ಬಿಗ್ ನ್ಯೂಸ್: ವೃದ್ದಾಪ್ಯ ವೇತನ, ಅಂಗವಿಕಲ ಮಾಸಾಶನ ಹೆಚ್ಚಿಸಿದ ಸಿಎಂ
ರಾಯಚೂರು, ಜೂನ್ 26: ವೃದ್ದಾಪ್ಯ ವೇತನವನ್ನು 1000 ರಿಂದ ಎರಡು ಸಾವಿರಕ್ಕೆ ಹಾಗೂ ಅಂಗವಿಕಲರ ಮಾಸಾಶನವನ್ನು 2500 ವರೆಗೆ ಏರಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ರಾಯಚೂರಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು ಈ ಭರವಸೆ ನೀಡಿದ್ದು, ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ.
ಈ ಮೊದಲು ಹಿರಿಯ ನಾಗರಿಕರಿಗೆ ಇದ್ದ 600ಮಾಸಾಶನವನ್ನು1 ಸಾವಿರಕ್ಕೆ ಹೆಚ್ಚಿಸಿದ್ದೆ. ಈಗ ಅದನ್ನು 2 ಸಾವಿರಕ್ಕೆ ಹಾಗೂ ವಿಕಲಚೇತನರೂ ನೆಮ್ಮದಿಯಿಂದ ಇರಬೇಕು ಎಂಬ ದೃಷ್ಟಿಯಿಂದ ಅವರ ಮಾಸಾಶನವನ್ನು 2500ಕ್ಕೆ ಹೆಚ್ಚಿಸಲು ನಿರ್ಧರಿಸಿದ್ದೇನೆ ಎಂದರು.

ಕೃಷಿ ಅಭಿವೃದ್ಧಿಗೆ ಸರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕೃಷಿಕರು ಸುಸ್ಥಿರ ಬದುಕು ರೂಪಿಸಿಕೊಳ್ಳುವುದಕ್ಕೆ ಮುಂದಾಗಬೇಕು ಎಂದ ಅವರು, ಎನ್ ಪಿಎಸ್ ನೌಕಕರ ನೋವು ನನಗೆ ಅರ್ಥವಾಗಿದ್ದು, ಎನ್ ಪಿಎಸ್ ರದ್ದು ಮಾಡಬೇಕೇ ಬೇಡವೇ ಎಂಬುದಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದ್ದು, ವರದಿ ಬಂದ ತಕ್ಷಣ ತಮ್ಮನ್ನು ಕರೆದು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ಅನಗತ್ಯ ಟೀಕೆ ಮಾಡುವ ಪ್ರತಿಪಕ್ಷಗಳಿಗೆ ತಮ್ಮ ಶೈಲಿಯಲ್ಲಿಯೇ ಚಾಟಿ ಬಿಸಿದ ಸಿಎಂ ಅವರು ರಾಯಚೂರು ಜಿಲ್ಲೆಯಲ್ಲಿ 272.22ಕೋಟಿ ರೂ. ರೈತರ ಸಾಲಮನ್ನಾಗೆ ಇದುವರೆಗೆ ರಾಯಚೂರು ಜಿಲ್ಲೆಗೆ ಸಂದಾಯ ಮಾಡಲಾಗಿದೆ ಎಂದು ಹೇಳಿದರು. ಪ್ರಾಮಾಣಿಕವಾಗಿ ರೈತರ ಸಾಲಮನ್ನಾಗೆ ಹಾಗೂ ರೈತರ ಕಲ್ಯಾಣಕ್ಕೆ ಶ್ರಮಿಸುತ್ತಿರುವುದಾಗಿ ತಿಳಿಸಿದ ಸಿಎಂ ಕುಮಾರಸ್ವಾಮಿ ಅವರು ರೈತರ ಸಾಲಮನ್ನಕ್ಕಾಗಿ ಒಂದು ವರ್ಷದಲ್ಲಿಯೇ 25ಸಾವಿರ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications