು?

ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಯಡಿಯೂರಪ್ಪ ದೆಹಲಿಗೆ ತೆರಳುವುದಾಗಿ ಹೇಳಿದ್ದಾರೆ. ಆದರೆ, ವರಿಷ್ಠರ ಭೇಟಿಗೆ ಇನ್ನೂ ಅವಕಾಶ ಸಿಕ್ಕಿಲ್ಲ.

 ಸಂಪುಟ ವಿಸ್ತರಣೆಯಾದರೆ ಸ್ಫೋಟ ಗ್ಯಾರಂಟಿ ಎಂದ ಸಿದ್ದು ಸಂಪುಟ ವಿಸ್ತರಣೆಯಾದರೆ ಸ್ಫೋಟ ಗ್ಯಾರಂಟಿ ಎಂದ ಸಿದ್ದು

ಪ್ರತಾಪ್ ಗೌಡ ಪಾಟೀಲ್ ಹೇಳಿದ್ದೇನು?

ಪ್ರತಾಪ್ ಗೌಡ ಪಾಟೀಲ್ ಹೇಳಿದ್ದೇನು?

"ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಬಿಜೆಪಿಗೆ ಬಂದ ಎಲ್ಲರೂ ಸಚಿವರಾಗುತ್ತಾರೆ. ಮಸ್ಕಿ ಮತ್ತು ಆರ್. ಆರ್. ನಗರ ಉಪ ಚುನಾವಣೆ ಬಳಿಕ ನಾನು ಮಂತ್ರಿ ಆಗುತ್ತೇನೆ. ಮಂತ್ರಿ ಆಗಲಿಲ್ಲ ಎಂದು ಯಾವ ಶಾಸಕರು ಬಂಡಾಯ ಏಳುವುದಿಲ್ಲ" ಎಂದು ಪ್ರತಾಪ್ ಗೌಡ ಪಾಟೀಲ್ ಹೇಳಿದರು.

ಸಂಪುಟ ವಿಸ್ತರಣೆ ತಡವಾಗಿದೆ

ಸಂಪುಟ ವಿಸ್ತರಣೆ ತಡವಾಗಿದೆ

"ಸಚಿವ ಸಂಪುಟ ವಿಸ್ತರಣೆ ಸ್ವಲ್ಪ ಮಟ್ಟಿಗೆ ತಡವಾಗಿದೆ. ಇನ್ನೆರಡು ದಿನದಲ್ಲಿ 11 ಶಾಸಕರನ್ನು ಸಚಿವರನ್ನಾಗಿ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಹದಿನೇಳು ಶಾಸಕರಿಂದ ಸರ್ಕಾರಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ" ಎಂದು ಪ್ರತಾಪ್ ಗೌಡ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ನಾನು ಗೆದ್ದು ಬರುತ್ತೇನೆ

ನಾನು ಗೆದ್ದು ಬರುತ್ತೇನೆ

ಮಸ್ಕಿ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಮಾತನಾಡಿದ ಪ್ರತಾಪ್ ಗೌಡ ಪಾಟೀಲ್, "ಯಾವುದೇ ಸಮಯದಲ್ಲಿ ಉಪ ಚುನಾವಣೆ ನಡೆದರೂ ನಾನು ಗೆದ್ದು ಬರುತ್ತೇನೆ. ಬಳಿಕ ಸಚಿವನಾಗುತ್ತೇನೆ" ಎಂದು ಹೇಳಿದರು.

ಯಡಿಯೂರಪ್ಪ ದೆಹಲಿಗೆ?

ಯಡಿಯೂರಪ್ಪ ದೆಹಲಿಗೆ?

ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದೆಹಲಿಗೆ ತೆರಳಬೇಕು. ಸೋಮವಾರ ಅವರು ದೆಹಲಿ ಪ್ರವಾಸ ಕೈಗೊಳ್ಳುವ ನಿರೀಕ್ಷೆ ಇದೆ.

English summary
By the cabinet expansion crisis there is no threat for B. S. Yediyurappa lead BJP government in Karnataka said Pratap Gowda Patil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X