Raichur Lok Sabha Election 2024 Results: ಮೊದಲ ಪ್ರಯತ್ನದಲ್ಲೇ ಲೋಕಸಭಾ ಸದಸ್ಯರಾದ ನಿವೃತ್ತ ಐಎಎಸ್ ಅಧಿಕಾರಿ..
ರಾಯಚೂರು ಜೂನ್ 4: ರಾಯಚೂರು ಲೋಕಸಭಾ ಚುನಾವಣೆಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯಕ್ ತಮ್ಮ ಮೊದಲ ಪ್ರಯತ್ನದಲ್ಲೇ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ವಿರುದ್ಧ ಜಯ ಸಾಧಿಸುವ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ.
ಐಎಎಸ್ ಅಧಿಕಾರಿಯಾಗಿ ಹಲವಾರು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದ ಕುಮಾರ್ ನಾಯಕ್ ಸಾಕಷ್ಟು ಹೆಸರು ಮಾಡಿದ್ದರು. ನಿವೃತ್ತಿಯ ಬೆನ್ನಲ್ಲೇ ಅಚ್ಚರಿ ಎಂಬಂತೆ ಕಾಂಗ್ರೆಸ್‌ನಿಂದ ಬಿ ಫಾರಂ ಪಡೆದುಕೊಂಡಿದ್ದರು. ರಾಯಚೂರು ಲೋಕಸಭೆ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು.

ಬಿಜೆಪಿ ಅಭ್ಯರ್ಥಿ ರಾಜ ಅಮರೇಶ್ ನಾಯ್ಕ ಅವರ ವಿರುದ್ಧ ಕುಮಾರ್ ನಾಯಕ್‌ಶೇ.52ರಷ್ಟು ಮತ ಪಡೆದುಕೊಂಡು ಆಯ್ಕೆಯಾಗಿದ್ದಾರೆ. ಮತೆಣಿಕೆ ಪ್ರತೀ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರ್ ನಾಯಕ 6,33,949 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ 5,52,474 ಮತಗಳನ್ನು ಪಡೆದಿದ್ದಾರೆ. 81,475 ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾದಿಸಿದ್ದಾರೆ.
ರಾಯಚೂರು ಲೋಕಸಭಾ ಚುನಾವಣೆ 1957 ಹಾಗೂ 1962ರಲ್ಲಿ ಕಾಂಗ್ರೆಸ್ ಜಯ ಸಾಧಿಸಿತ್ತು. 1967ರಲ್ಲಿ ಸ್ವತಂತ್ರ ಪಕ್ಷ ಅಧಿಕಾರಕ್ಕೆ ಬಂದರೆ, 1971, 1977, 1980, 1984, 1986, 1989, 1091ರಲ್ಲಿ ಸತತ ಏಳು ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು.

ಬಳಿಕ 1996ರಲ್ಲಿ ಜನತಾ ದಳ, 1998, 1999, 2004ರಲ್ಲಿ ಕಾಂಗ್ರೆಸ್, 2009ರಲ್ಲಿ ಬಿಜೆಪಿ, 2014ರಲ್ಲಿ ಕಾಂಗ್ರೆಸ್, 2019ರಲ್ಲಿ ಬಿಜೆಪಿ ಅಧಿಕಾರ ಪಡೆದುಕೊಂಡಿತು.
ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳನ್ನು ಮೆಚ್ಚಿದ ಮತದಾರರು ಕಾಂಗ್ರೆಸ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಅಲ್ಪ ಸಂಖ್ಯಾತ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಅಲ್ಲದೆ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಮೆಚ್ಚಿ ಮಹಿಳೆಯರು ಹೆಚ್ಚಿನ ಮತದಾನ ಮಾಡಿದ್ದಾರೆ ಎಂಬ ಕಾಂಗ್ರೆಸ್ ಕಾರ್ಯಕರ್ತರು ಲೆಕ್ಕಾಚಾರ ಹಾಕಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications