ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ವ್ಯಕ್ತಿ ಸಾವು; ಗ್ರಾಮಸ್ಥರ ಆಕ್ರೋಶ

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಏಪ್ರಿಲ್ 13: ರಾಯಚೂರಿನ ಲಿಂಗಸುಗೂರಿನ ದೇವರಭೂಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ವಾಂತಿ ಭೇದಿಯಿಂದ ಸಾವನ್ನಪ್ಪಿದ್ದು, ಸೂಕ್ತ ಚಿಕಿತ್ಸೆ ಸಿಗದೆ ಈ ಸಾವು ಸಂಭವಿಸಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಜೊತೆಗೆ ಗ್ರಾಮದಲ್ಲಿ ನೀರಿನ ಸಮಸ್ಯೆಯೇ ಈ ಅವಘಡಕ್ಕೆ ಕಾರಣ ಎಂದು ದೂರಿದ್ದಾರೆ.

 ವಿಷಾಹಾರ ಸೇವಿಸಿ ಬಳ್ಳಾರಿಯಲ್ಲಿ 450 ಕ್ಕೂ ಹೆಚ್ಚು ಜ‌ನ ಅಸ್ವಸ್ಥ ವಿಷಾಹಾರ ಸೇವಿಸಿ ಬಳ್ಳಾರಿಯಲ್ಲಿ 450 ಕ್ಕೂ ಹೆಚ್ಚು ಜ‌ನ ಅಸ್ವಸ್ಥ

ಗ್ರಾಮದ ಮಲ್ಲಪ್ಪ ಗುರಗುಂಟಾ (52) ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ವಾಂತಿ ಭೇದಿಯಿಂದಾಗಿ ಸಾವನ್ನಪ್ಪಿದ್ದಾರೆ. ಕಲುಷಿತ ನೀರನ್ನು ಸೇವಿಸಿ ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿದ್ದರಿಂದ ಗ್ರಾಮದ ಮಲ್ಲಪ್ಪ ಗುರಗುಂಟಾ ಸಾವನ್ನಪ್ಪಿದ್ದಾರೆ ಎಂಬ ಆರೋಪ ಗ್ರಾಮಸ್ಥರದ್ದು.

Person Died By Drinking Polluted Water In Lingasuguru

ಮೂರು ದಿನಗಳಿಂದ ಜನ ನರಳಾಡುತ್ತಿದ್ದರೂ ಗ್ರಾಮದಲ್ಲಿ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಬಾವಿ, ಕಾಲುವೆಯ ಕಲುಷಿತ ನೀರು ಕುಡಿದು ಜನರು ಅಸ್ವಸ್ಥರಾಗಿದ್ದಾರೆ. ಕೂಡಲೇ ಗ್ರಾಮದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು, ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ದೇವರಭೂಪುರ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

English summary
A person died by not getting treatment intime in lingasuguru of raichur district. He was admitted to hospital by drinking polluted water in devarabhupura village,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X