ರಾಯಚೂರು : ಸಿಎಂ ವಿರುದ್ಧ ಪ್ರತಿಭಟನೆ, 50 ಜನರ ವಿರುದ್ಧ ಪ್ರಕರಣ
ರಾಯಚೂರು, ಜೂನ್ 30 : ರಾಯಚೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 50 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಗ್ರಾಮ ವಾಸ್ತವ್ಯಕ್ಕೆ ತೆರಳುವ ವೇಳೆ ಬಸ್ ತಡೆದು ಪ್ರತಿಭಟನೆ ಮಾಡಲಾಗಿತ್ತು.
ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯಕ್ಕಾಗಿ ರಾಯಚೂರಿನಿಂದ ಸರ್ಕಾರಿ ಬಸ್‌ನಲ್ಲಿ ಮಾನ್ವಿ ತಾಲೂಕಿನ ಕರೇಗುಡ್ಡ ಗ್ರಾಮಕ್ಕೆ ತೆರಳುತ್ತಿದ್ದರು. ಆಗ ವೈಟಿಪಿಎಸ್ ಕಾರ್ಮಿಕರ ಸಂಘದ ಸದಸ್ಯರು ಬಸ್ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಗೆ ಭದ್ರತಾ ಲೋಪವೇ ಕಾರಣ ಎಂದು ಆರೋಪಿಸಿ ಯುರಗೇರಾ ವೃತ್ತದ ಇನ್ಸ್‌ಪೆಕ್ಟರ್ ದತ್ತಾತ್ರೇಯ ಕಾರ್ನಾಡ ಮತ್ತು ರಾಯಚೂರು ಗ್ರಾಮೀಣ ಠಾಣೆ ಸಬ್ ಇನ್ಸ್‌ಪೆಕ್ಟರ್ ನಿಂಗಪ್ಪ ಅವರನ್ನು ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಅಮಾತನು ಮಾಡಿದ್ದರು.
ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರತಿಭಟನೆಗೆ ಸಂಬಂಧಿಸಿದಂತೆ 50 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಟಿಯುಸಿಐ ಅಧ್ಯಕ್ಷ ಆರ್.ಮಾನಸಯ್ಯ, ಕಾರ್ಯದರ್ಶಿ ಜಿ.ಅಮರೇಶ ಸೇರಿದಂತೆ ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.
ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಕಾನೂನು ವಿರುದ್ಧ ಗುಂಪು ರಚನೆ, ದಂಗೆ, ಕಾನೂನು ವಿರುದ್ಧ ಚಟುವಟಿಕೆಯಲ್ಲಿ ಎಲ್ಲರೂ ಭಾಗಿದಾರರು ಹಾಗೂ ಒಬ್ಬ ವ್ಯಕ್ತಿಗೆ ತಡೆಹಾಕಿ ಆರೋಪದಡಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲು ಮಾಡಲಾಗಿದೆ.












Click it and Unblock the Notifications