Get Updates
Get notified of breaking news, exclusive insights, and must-see stories!

Raichur Lok Sabha Election 2024 Results LIVE: ಚಿನ್ನದ ನಾಡು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಆರಂಭ

ರಾಯಚೂರು ಜೂನ್ 4: ರಾಯಚೂರು ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮಂಗಳವಾರ (ಜೂನ್ 4) ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮತ ಎಣಿಕೆ ಮಾಡಲಾಗುತ್ತದೆ.

ರಾಯಚೂರು ನಗರದ ಎಸ್‌ಆರ್‌ಪಿಎಸ್ ಕಾಲೇಜು ಮತ್ತು ಎಲ್ ವಿಡಿ ಕಾಲೇಜು ನಲ್ಲಿ ಮತ ಎಣಿಕೆ ನಡೆಯಲಿದೆ. ಇಲ್ಲಿ ಒಟ್ಟು 159 ಮತ ಎಣಿಕೆ ಮೇಲ್ವಿಚಾರಕರು, 168 ಸೂಕ್ಷ್ಮ ವೀಕ್ಷಕರು, 159 ಮತ ಎಣಿಕೆಯ ಸಹಾಯಕರು ಇರಲಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಭದ್ರತಾ ಕೊಠಡಿ ತೆರೆಯಲಾಗುವುದು. 8 ಗಂಟೆಗೆ ಅಂಚೆ ಮತ ಎಣಿಕೆ ಹಾಗೂ ಇವಿಎಂ ಮತ ಎಣಿಕೆ ಜರುಗಲಿದೆ. ಶೋರಾಪುರ, ಶಹಾಪುರ, ಯಾದಗಿರಿ, ದೇವದುರ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳ ಎಣಿಕೆ ರಾಯಚೂರು ನಗರದ ಎಲ್‌ವಿಡಿ ಕಾಲೇಜಿನಲ್ಲಿ ನಡೆಯಲಿದೆ.

Raichur Lok Sabha Election 2024 Results LIVE Who will Win Kumar Naik Vs Raja Amareshwar Naik

ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ರಾಯಚೂರಿನಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಕುಮಾರ್ ನಾಯಕ್ ಹಾಗೂ ಬಿಜೆಪಿ ರಾಜಾ ಅಮರೇಶ್ವರ ನಾಯಕ್ ನಡುವೆ ಪೈಪೋಟಿ ನಡೆದಿದೆ. ಈ ಬಾರಿ ಚಿನ್ನದ ನಾಡು ರಾಯಚೂರಿನಲ್ಲಿ ಯಾರು ಆಡಳಿತದ ಚುಕ್ಕಾಣಿ ಹಿಡಿಯಲಿದ್ದಾರೆಂಬ ಕುತೂಹಲ ಶುರುವಾಗಿದೆ. ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆಯ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

ಎಂಟು ವಿಧಾನಸಭಾ ಕ್ಷೇತ್ರಗಳು:

ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಯಾದಗಿರಿ ಜಿಲ್ಲೆಯ ಮೂರು ಹಾಗೂ ರಾಯಚೂರು ಜಿಲ್ಲೆಯ ಐದು ಕ್ಷೇತ್ರಗಳು ಸೇರಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳು ಬರಲಿವೆ. ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಯಾದಗಿರಿ,ಶಹಾಪುರ, ರಾಯಚೂರು ಗ್ರಾಮೀಣ, ಮಾನ್ವಿ ವಿಧಾನಸಭಾ ಕ್ಷೇತ್ರಗಳಲ್ಲಿಕಾಂಗ್ರೆಸ್‌ ಶಾಸಕರಿದ್ದರೆ, ರಾಯಚೂರು ನಗರ, ಲಿಂಗಸೂಗೂರು ಕ್ಷೇತ್ರದಲ್ಲಿ ಬಿಜೆಪಿಯ ಹಾಗೂ ದೇವದುರ್ಗದಲ್ಲಿ ಜೆಡಿಎಸ್‌ನ ಶಾಸಕರಿದ್ದಾರೆ. ಸುರಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರು ನಿಧನರಾಗಿರುವುದರಿಂದ, ಲೋಕಸಭೆ ಚುನಾವಣೆ ಜತೆಗೆ ಉಪ ಚುನಾವಣೆ ಎದುರಿಸುತ್ತಿದೆ.

Raichur Lok Sabha Election 2024 Results LIVE Who will Win Kumar Naik Vs Raja Amareshwar Naik

ರಾಯಚೂರು ಲೋಕಸಭಾ ಚುನಾವಣೆ ಹಾದಿ:

ರಾಯಚೂರು ಲೋಕಸಭಾ ಚುನಾವಣೆ 1957 ಹಾಗೂ 1962 ಕಾಂಗ್ರೆಸ್ ಜಯ ಸಾಧಿಸಿತ್ತು. 1967ರಲ್ಲಿ ಸ್ವತಂತ್ರ ಪಕ್ಷ ಅಧಿಕಾರಕ್ಕೆ ಬಂದರೆ, 1971, 1977, 1980, 1984, 1986, 1989, 1091ರಲ್ಲಿ ಸತತ ಏಳು ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬಂತು.

1996ರಲ್ಲಿ ಜನತಾ ದಳ, 1998, 1999, 2004ರಲ್ಲಿ ಕಾಂಗ್ರೆಸ್, 2009ರಲ್ಲಿ ಬಿಜೆಪಿ, 2014ರಲ್ಲಿ ಕಾಂಗ್ರೆಸ್, 2019ರಲ್ಲಿ ಬಿಜೆಪಿ ಅಧಿಕಾರ ಪಡೆದುಕೊಂಡಿತು.

ಕಾಂಗ್ರೆಸ್ ಭದ್ರಕೋಟೆ:

ರಾಯಚೂರು ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಮಾಜಿ ಸಂಸದ ಎ.ವೆಂಕಟೇಶ ನಾಯಕ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ ಏಕೈಕ ಸಂಸದರಾಗಿದ್ದರು. ವೆಂಕಟೇಶ ನಾಯಕ ಅವರ ಪುತ್ರ ಬಿ.ವಿ.ನಾಯಕ 2014ರಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಸದಸ್ಯರಾಗಿದ್ದರು. ಹಾಗಾಗಿ ಈ ಕ್ಷೇತ್ರದಲ್ಲಿ ತಂದೆಯ ಬಳಿಕ ಪುತ್ರನೂ ಸಂಸದರಾಗಿರುವುದನ್ನು ಗಮನಿಸಬಹುದು.

ಸೋಲು ಗೆಲುವಿನ ಲೆಕ್ಕಾಚಾರ

ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಲೀಡ್ ಸಾಧಿಸಬೇಕು ಎಂಬ ಲೆಕ್ಕಚಾರದಲ್ಲಿ ಇದ್ದ ಶಾಸಕರು ಚುನಾವಣಾ ಮುಗಿಯುತ್ತಿದ್ದಂತೆ ಕ್ಷೇತ್ರದ ಪ್ರತಿ ಹಳ್ಳಿಗಳ ಮತದಾನ ವಿವರ ಪಡೆದಿದ್ದಾರೆ. ಆ ಮೂಲಕ ತಮಗೆ ಯಾವ ಯಾವ ಮತಗಟ್ಟೆಗಳಲ್ಲಿ ಮುನ್ನಡೆ ಸಿಗಲಿದೆ ಎಂಬ ಲೆಕ್ಕಾಚಾರದಲ್ಲಿ ಇದ್ದಾರೆ. ಒಟ್ಟಾರೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಲೆಕ್ಕಾಚಾರದಲ್ಲಿ ಇದ್ದಾರೆ. ಮತದಾರ ಪ್ರಭು ಯಾವ ಕಡೆ ವಾಲಿದ್ದಾನೆ ಎಂಬುದು ಕುತೂಹಲ ಮೂಡಿಸಿದೆ.

ಈ ಬಾರಿ ಕಣದಲ್ಲಿರುವ ಅಭ್ಯರ್ಥಿಗಳು:

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಚಿನ್ನದ ನಾಡು ರಾಯಚೂರು ಕ್ಷೇತ್ರದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಭಾರೀ ಕುತೂಹಲ ಮೂಡಿಸಿದೆ. ಈ ಬಾರಿ ರಾಯಚೂರು ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಕುಮಾರ್ ನಾಯಕ್ ಹಾಗೂ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ನಡುವೆ ನೇರ ಹಣಾಹಣಿ ನಡೆದಿದ್ದು ಮತದಾರರು ಯಾರ ಕೈ ಹಿಡಿಯುತ್ತಾರೆ ಕಾದು ನೊಡಬೇಕಿದೆ.

ಕಾಂಗ್ರೆಸ್ ಪಂಚ ಗ್ಯಾರಂಟಿ:

ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳನ್ನು ಮೆಚ್ಚಿದ ಮತದಾರರು ಕಾಂಗ್ರೆಸ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕುವ ಸಾಧ್ಯತೆಗಳು ಇವೆ. ಕಾಂಗ್ರೆಸ್‌ ಪಕ್ಷಕ್ಕೆ ಅಲ್ಪ ಸಂಖ್ಯಾತ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಅಲ್ಲದೆ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಮೆಚ್ಚಿ ಮಹಿಳೆಯರು ಹೆಚ್ಚಿನ ಮತದಾನ ಮಾಡಿದ್ದಾರೆ ಎಂಬ ಕಾಂಗ್ರೆಸ್ ಕಾರ್ಯಕರ್ತರು ಲೆಕ್ಕಾಚಾರ ಹಾಕಿದ್ದಾರೆ.

ಕಳೆದ ಬಾರಿ ಆದ ಮತದಾನ:

ಕಳೆದ ಬಾರಿ 1.18 ಲಕ್ಷ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಗೆಲವು ಸಾಧಿಸಿದ್ದರು. ಈ ಬಾರಿ ಶೇ.64 ರಷ್ಟು ಮತದಾನವಾಗಿದ್ದು, ಕಳೆದ ಬಾರಿಗಿಂತ ಶೇ.7ರಷ್ಟು ಮತದಾನ ಹೆಚ್ಚಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಕುಮಾರ್ ನಾಯಕ್ ವಿರುದ್ಧ ಬಿಜೆಪಿ ರಾಜಾ ಅಮರೇಶ್ವರ ನಾಯಕ್ ಅವರು ಕಣದಲ್ಲಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಆರಂಭ

ರಾಯಚೂರಿನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಆರಂಭವಾಗಲಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಪೊಲೀಸ್ ಬಿಗಿಭದ್ರತೆಯನ್ನು ಒದಗಿಸಲಾಗಿದೆ. ಮತಗಟ್ಟೆಯ ಸುತ್ತಲು ಜನರ ಓಡಾಟವನ್ನು ನಿಷೇಧಿಸಲಾಗಿದ್ದು, ವಾಹನ ಹಾಗೂ ಅಪರಿಚಿತ ವ್ಯಕ್ತಿಗಳ ಮೇಲೆ ನಿಗಾ ಇಡಲಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಸಿಸಿಕ್ಯಾಮರಾ ಕಣ್ಗಾವಲು ಇರಿಸಲಾಗಿದೆ.

ರಾಯಚೂರಿನಲ್ಲಿ ಮತ ಎಣಿಕೆ ಆರಂಭ

ರಾಯಚೂರಿನಲ್ಲಿ ಮತ ಎಣಿಕೆ ಆರಂಭವಾಗಿದೆ. ಸಕಲ ಸಿದ್ದತೆ ಮೂಲಕ ಸಿಬ್ಬಂದಿಗಳು ಮತ ಎಣಿಕೆಯನ್ನು ಶುರು ಮಾಡಿದ್ದಾರೆ. ಸಿಸಿಕ್ಯಾಮರಾ ಕಣ್ಗಾವಲಿನಲ್ಲಿ ಮತ ಎಣಿಕೆ ಆರಂಭವಾಗಿದ್ದು ಸಂಜೆವರೆಗೂ ಮತ ಎಣಿಕೆ ನಡೆಯಲಿದೆ. ಮಧ್ಯಾಹ್ನದ ಹೊತ್ತಿಗೆ ಗೆಲುವಿನ ಚಿತ್ರಣ ಗೊತ್ತಾಗಲಿದೆ.

ಖುರ್ಚಿ ಕೊರತೆಯಿಂದ ಮತ ಎಣಿಕೆ ವಿಳಂಬ
ರಾಯಚೂರು ಮತ ಎಣಿಕೆ ವಿಳಂಬವಾಗಿದೆ. ಕಾರಣವೇನೆಂದರೆ ಇಲ್ಲಿ ಖರ್ಚಿ ಕೊರತೆಯಿಂದಾಗಿ ಮತ ಎಣಿಕೆ ವಿಳಂಬವಾಗಿದೆ ಎಂದು ಹೇಳಲಾಗುತ್ತಿದೆ. ಮತಗಟ್ಟೆಗೆ ಆಗಮಿಸಿದ ಸಿಬ್ಬಂದಿಗಳಿಗೆ ಖುರ್ಚಿ ಕೊರತೆ ಕಾರಣ ಮತ ಎಣಿಕೆ ಕಾರ್ಯ ತಡವಾಗುತ್ತಿದೆ ಎಂದು ವರದಿಯಾಗಿದೆ.

ರಾಯಚೂರಿನಲ್ಲಿ ಕಾಂಗ್ರೆಸ್‌ ಮುನ್ನಡೆ
ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ರಾಯಚೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಮಾರ್ ನಾಯಕ್ ಹಾಗೂ ಬಿಜೆಪಿ ರಾಜಾ ಅಮರೇಶ್ವರ ನಾಯಕ್ ನಡುವೆ ಪೈಪೋಟಿ ನಡೆದಿದೆ. ಈವರೆಗೆ ಕಾಂಗ್ರೆಸ್‌ನ ಅಭ್ಯರ್ಥಿ ಕುಮಾರ್ ನಾಯಕ್ ಅವರು ಮುನ್ನಡೆ ಸಾಧಿಸಿದ್ದಾರೆ. ಒಟ್ಟಾರೆ ಫಲಿತಾಂಶ ಸಂಜೆ ವೇಳೆಗೆ ಬಹಿರಂಗವಾಗಲಿದೆ.

ಈವರೆಗಿನ ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಜಿ.ಕುಮಾರ ನಾಯಕ 515611 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು 443607 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ 72,004 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+