ರಾಯಚೂರು: ಕುಡಿಯುವ ನೀರಿಗಾಗಿ ಪ್ರತಿ ತಾಲ್ಲೂಕಿಗೆ 15 ರಿಂದ 20 ಲಕ್ಷ ಅನುದಾನ
ರಾಯಚೂರು, ಮೇ.13: ರಾಯಚೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕಾಗಿ ಪ್ರತಿ ತಾಲ್ಲೂಕಿಗೆ 15 ರಿಂದ 20 ಲಕ್ಷ ಅನುದಾನ ಮೀಸಲಿಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಲಾರಿ ನೂರ್ ಜಹಾರ್ ಖಾನಂ ಹೇಳಿದರು.
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಕುಡಿಯುವ ನೀರಿನ ಸಮಸ್ಯೆ ಕುರಿತ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಸಮಸ್ಯೆ ಕಾಣಿಸಿಕೊಳ್ಳುವ ಗ್ರಾಮಗಳಿಗೆ ನೀರು ಒದಗಿಸುವುದಕ್ಕೆ ಅಧಿಕಾರಿಗಳು ಕ್ರಮ ವಹಿಸಬೇಕು. ಅನಗತ್ಯ ಇರುವ ಕಡೆಗಳಲ್ಲಿ ಮಾತ್ರ ಕೊಳವೆ ಬಾಗಿ ಕೊರೆಸುವುದು ಮತ್ತು ಪೈಪ್‌ಲೈನ್ ಅಳವಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಗತ್ಯ ಇರುವ ಕಡೆಗಳಲ್ಲಿ ಮಾತ್ರ ಕೊಳವೆ ಬಾಗಿ ಕೊರೆಸಬೇಕು..!
ರಾಯಚೂರು ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿ ಪಡೆದು ನೀರು ಒದಗಿಸುತ್ತಿರುವ ಕಡೆಗಳಲ್ಲಿ ಪೈಪ್‌ಲೈನ್ ಅಳವಡಿಸುವುದಕ್ಕೆ ಅವಕಾಶ ಇರುವುದಿಲ್ಲ. ಬೇಸಿಗೆಯಲ್ಲಿ ಮಾತ್ರ ಅವು ಬಳಕೆಗೆ ಬರುತ್ತವೆ. ಹೀಗಾಗಿ ಸದ್ಯಕ್ಕೆ ಪೈಪ್‌ಲೈನ್ ಅಳವಡಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬಾರದು. ಮಳೆಗಾಲ ಬಳಿಕ ಪೈಪ್‌ಲೈನ್ ಬಳಕೆಯಾಗುವುದಿಲ್ಲ ಎಂದು ತಿಳಿಸಿದರು.

ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಅಂತಹ ಗ್ರಾಮಗಳನ್ನ ಕುರಿತು ಮಾತನಾಡಿದ ಅವರು, ಗ್ರಾಂಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ರಾಯಚೂರು ತಾಲ್ಲೂಕಿನ ಕಮಲಾಪೂರ ಗ್ರಾಮದಲ್ಲಿ ಕೊಳವೆಬಾವಿ ಕೊರೆಸುವ ಜೊತೆಗೆ ಪೈಪ್‌ಲೈನ್ ಅಳವಡಿಸುವ ಅಗತ್ಯವಿದೆ. ಗಿಲ್ಲೇಸುಗೂರು ಕ್ಯಾಂಪ್‌ನಲ್ಲಿ ನೀರಿನ ಸಮಸ್ಯೆ ಇದೆ. ವಡವಾಟಿ ಗ್ರಾಮದಲ್ಲೂ ಕೊಳವೆಬಾವಿ ಮತ್ತು ಪೈಪ್‌ಲೈನ್ ಮಾಡಬೇಕಿದೆ.
ಹಳೆಯ ಪೈಪ್ ಲೈನ್ ಬದಲಿಸುವಂತೆ ಸಿಇಓಗೆ ಅಧಿಕಾರಿಗಳ ಬೇಡಿಕೆ..!
ಮನ್ಸಲಾಪೂರ ಗ್ರಾಮಕ್ಕೆ ರಾಯಚೂರು ನಗರದ ಪೈಪ್‌ಲೈನ್ ಅಳವಡಿಸಿದ್ದು, ಅದು ಹಳೆಯದಾಗಿದೆ. ಕೂಡಲೇ ಪೈಪ್‌ಲೈನ್ ಬದಲಾಯಿಸಬೇಕಿದೆ. ಸಿದ್ರಾಂಪುರ, ಬೊಳಮಾನದೊಡ್ಡಿ ಗ್ರಾಮಗಳಲ್ಲಿ ಒಂದೇ ಕೊಳವೆಬಾವಿ ಇದ್ದು, ಸಮರ್ಪಕವಾಗಿ ನೀರು ಪೂರೈಸುವುದಕ್ಕೆ ಸಮಸ್ಯೆ ಆಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಅಧಿಕಾರಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ವಿವಿಧ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಭಾಗವಹಿಸಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications