• search
  • Live TV
ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಯಚೂರಿನ ಮಾಜಿ ಸಂಸದ ರಾಜಾ ರಂಗಪ್ಪ ನಾಯಕ ಇನ್ನಿಲ್ಲ

|

ರಾಯಚೂರು, ಮೇ 11 : ರಾಯಚೂರು ಕ್ಷೇತ್ರದ ಮಾಜಿ ಸಂಸದ, ಕಾಂಗ್ರೆಸ್ ನಾಯಕ ರಾಜಾ ರಂಗಪ್ಪ ನಾಯಕ ವಿಧಿವಶರಾಗಿದ್ದಾರೆ. ಹಲವಾರು ಕಾಂಗ್ರೆಸ್ ನಾಯಕರು ರಾಜಾ ರಂಗಪ್ಪ ನಾಯಕ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

61 ವರ್ಷದ ರಾಜಾ ರಂಗಪ್ಪ ನಾಯಕ ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ಕೊಡಿಸಲಾಗಿತ್ತು. ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್‌ನಲ್ಲಿ ಭಾನುವಾರ ರಾತ್ರಿ ಅವರು ಮೃತಪಟ್ಟಿದ್ದಾರೆ.

ರಾಯಚೂರು; ಗಂಗಮ್ಮ ಕುಟುಂಬದ ನೆರವಿಗೆ ನಿಂತ ಯಡಿಯೂರಪ್ಪ

1996ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ರಾಜಾ ರಂಗಪ್ಪ ನಾಯಕ ಗೆಲುವು ಸಾಧಿಸಿದ್ದರು. ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.

ಇಟಲಿಯಿಂದ ಬಂದಿದ್ದ ರಾಯಚೂರು ವ್ಯಕ್ತಿಯಲ್ಲಿ ಕೊರೊನಾ ನೆಗಟಿವ್

ರಾಜಾ ರಂಗಪ್ಪ ನಾಯಕ ಅವರು 1996ರ ಚುನಾವಣೆಯಲ್ಲಿ 2,14, 920 ಮತಗಳನ್ನು ಪಡೆದು ಕಾಂಗ್ರೆಸ್‌ನ ಎ. ವೆಂಕಟೇಶ ನಾಯಕ ಅವರನ್ನು ಸೋಲಿಸಿ ಸಂಸತ್ ಪ್ರವೇಶಿಸಿದ್ದರು.

ದಕ್ಷಿಣ ಕೋಸ್ಟಲ್ ರೈಲ್ವೆ ವಲಯಕ್ಕೆ ರಾಯಚೂರು ಸೇರಿಸಲು ವಿರೋಧ

ಸೋಮವಾರ ಮಧ್ಯಾಹ್ನ 1ಗಂಟೆಗೆ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಮಾಜಿ ಸಚಿವ ಡಾ. ಎಚ್. ಸಿ. ಮಹದೇವಪ್ಪ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು, ಅಭಿಮಾನಿಗಳು ರಾಜಾ ರಂಗಪ್ಪ ನಾಯಕ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

English summary
Raichur former mp and Congress leader Raja Rangappa Naik (61) no more. In 1996 election he elected as MP from Raichur from JD(S).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X