ಗ್ರಾಮ ವಾಸ್ತವ್ಯದ ವೇಳೆ ಪ್ರತಿಭಟನೆ, ಇಬ್ಬರು ಪೊಲೀಸರ ಅಮಾನತು
ರಾಯಚೂರು, ಜೂನ್ 28 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯದ ವೇಳೆ ಭದ್ರತಾ ವೈಫಲ್ಯ ನಡೆದಿದೆ ಎಂದು ಆರೋಪಿಸಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕುಮಾರಸ್ವಾಮಿ ಚಲಿಸುತ್ತಿದ್ದ ಸರ್ಕಾರಿ ಬಸ್ ಅಡ್ಡಗಟ್ಟಿ ಪ್ರತಿಭಟನೆ ನಡೆಸಲಾಗಿತ್ತು.
ರಾಯಚೂರಿನ ಸಿಪಿಐ ದತ್ತಾತ್ರೇಯ, ಪಿಎಸ್ಐ ನಿಂಗಪ್ಪ ಅವರನ್ನು ಅಮಾನತು ಮಾಡಿ ಶುಕ್ರವಾರ ಆದೇಶ ಹೊರಡಿಸಲಾಗಿದೆ. ಯಮರಸ್ ಸರ್ಕ್ಯೂಟ್ ಹೌಸ್ ಬಳಿ ಜೂನ್ 26ರಂದು ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಪ್ರತಿಭಟನೆ ನಡೆದಿತ್ತು.
ಗ್ರಾಮ ವಾಸ್ತವ್ಯಕ್ಕಾಗಿ ಕುಮಾರಸ್ವಾಮಿ ಅವರು ರಾಯಚೂರಿನಿಂದ ಸರ್ಕಾರಿ ಬಸ್‌ನಲ್ಲಿ ಮಾನ್ವಿ ತಾಲೂಕಿನ ಕರೇಗುಡ್ಡ ಗ್ರಾಮಕ್ಕೆ ತೆರಳುತ್ತಿದ್ದರು. ಆಗ ವೈಟಿಪಿಎಸ್ ಕಾರ್ಮಿಕರ ಸಂಘದ ಸದಸ್ಯರು ಬಸ್ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ನಡೆಸಿದರ ವಿರುದ್ಧ ಆಕ್ರೋಶಗೊಂಡಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, 'ನರೇಂದ್ರ ಮೋದಿಗೆ ವೋಟ್ ಹಾಕ್ತೀರಿ. ಸಮಸ್ಯೆ ನಾನು ಬಗೆಹರಿಸಬೇಕಾ?' ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಯಮರಸ್ ಸರ್ಕ್ಯೂಟ್ ಹೌಸ್ ಬಳಿ ನಡೆದ ಪ್ರತಿಭಟನೆಗೆ ಭದ್ರತಾ ವೈಫಲ್ಯ ಕಾರಣ ಎಂದು ಆರೋಪಿಸಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.












Click it and Unblock the Notifications