ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಸೇರಲಿದ್ದಾರೆ ರಾಯಚೂರು ಸಂಸದ ಬಿ.ವಿ.ನಾಯಕ್?

|
Google Oneindia Kannada News

Recommended Video

ಬಿಜೆಪಿ ಸೇರಲಿದ್ದಾರೆ ರಾಯಚೂರು ಸಂಸದ ಬಿ.ವಿ.ನಾಯಕ್? | Oneindia Kannada

ರಾಯಚೂರು, ಡಿಸೆಂಬರ್ 03 : ರಾಯಚೂರು ಕ್ಷೇತ್ರದ ಸಂಸದ, ಕಾಂಗ್ರೆಸ್ ನಾಯಕ ಬಿ.ವಿ.ನಾಯಕ್ ಬಿಜೆಪಿ ಸೇರಲಿದ್ದಾರೆ?. ಹೌದು, 2019ರ ಲೋಕಸಭಾ ಚುನಾವಣೆ ಘೋಷಣೆಯಾದ ತಕ್ಷಣ ಅವರು ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಬಿಜೆಪಿಯ ರಾಜ್ಯ ಮತ್ತು ಕೇಂದ್ರ ನಾಯಕರ ಜೊತೆ ಬಿ.ವಿ.ನಾಯಕ್ ಅವರು ಈಗಾಗಲೇ ಮಾತುಕತೆ ನಡೆಸಿದ್ದಾರೆ. 2019ರ ಚುನಾವಣೆಗೆ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಿಲ್ಲ ಎಂಬ ಮಾತುಗಳು ಜಿಲ್ಲೆಯಲ್ಲಿ ಹಬ್ಬಿವೆ.

ಲೋಕಸಭೆ ಚುನಾವಣೆ : ಕರ್ನಾಟಕ ಬಿಜೆಪಿಯಿಂದ ಪ್ರಭಾರಿಗಳ ನೇಮಕಲೋಕಸಭೆ ಚುನಾವಣೆ : ಕರ್ನಾಟಕ ಬಿಜೆಪಿಯಿಂದ ಪ್ರಭಾರಿಗಳ ನೇಮಕ

ಬಿಜೆಪಿ ನಾಯಕರು ಸಹ ಬಿ.ವಿ.ನಾಯಕ್ ಅವರು ಪಕ್ಷ ಸೇರಲು ಪ್ರಾಥಮಿಕವಾಗಿ ಒಪ್ಪಿಗೆ ನೀಡಿದ್ದಾರೆ. 2019ರ ಚುನಾವಣೆಯಲ್ಲಿ ರಾಯಚೂರು ಕ್ಷೇತ್ರದಲ್ಲಿ ಅವರಿಗೆ ಟಿಕೆಟ್ ಸಿಗಲಿದೆಯೇ? ಎಂಬುದನ್ನು ಕಾದು ನೋಡಬೇಕಿದೆ.

ಲೋಕಸಭೆ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿಲೋಕಸಭೆ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಬಿ.ವಿ.ನಾಯಕ್ ಅವರು ಕಾಂಗ್ರೆಸ್ ತೊರೆಯಲು ಜಿಲ್ಲಾ ಕಾಂಗ್ರೆಸ್‌ನ ಚಟುವಟಿಕೆಗಳು ಕಾರಣ. ಮತ್ತೊಂದು ಕಡೆ ಜೆಡಿಎಸ್‌ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದ್ದು, ರಾಯಚುರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಜಿಲ್ಲಾ ಕಾಂಗ್ರೆಸ್ ಬಿ.ವಿ.ನಾಯಕ್ ಪಕ್ಷ ತೊರೆಯುವುದಿಲ್ಲ ಎಂದು ಹೇಳಿದೆ....

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಸಮಾಧಾನ

ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಸಮಾಧಾನ

ಬಿ.ವಿ.ನಾಯಕ್ ಅವರು ಬಿಜೆಪಿ ಸೇರಲು ರಾಯಚೂರು ಜಿಲ್ಲಾ ಕಾಂಗ್ರೆಸ್‌ನಲ್ಲಿನ ಅಸಮಾಧಾನವೇ ಕಾರಣವಾಗಿದೆ. ವಿಧಾನ ಪರಿಷತ್ ಸದಸ್ಯ ಎನ್‌.ಎಸ್.ಬೋಸರಾಜು ಪುತ್ರ ರವಿ ಬೋಸರಾಜು ಅವರ ಜೊತೆಗಿನ ಅಸಮಾಧಾನವೇ ಕಾರಣವಾಗಿದೆ. ರವಿ ಬೋಸರಾಜು ಮತ್ತು ಇತರ ನಾಯಕರು ಸಂಸದರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ.

ಜೆಡಿಎಸ್ ಜೊತೆ ಮೈತ್ರಿ

ಜೆಡಿಎಸ್ ಜೊತೆ ಮೈತ್ರಿ

2019ರ ಲೋಕಸಭಾ ಚುನಾವಣೆಯಲ್ಲ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಜಿಲ್ಲೆಯಲ್ಲಿ ಕಣಕ್ಕಿಳಿಯಲು ತಯಾರಿ ನಡೆಸಿದೆ. ಮೈತ್ರಿ ನಡೆದರೆ ಬಿ.ವಿ.ನಾಯಕ್ ಅವರಿಗೆ ಟಿಕೆಟ್ ಸಿಗುವುದಿಲ್ಲ. ಜಿಲ್ಲಾ ಕಾಂಗ್ರೆಸ್‌ನಲ್ಲಿಯೂ ಅವರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಆದ್ದರಿಂದ, ಅವರು ಬಿಜೆಪಿ ಸೇರುವ ಕುರಿತು ಕುಟುಂಬದವರು, ಆಪ್ತರ ಜೊತೆ ಮಾತುಕತೆ ನಡೆಸಿದ್ದಾರೆ.

ಬಿಜೆಪಿಯಿಂದ ಸ್ವಾಗತ

ಬಿಜೆಪಿಯಿಂದ ಸ್ವಾಗತ

ಬಿಜೆಪಿಯಿಂದ ಶಾಸಕ ಶಿವನಗೌಡ ನಾಯಕ್ ಅವರು 2019ರ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಬಿ.ವಿ.ನಾಯಕ್ ಅವರು ಬಿಜೆಪಿಗೆ ಬಂದರೆ ಶಿವನಗೌಡ ನಾಯಕ್ ಅವರಿಗೆ ಟಿಕೆಟ್ ಕೈ ತಪ್ಪಲಿದೆ. ಶಿವನಗೌಡ ನಾಯಕ್ ಅವರಿಗೆ ಟಿಕೆಟ್ ನೀಡುವುದು ಬೇಡ ಎಂದು ಕೆಲವು ಸ್ಥಳೀಯ ಮುಖಂಡರು ಸಹ ಪಟ್ಟು ಹಿಡಿದಿದ್ದಾರೆ. ಬಿ.ವಿ.ನಾಯಕ್ ಅವರು ಈಗಾಗಲೇ ರಾಜ್ಯ ಮತ್ತು ಕೇಂದ್ರ ನಾಯಕರ ಜೊತೆ ಪಕ್ಷ ಸೇರುವ ಕುರಿತು ಚರ್ಚೆ ನಡೆಸಿದ್ದಾರೆ.

ಬಿಜೆಪಿ ಸೇರುವ ಸುದ್ದಿ ಸುಳ್ಳು

ಬಿಜೆಪಿ ಸೇರುವ ಸುದ್ದಿ ಸುಳ್ಳು

'ಬಿ.ವಿ.ನಾಯಕ್ ಅವರು ನಮ್ಮ ನಾಯಕರು ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಸುಳ್ಳು. ಮುಂದಿನ ಚುನಾವಣೆಯಲ್ಲಿಯೂ ಅವರೇ ನಮ್ಮ ಅಭ್ಯರ್ಥಿ. ಜೆಡಿಎಸ್‌ ಜೊತೆ ಮೈತ್ರಿ ಆದರೆ ರಾಯಚೂರು ಕ್ಷೇತ್ರವನ್ನು ಉಳಿಸಿಕೊಳ್ಳುವಂತೆ ಒತ್ತಾಯ ಮಾಡಲಾಗುತ್ತದೆ' ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರುದ್ರಪ್ಪ ಹೇಳಿದ್ದಾರೆ.

2014ರ ಫಲಿತಾಂಶ

2014ರ ಫಲಿತಾಂಶ

2014ರ ಲೋಕಸಭಾ ಚುನಾವಣೆಯಲ್ಲಿ ರಾಯಚೂರು ಕ್ಷೇತ್ರದಲ್ಲಿ ಬಿ.ವಿ.ನಾಯಕ್ ಅವರು 443659 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಶಿವನಗೌಡ ನಾಯಕ್ ಅವರು 442160 ಮತಗಳನ್ನು ಪಡೆದು 2ನೇ ಸ್ಥಾನ ಪಡೆದಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಡಿ.ಬಿ.ನಾಯಕ್ 21706 ಮತಗಳನ್ನು ಪಡೆದಿದ್ದರು.

English summary
Raichur MP and Congress leader B.V.Nayak may join BJP soon. He elected in 2017 Lok Sabha Election from Congress party. Will he get BJP ticket for 2019 election let's wait.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X