ರಾಯಚೂರು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರಿಚಯ
ರಾಯಚೂರು ಮಾರ್ಚ್ 25: ಈ ಬಾರಿ ಬಿಜೆಪಿಯಿಂದ ಪುನರಾಯ್ಕೆ ಬಯಸಿ ಕಣಕ್ಕಿಳಿಯಲಿರುವ ರಾಯಚೂರು ಲೋಕಸಭಾ (ಎಸ್.ಟಿ. ಮೀಸಲು) ಕ್ಷೇತ್ರದ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗುಂತಗೋಳ ಸಂಸ್ಥಾನದ ರಾಜ ಮನೆತನದವರು.
ರಾಜಾ ಅಮರೇಶ್ವರ ನಾಯಕ ಬಿ.ಎ. ಎಲ್‍ಎಲ್‍ಬಿ ಪದವಿ ಪಡೆದಿದ್ದಾರೆ. ಮೈಸೂರು ಮತ್ತು ಧಾರವಾಡ ವಿಶ್ವ ವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಆರಂಭದಲ್ಲಿ ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. 1989ರಲ್ಲಿ ಲಿಂಗಸುಗೂರು ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು. ಎರಡನೇ ಬಾರಿಗೆ 1999-2004ರ ವಿಧಾನಸಭೆ ಚುನಾವಣೆಯಲ್ಲಿ ಕಲ್ಮಲಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿದ್ದರು.

1999-2000ರಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ, 2002ರಿಂದ 2004ರಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾದರು.
66 ವರ್ಷದ ರಾಜಾ ಅಮರೇಶ್ವರ ನಾಯಕ ಅವರಿಗೆ ಪತ್ನಿ ರಾಣಿ ಮೋಹನಾಂಬದೇವಿ ಹಾಗೂ ಪುತ್ರ ಇದ್ದಾರೆ.
ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಆರ್ ಪಿಐ ಸ್ಪರ್ಧೆ ; ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದಿಂದ(ಆರ್‌ಪಿಐ) ಲೋಕಸಭಾ ಚುನಾವಣೆಗೆ ರಾಜ್ಯದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು' ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎನ್.ಮೂರ್ತಿ ಹೇಳಿದರು.
'ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು' ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
'ದೇಶದಲ್ಲಿ ಕೋಮುಗಲಭೆ ಹೆಚ್ಚಾಗುತ್ತಿದೆ. ದುಬಾರಿ ಜಿ.ಎಸ್.ಟಿ, ಬೆಲೆ ಏರಿಕೆಯಿಂದ ನಾಗರಿಕರ ಜೀವನ ದುಸ್ತರವಾಗಿದೆ. ಬಂಡವಾಳಶಾಹಿಗಳು ಮತ್ತು ಭೂಮಾಲೀಕರ ಹಣ ದುಪ್ಪಟ್ಟಾಗಿ ಶ್ರೀಮಂತರು ಮತ್ತು ಬಡವರ ನಡುವಣ ಅಂತರ ಹೆಚ್ಚಾಗಿದೆ. ಕೇಂದ್ರ ಸರ್ಕಾರದಿಂದ ರಾಜಕೀಯ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ದೇಶದಲ್ಲಿನ ಸಣ್ಣ ಉದ್ಯಮ, ಕೈಗಾರಿಕೆಗಳು ನೆಲ ಕಚ್ಚಿವೆ. ಕೃಷಿ ಉತ್ಪನ್ನ ಇಳುವರಿ ಕುಸಿದಿದೆ. ರೈತರು ಕಂಗಾಲಾಗಿದ್ದಾರೆ. ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ. ನರೇಗಾ ಯೋಜನೆ ಸಮರ್ಪಕ ಜಾರಿಯಾಗದ ಕಾರಣ ಹಳ್ಳಿಯ ಜನರು ಮಹಾನಗರಗಳಿಗೆ ಗುಳೆ ಹೋಗುತ್ತಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.
'ಚುನಾವಣಾ ಪೂರ್ವ ತಯಾರಿಗಾಗಿ ಈಗಾಗಲೇ ಏಳು ರಾಜ್ಯಗಳಲ್ಲಿ ಪ್ರವಾಸ ಮಾಡಲಾಗಿದೆ. ಸಂವಿಧಾನ ಜಾರಿ ಜನಾಂದೋಲನ ಜಾಥಾವನ್ನು ಮಾರ್ಚ್ 18ರಿಂದ ಆರಂಭವಾಗಿದ್ದು, ಏಪ್ರಿಲ್ 1ರವರೆಗೆ ನಡೆಯಲಿದೆ. ಸ್ವಾತಂತ್ರ್ಯ ದೊರೆತು ಏಳು ದಶಕವಾದರೂ ಆಡಳಿತದ ನಡೆಸಿದ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ಸಂವಿಧಾನದ ಆಶಯಗಳನ್ನು ಜಾರಿಗೊಳಿಸಿಲ್ಲ' ಎಂದು ದೂರಿದರು. ಈ ವೇಳೆ ಪಕ್ಷದ ಮುಖಂಡರಾದ ಎಂ. ಮನೋಹರ, ಬಶೀರ್ ಅಹ್ಮದ್, ಬಸವರಾಜ, ರಂಗಪ್ಪ, ಅಶೋಕ ಉಪಸ್ಥಿತರಿದ್ದರು.












Click it and Unblock the Notifications