ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಂಗಭದ್ರಾ ಪುಷ್ಕರಕ್ಕೆ ಮಂತ್ರಾಲಯದಲ್ಲಿ ಆರಂಭಗೊಂಡ ಸಿದ್ಧತೆ

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಜೂನ್ 17: ಲಾಕ್‌ಡೌನ್ ಸಡಿಲಿಕೆಯಿಂದ ದೇವಸ್ಥಾನಗಳನ್ನು ತೆರೆಯಲು ಅನುಮತಿ ಸಿಕ್ಕಿದ್ದರೂ ಮಂತ್ರಾಲಯ ರಾಯರ ದರ್ಶನದ ದಿನಾಂಕವನ್ನು ಮುಂದೂಡಲಾಗಿದೆ.

ಕೊರೊನಾ ವೈರಸ್‌ ಸೋಂಕಿನ ಕಾರಣ ಮಂತ್ರಾಲಯದಲ್ಲಿ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದ್ದು, ಅದರ ಸಿದ್ಧತಾ ಕಾರ್ಯ ಪೂರ್ಣವಾದ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮಠದ ನೂತನ ವ್ಯವಸ್ಥಾಪಕ ವೆಂಕಟೇಶ್ ಜೋಶಿ ಮಾಹಿತಿ ನೀಡಿದ್ದರು.

ಮಂತ್ರಾಲಯ ಭಕ್ತರ ಗಮನಕ್ಕೆ: ದರ್ಶನ ದಿನಾಂಕ ಮತ್ತೆ ಮುಂದಕ್ಕೆಮಂತ್ರಾಲಯ ಭಕ್ತರ ಗಮನಕ್ಕೆ: ದರ್ಶನ ದಿನಾಂಕ ಮತ್ತೆ ಮುಂದಕ್ಕೆ

ಇದೀಗ ಇದೇ ನವೆಂಬರ್ 1ರಿಂದ ತುಂಗಭದ್ರಾ ಪುಷ್ಕರ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ತಟದಲ್ಲಿರುವ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಸನ್ನಿಧಾನದಲ್ಲಿ ಪುಷ್ಕರಕ್ಕೆ ಸಿದ್ಧತೆ ಆರಂಭಗೊಂಡಿದೆ. ತುಂಗಭದ್ರಾ ಪುಷ್ಕರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆಯಿದ್ದು, ಪುಣ್ಯಸ್ನಾನಕ್ಕಾಗಿ ಪುಷ್ಕರದ ಘಾಟ್ ‌ಗಳನ್ನು ಸಿದ್ಧಪಡಿಸಲಾಗುತ್ತಿದೆ.

Preparations In Mantralaya For Tungabhadra Pushkara

ಕರ್ನೂಲ್ ಜಿಲ್ಲೆಯಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕರ್ನೂಲ್ ಎಸ್ ಪಿ ಫಕ್ಕೀರಪ್ಪ ಮಠಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮಂತ್ರಾಲಯದ ಆಡಳಿತ ಮಂಡಳಿ ಜೊತೆ ಸಭೆ ನಡೆಸಿ ಸಿದ್ಧತೆ‌ ಕುರಿತು ವೀಕ್ಷಿಸಿದ್ದಾರೆ. ಸಾಮಾಜಿಕ ಅಂತರ ಹಾಗೂ ಇತರೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಶ್ರೀ ಮಠದ ಅಧಿಕಾರಿಗಳಿಗೆ ಎಸ್ಪಿ ಸಲಹೆ ನೀಡಿದ್ದಾರೆ.

English summary
As Tungabhadra Pushkara begins on November 1, the preparations for the Pushkara is taking place at Mantralaya
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X