ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉದ್ದ ಸಾಲು; ಮದ್ಯ ಆಯ್ತು, ಈಗ ಗುಟ್ಕಾ ಸರದಿ

|
Google Oneindia Kannada News

ರಾಯಚೂರು, ಮೇ 8: ಲಾಕ್ ಡೌನ್ ಬಳಿಕ ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬಳಿಕ, ಮದ್ಯದ ಅಂಗಡಿಗಳ ಮುಂದೆ ಮದ್ಯವ್ಯಸನಿಗಳು ಉದ್ದುದ್ದ ಸಾಲಿನಲ್ಲಿ ನಿಂತು ಮದ್ಯ ಖರೀದಿಸಿದ್ದರು. ಈಗ ಗುಟ್ಕಾ, ಸಿಗರೇಟ್ ಅಂಗಡಿಗಳ ಮುಂದೆ ದೊಡ್ಡ ದೊಡ್ಡ ಸಾಲು ಕಾಣಿಸುತ್ತಿದೆ.

Recommended Video

ನಮ್ಮನ್ನು ರಕ್ಷಿಸುತ್ತಿರುವವರನ್ನು ಗೌರವಿಸೋಣ ಎಂದ ಶಿವಣ್ಣ | Shivanna | Corona Warriors

ಪಾನ್ ಬೀಡಾ ಅಂಗಡಿಗಳ ವ್ಯಾಪಾರಕ್ಕೆ ಅವಕಾಶ ಸಿಕ್ಕ ಹಿನ್ನೆಲೆ ಸಗಟು ಅಂಗಡಿಗಳ ಮುಂದೆ ವ್ಯಾಪಾರ ಜೋರಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನೂರಾರು ಜನರಿಂದ ಭರ್ಜರಿ ವ್ಯಾಪಾರ ನಡೆದಿದೆ. ಮಾನ್ವಿಯ ಸಗಟು ವ್ಯಾಪಾರ ಅಂಗಡಿಗಳ ಮುಂದೆ ಜನಜಂಗುಳಿ ಸೇರಿದ್ದು ಸಾಮಾಜಿಕ ಅಂತರ, ಮಾಸ್ಕ್ ಗಳನ್ನು ಮರೆತು ಗುಟ್ಕಾ ಪ್ಯಾಕೆಟ್ ಗಳನ್ನು ಜನ ತೆಗೆದುಕೊಳ್ಳುತ್ತಿದ್ದಾರೆ.

ಸಾಲಿನಲ್ಲಿ ನಿಂತ ಪಾನ್ ಬೀಡ ಅಂಗಡಿ, ಕಿರಾಣಿ ಅಂಗಡಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕೊರೊನಾ ವೈರಸ್ ಭೀತಿಯನ್ನು ಕಡೆಗಣಿಸಿದ್ದಾರೆ. ಗ್ರಾಮೀಣ ಭಾಗದಿಂದಲೂ ನೂರಾರು ಜನ ಗುಟ್ಕಾ ಪ್ಯಾಕೆಟ್ ಗಳನ್ನು ತೆಗೆದುಕೊಂಡು ಹೋದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

People Stand Long Line To Buy Gutka In Manvi

ಮೇ 4 ರಂದು ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಈ ಬೆನ್ನಲ್ಲೇ ಮದ್ಯದಂಗಡಿಗಳು ಓಪನ್ ಆಗಿದ್ದವು. ಇದೇ ಸಂದರ್ಭದಲ್ಲಿ 42 ದಿನಗಳ ಕಾಲ ಮದ್ಯವಿಲ್ಲದೆ ಕಂಗಾಲಾಗಿದ್ದ ಎಣ್ಣೆಪ್ರಿಯರು ಬಿಸಿಲು ಎನ್ನದೇ ಸರತಿ ಸಾಲಿನಲ್ಲಿ ನಿಂತು ಮದ್ಯ ಖರೀದಿ ಮಾಡಿದ್ದರು. ಆದರೆ ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಈಗ ಗುಟ್ಕಾಪ್ರಿಯರ ಸರದಿಯಾಗಿದೆ.

English summary
People Stand Long line For Buying Gutka, Cigarettes in Manvi Taluk, Raichur District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X