ಚಿನ್ನದ ನಾಡು ರಾಯಚೂರು ಲೋಕಸಭಾ ಕ್ಷೇತ್ರ: 17ರಲ್ಲಿ 13 ಬಾರಿ ಗೆದ್ದ ಕಾಂಗ್ರೆಸ್- 2024 ಯಾರಿಗೆ?
ರಾಯಚೂರು ಮೇ 30: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಚಿನ್ನದ ನಾಡು ರಾಯಚೂರು ಕ್ಷೇತ್ರದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಭಾರೀ ಕುತೂಹಲ ಮೂಡಿಸಿದೆ. ಈಗಾಗಲೇ ಮತದಾರನ ನಾಡಿಮಿಡಿತ ಅರಿಯುವ ಪ್ರಯತ್ನ ದಲ್ಲಿ ಅಭ್ಯರ್ಥಿಯ ಎದೆಬಡಿತವೂ ಹೆಚ್ಚಾಗಿದೆ.
ಹೌದು.. ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ರಾಯಚೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ನೇರ ಹಣಾಹಣಿ ನಡೆದಿದ್ದು ಮತದಾರನ ಮೀನಿನ ಹೆಜ್ಜೆ ಅರಿಯುವುದೇ ಕಷ್ಟವಾಗಿದೆ. ಆರಂಭದಲ್ಲಿ ಇದ್ದ ಲೆಕ್ಕಚಾರ ಸದ್ಯ ಬದಲಾಗಿದ್ದರಿಂದ ಯಾರಿಗೆ ಸೋಲು ಗೆಲುವು ಎಂದು ಊಹಿಸುವುದು ಸಾಧ್ಯವಾಗದಂತಾಗಿದೆ.

ರಾಯಚೂರಿನಲ್ಲಿ ಆರಂಭದಲ್ಲಿ ಬಿಜೆಪಿಗೆ ಪೂರಕವಾಗಿದ್ದ ವಾತಾವರ, ಕ್ರಮೇಣ ಕಾಂಗ್ರೆಸ್ ಪರ ವಾಲಿದೆ. ಕಳೆದ ಬಾರಿ 1.18 ಲಕ್ಷ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಗೆಲವು ಸಾಧಿಸಿದ್ದರು. ಈ ಬಾರಿ ಶೇ.64 ರಷ್ಟು ಮತದಾನವಾಗಿದ್ದು, ಕಳೆದ ಬಾರಿಗಿಂತ ಶೇ.7ರಷ್ಟು ಮತದಾನ ಹೆಚ್ಚಾಗಿದೆ. ಈ ಬಾರಿ ಯುವಕರು ಹೆಚ್ಚಾಗಿ ಮತದಾನ ಮಾಡಿದ್ದು ಬಿಜೆಪಿಗೆ ಗೆಲುವು ಪಕ್ಕಾ ಎನ್ನುತ್ತಿದ್ದಾರೆ.
ಇನ್ನೂ ಕಾಂಗ್ರೆಸ್ ಪಕ್ಷಕ್ಕೆ ಅಲ್ಪ ಸಂಖ್ಯಾತ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಅಲ್ಲದೆ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಮೆಚ್ಚಿ ಮಹಿಳೆಯರು ಹೆಚ್ಚಿನ ಮತದಾನ ಮಾಡಿದ್ದಾರೆ ಎಂಬ ಕಾಂಗ್ರೆಸ್ ಕಾರ್ಯಕರ್ತರು ಲೆಕ್ಕಾಚಾರ ಹಾಕಿದ್ದಾರೆ.

ಸೋಲು ಗೆಲುವಿನ ಲೆಕ್ಕಾಚಾರ
ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಲೀಡ್ ಸಾಧಿಸಬೇಕು ಎಂಬ ಲೆಕ್ಕಚಾರದಲ್ಲಿ ಇದ್ದ ಶಾಸಕರು ಚುನಾವಣಾ ಮುಗಿಯುತ್ತಿದ್ದಂತೆ ಕ್ಷೇತ್ರದ ಪ್ರತಿ ಹಳ್ಳಿಗಳ ಮತದಾನ ವಿವರ ಪಡೆದಿದ್ದಾರೆ. ಆ ಮೂಲಕ ತಮಗೆ ಯಾವ ಯಾವ ಮತಗಟ್ಟೆಗಳಲ್ಲಿ ಮುನ್ನಡೆ ಸಿಗಲಿದೆ ಎಂಬ ಲೆಕ್ಕಾಚಾರದಲ್ಲಿ ಇದ್ದಾರೆ.
ಒಟ್ಟಾರೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಲೆಕ್ಕಾಚಾರದಲ್ಲಿ ಇದ್ದಾರೆ. ಮತದಾರ ಪ್ರಭು ಯಾವ ಕಡೆ ವಾಲಿದ್ದಾನೆ ಎಂಬುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್ ಭದ್ರಕೋಟೆ ರಾಯಚೂರು
ರಾಯಚೂರು ಲೋಕಸಭಾ ಕ್ಷೇತ್ರ 1957 ಅಸ್ತಿತ್ವಕ್ಕೆ ಬಂದಿದ್ದು ಇದು ರಚನೆಯಾದಾಗಿನಿಂದ ಇಲ್ಲಿಯವರೆಗೆ ನಡೆದಿರುವ 17 ಚುನಾವಣೆಗಳಲ್ಲಿ 13 ಬಾರಿಯೂ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಎರಡು ಬಾರಿ ಕಲಮಕ್ಕೆ ಹಾಗೂ ಒಂದು ಬಾರಿ ದಳಕ್ಕೆ ಮತದಾರರು ಮನ್ನಣೆ ನೀಡಿದ್ದಾರೆ.
ಈ ಕ್ಷೇತ್ರದ ವ್ಯಾಪ್ತಿಗೆ ಯಾದಗಿರಿ ಜಿಲ್ಲೆಯ ಮೂರು ಹಾಗೂ ರಾಯಚೂರು ಜಿಲ್ಲೆಯ ಐದು ಕ್ಷೇತ್ರಗಳು ಸೇರಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳು ಬರಲಿವೆ. ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಯಾದಗಿರಿ,ಶಹಾಪುರ, ರಾಯಚೂರು ಗ್ರಾಮೀಣ, ಮಾನ್ವಿ ವಿಧಾನಸಭಾ ಕ್ಷೇತ್ರಗಳಲ್ಲಿಕಾಂಗ್ರೆಸ್ ಶಾಸಕರಿದ್ದರೆ, ರಾಯಚೂರು ನಗರ, ಲಿಂಗಸೂಗೂರು ಕ್ಷೇತ್ರದಲ್ಲಿ ಬಿಜೆಪಿಯ ಹಾಗೂ ದೇವದುರ್ಗದಲ್ಲಿ ಜೆಡಿಎಸ್‌ನ ಶಾಸಕರಿದ್ದಾರೆ. ಸುರಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ನಿಧನರಾಗಿರುವುದರಿಂದ, ಲೋಕಸಭೆ ಚುನಾವಣೆ ಜತೆಗೆ ಉಪ ಚುನಾವಣೆ ಎದುರಿಸುತ್ತಿದೆ.
ರಾಯಚೂರು ಲೋಕಸಭಾ ಚುನಾವಣೆ ಹಾದಿ:-
1957, 1962- ಕಾಂಗ್ರೆಸ್
1967 - ಸ್ವತಂತ್ರ ಪಕ್ಷ
1971, 1977, 1980, 1984, 1986, 1989, 1091-ಕಾಂಗ್ರೆಸ್
996-ಜನತಾ ದಳ
1998, 1999, 2004- ಕಾಂಗ್ರೆಸ್
2009- ಬಿಜೆಪಿ
2014- ಕಾಂಗ್ರೆಸ್
2019-ಬಿಜೆಪಿ
2024?
ರಾಯಚೂರು ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಮಾಜಿ ಸಂಸದ ಎ.ವೆಂಕಟೇಶ ನಾಯಕ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ ಏಕೈಕ ಸಂಸದರಾಗಿದ್ದರು. ವೆಂಕಟೇಶ ನಾಯಕ ಅವರ ಪುತ್ರ ಬಿ.ವಿ.ನಾಯಕ 2014ರಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಸದಸ್ಯರಾಗಿದ್ದರು. ಹಾಗಾಗಿ ಈ ಕ್ಷೇತ್ರದಲ್ಲಿ ತಂದೆಯ ಬಳಿಕ ಪುತ್ರನೂ ಸಂಸದರಾಗಿರುವುದನ್ನು ಗಮನಿಸಬಹುದು. ಈ ಬಾರಿ ರಾಯಚೂರು ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಕುಮಾರ್ ನಾಯಕ್ ಹಾಗೂ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ನಡುವೆ ನೇರ ಹಣಾಹಣಿ ನಡೆದಿದ್ದು ಮತದಾರರು ಯಾರ ಕೈ ಹಿಡಿಯುತ್ತಾರೆ ಕಾದು ನೊಡಬೇಕಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications