Raichur: ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಎಸಿ ಕಛೇರಿ ಸಿಬ್ಬಂದಿ ಸಾವು!
ರಾಯಚೂರು ಫೆಬ್ರವರಿ 9: ರಾಯಚೂರಿನ ಎಸಿ ಕಛೇರಿ ಸಿಬ್ಬಂದಿಯೊಬ್ಬರು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ. ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರೋ ಶಂಕೆ ವ್ಯಕ್ತವಾಗಿದೆ.
ವಾಸಿಂ ಚೌದರಿ (42) ಆತ್ಮಹತ್ಯೆ ಮಾಡಿಕೊಂಡ ಎಸಿ ಕಚೇರಿಯ ಸಿಬ್ಬಂದಿಯಾಗಿದ್ದಾರೆ. ಲ್ಯಾಂಡ್ ರೆಕಾರ್ಡ್ ಕಿಪರ್ ಹುದ್ದೆಯಲ್ಲಿ ಡಿ ದರ್ಜೆ ಸಿಬ್ಬಂದಿಯಾಗಿದ್ದ ವಾಸಿಂ, ನಗರದಲ್ಲಿರೋ ಈಜುಕೊಳದ ಬಳಿ ತೆರಳಿ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಲೆಂಟ್ ವಾಟರ್ ಬಾಟಲ್ ನಲ್ಲಿ ಆ್ಯಸಿಡ್ ಬೇರಸಿ ಸೇವಿಸಿದ್ದಾರೆಂದು ತಿಳಿದು ಬಂದಿದೆ. ಕಚೇರಿಯ ಪೈಲ್ ವಿಚಾರಕ್ಕೆ ಸಿಬ್ಬಂದಿ ಮನನೊಂದಿರುವ ಅನುಮಾನ ಮೂಡಿದೆ. ಹೀಗಾಗಿ ಇವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮೇಲಧಿಕಾರಿ ಕಲಬುರ್ಗಿಗೆ ತೆರಳಿದ್ದ ವೇಳೆಯೇ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಾವು ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದ ವಾಸಿಂ ಚೌದರಿ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳಿಂದ ಮಾಹಿತಿ ತಿಳಿಸಿದು ಬಂದಿದೆ. ಘಟನೆಯಿಂದಾಗಿ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದಾರೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆಗೆ ದೂರು ನೀಡಿದ ಕುಟುಂಬಸ್ಥರು ತನಿಖೆಗೆ ಆಗ್ರಹಿಸಿದ್ದಾರೆ.
(ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. ನಿಮಗೆ ಬೆಂಬಲ ಬೇಕಾದರೆ ಅಥವಾ ಯಾರೊಂದಿಗಾದರೂ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಬೇಕಿದ್ದರೇ ದಯವಿಟ್ಟು ನಿಮ್ಮ ಹತ್ತಿರದ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಿ. ಸಹಾಯವಾಣಿಗಳು: ಆಸ್ರ: 022 2754 6669; ಸ್ನೇಹ ಇಂಡಿಯಾ ಫೌಂಡೇಶನ್: +914424640050 ಮತ್ತು ಸಂಜೀವಿನಿ: 011-24311918, ರೋಶ್ನಿ ಫೌಂಡೇಶನ್: ಸಂಪರ್ಕ: 040-66202001, 040-66202000, ಒಂದು ಜೀವನ: ಸಂಪರ್ಕ ಸಂಖ್ಯೆ: 78930 78930, SEVA: ಸಂಪರ್ಕ ಸಂಖ್ಯೆ: 09441778290 )












Click it and Unblock the Notifications