ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರು: ಕುಡಿಯುವ ನೀರಿಗಾಗಿ ಪ್ರತಿ ತಾಲ್ಲೂಕಿಗೆ 15 ರಿಂದ 20 ಲಕ್ಷ ಅನುದಾನ

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಮೇ.13: ರಾಯಚೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕಾಗಿ ಪ್ರತಿ ತಾಲ್ಲೂಕಿಗೆ 15 ರಿಂದ 20 ಲಕ್ಷ ಅನುದಾನ ಮೀಸಲಿಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಲಾರಿ ನೂರ್‌ ಜಹಾರ್ ಖಾನಂ ಹೇಳಿದರು.

ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಕುಡಿಯುವ ನೀರಿನ ಸಮಸ್ಯೆ ಕುರಿತ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಸಮಸ್ಯೆ ಕಾಣಿಸಿಕೊಳ್ಳುವ ಗ್ರಾಮಗಳಿಗೆ ನೀರು ಒದಗಿಸುವುದಕ್ಕೆ ಅಧಿಕಾರಿಗಳು ಕ್ರಮ ವಹಿಸಬೇಕು. ಅನಗತ್ಯ ಇರುವ ಕಡೆಗಳಲ್ಲಿ ಮಾತ್ರ ಕೊಳವೆ ಬಾಗಿ ಕೊರೆಸುವುದು ಮತ್ತು ಪೈಪ್‌ಲೈನ್‌ ಅಳವಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಗತ್ಯ ಇರುವ ಕಡೆಗಳಲ್ಲಿ ಮಾತ್ರ ಕೊಳವೆ ಬಾಗಿ ಕೊರೆಸಬೇಕು..!

ರಾಯಚೂರು ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿ ಪಡೆದು ನೀರು ಒದಗಿಸುತ್ತಿರುವ ಕಡೆಗಳಲ್ಲಿ ಪೈಪ್‌ಲೈನ್‌ ಅಳವಡಿಸುವುದಕ್ಕೆ ಅವಕಾಶ ಇರುವುದಿಲ್ಲ. ಬೇಸಿಗೆಯಲ್ಲಿ ಮಾತ್ರ ಅವು ಬಳಕೆಗೆ ಬರುತ್ತವೆ. ಹೀಗಾಗಿ ಸದ್ಯಕ್ಕೆ ಪೈಪ್‌ಲೈನ್‌ ಅಳವಡಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬಾರದು. ಮಳೆಗಾಲ ಬಳಿಕ ಪೈಪ್‌ಲೈನ್‌ ಬಳಕೆಯಾಗುವುದಿಲ್ಲ ಎಂದು ತಿಳಿಸಿದರು.

Raichur: 15 to 20 lakhs grant reserve for each taluka

ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಅಂತಹ ಗ್ರಾಮಗಳನ್ನ ಕುರಿತು ಮಾತನಾಡಿದ ಅವರು, ಗ್ರಾಂಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ರಾಯಚೂರು ತಾಲ್ಲೂಕಿನ ಕಮಲಾಪೂರ ಗ್ರಾಮದಲ್ಲಿ ಕೊಳವೆಬಾವಿ ಕೊರೆಸುವ ಜೊತೆಗೆ ಪೈಪ್‌ಲೈನ್‌ ಅಳವಡಿಸುವ ಅಗತ್ಯವಿದೆ. ಗಿಲ್ಲೇಸುಗೂರು ಕ್ಯಾಂಪ್‌ನಲ್ಲಿ ನೀರಿನ ಸಮಸ್ಯೆ ಇದೆ. ವಡವಾಟಿ ಗ್ರಾಮದಲ್ಲೂ ಕೊಳವೆಬಾವಿ ಮತ್ತು ಪೈಪ್‌ಲೈನ್‌ ಮಾಡಬೇಕಿದೆ.

ಹಳೆಯ ಪೈಪ್ ಲೈನ್ ಬದಲಿಸುವಂತೆ ಸಿಇಓಗೆ ಅಧಿಕಾರಿಗಳ ಬೇಡಿಕೆ..!

ಮನ್ಸಲಾಪೂರ ಗ್ರಾಮಕ್ಕೆ ರಾಯಚೂರು ನಗರದ ಪೈಪ್‌ಲೈನ್‌ ಅಳವಡಿಸಿದ್ದು, ಅದು ಹಳೆಯದಾಗಿದೆ. ಕೂಡಲೇ ಪೈಪ್‌ಲೈನ್‌ ಬದಲಾಯಿಸಬೇಕಿದೆ. ಸಿದ್ರಾಂಪುರ, ಬೊಳಮಾನದೊಡ್ಡಿ ಗ್ರಾಮಗಳಲ್ಲಿ ಒಂದೇ ಕೊಳವೆಬಾವಿ ಇದ್ದು, ಸಮರ್ಪಕವಾಗಿ ನೀರು ಪೂರೈಸುವುದಕ್ಕೆ ಸಮಸ್ಯೆ ಆಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಅಧಿಕಾರಿ ತಿಳಿಸಿದರು.

Raichur: 15 to 20 lakhs grant reserve for each taluka

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ವಿವಿಧ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಭಾಗವಹಿಸಿದ್ದರು.

English summary
15 to 20 lakhs grant reserve for each Taluka of Raichur district for drinking water. CEO statement at Drinking Water Meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X