Raichur Lok Sabha Election: ಚಿನ್ನದ ಜಿಲ್ಲೆ ರಾಯಚೂರು ಲೋಕಸಭಾ ಕ್ಷೇತ್ರ ಪರಿಚಯ
ರಾಜ್ಯಕ್ಕೆ ಚಿನ್ನ, ಅನ್ನ ಹಾಗೂ ಬೆಳಕು ನೀಡುವ ಜಿಲ್ಲೆ ರಾಯಚೂರು ಎಂದು ಕರೆಯಲಾಗುತ್ತದೆ. ಉತ್ತರಕ್ಕೆ ಕೃಷ್ಣ ಮತ್ತು ದಕ್ಷಿಣಕ್ಕೆ ತುಂಗಭದ್ರ ನದಿಗಳನ್ನು ಒಳಗೊಂಡಿ ಕ್ಷೇತ್ರವಿದು. ಬಹುಮನಿ ಸುಲ್ತಾನರು, ಬಾದಾಮಿ ಚಾಲುಕ್ಯರು ಇಲ್ಲಿ ಆಡಳಿತ ನಡೆಸಿದ್ದಾರೆ. ವಿಜಯನಗರ ಶ್ರೀಕೃಷ್ಣ ದೇವರಾಯನ ಆಳ್ವಿಕೆಯಲ್ಲಿ ರಾಯಚೂರನ್ನು ವಶಪಡಿಸಿಕೊಳ್ಳಲು ಎರಡು ಯುದ್ಧಗಳು ನಡೆದಿವೆ ಎಂದು ಇತಿಹಾಸ ಹೇಳುತ್ತದೆ.
ಬೇಸಿಗೆಯಲ್ಲಿ ಇಡೀ ರಾಜ್ಯದಲ್ಲಿಯೇ ಅಧಿಕ ತಾಪಮಾನ ರಾಯಚೂರಿನಲ್ಲಿ ದಾಖಲಾಗುತ್ತದೆ. ಈ ಬಯಲು ಸೀಮೆಗೆ ರಾಜನ ಊರು ಎಂದು ಕರೆಯಲಾಗುತ್ತದೆ. 'ರಾಯ' ಅಂದರೆ ರಾಜ ಎಂದರ್ಥ. ಊರು ಬದಲಿಗೆ 'ಚೂರು' ಎನ್ನುವ ಪದ ಬಂದಿದೆ. ಹೀಗಾಗಿ ಇದನ್ನು ರಾಯಚೂರು ಎಂದು ಕರೆಯಲಾಗುತ್ತದೆ. ಸುಡು ಬಿಸಿಲಿನ ಈ ಬೆಂಕಿಯ ನಗರದಲ್ಲಿ ಸದ್ಯ ಲೋಕಸಭಾ ಚುನಾವಣೆಯ ಬಿಸಿ ಜೋರಾಗಿದೆ.

ಈಗಾಗಲೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ರಾಯಚೂರಿನಲ್ಲಿ ಮೇ 7ರಂದು ಚುನಾವಣೆ ನಡೆಯಲಿದ್ದು ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ. ಆದರೆ ಪಕ್ಷಗಳು ಮಾತ್ರ ತಮ್ಮ ಅಭ್ಯರ್ಥಿಯನ್ನು ಈ ಕ್ಷೇತ್ರಕ್ಕೆ ಘೋಷಣೆ ಮಾಡಿಲ್ಲ. ಪರಿಶಿಷ್ಟ ಪಂಗಡಕ್ಕೆ ಮೀಸಲಾದ ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಹಲವರು ಟಿಕೆಟ್ ಆಕಾಂಕ್ಷಿಗಳಿದ್ದು, ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವುದು ಗುಟ್ಟಾಗಿ ಉಳಿದಿದೆ. ಎರಡು ಪಕ್ಷಗಳಿಂದ ಹಲವು ಆಕಾಂಕ್ಷಿಗಳು ಟಿಕೆಟ್‌ಗಾಗಿ ಭಾರೀ ಪೈಪೋಟಿ ನಡೆಸಿದ್ದಾರೆ.
ಎಂಟು ಮತಕ್ಷೇತ್ರಗಳು:
ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ ಐದರಲ್ಲಿ ಕಾಂಗ್ರೆಸ್, ಎರಡರಲ್ಲಿ ಬಿಜೆಪಿ ಮತ್ತು ದೇವದುರ್ಗ ಒಂದು ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಕಾಂಗ್ರೆಸ್‌ನ ವಶವಾಗಿದ್ದ ಸುರಪುರ ಕ್ಷೇತ್ರ ರಾಜಾ ವೆಂಕಟಪ್ಪನಾಯಕ ಅವರ ಸಾವಿನ ಹಿನ್ನೆಲೆಯಲ್ಲಿ ಸದ್ಯ ತೆರವಾಗಿದೆ.

ಕಾಂಗ್ರೆಸ್ ಟಿಕೆಟ್‌ಗಾಗಿ ಲಾಬಿ:
ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮುಖಂಡರಾದ ರವಿ ಪಾಟೀಲ, ಕುಮಾರ ನಾಯಕ, ರಾಯಪ್ಪ ನಾಯಕ, ದೇವಣ್ಣ ನಾಯಕ ಅಭ್ಯರ್ಥಿಗಳ ಪಟ್ಟಿಯ ಮುಂಚೂಣಿಯಲ್ಲಿದೆ. ಸುರಪುರ ಶಾಸಕರಾಗಿದ್ದ ದಿ.ರಾಜಾ ವೆಂಕಟಪ್ಪ ನಾಯಕರ ಪುತ್ರ ರಾಜಾ ಕುಮಾರ ನಾಯಕ ಅವರು ಲೋಕಸಭೆಗೆ ಟಿಕೆಟ್ ಕೇಳಿದ್ದಾರೆ. ಕಲಬುರಗಿ ಕ್ಷೇತ್ರಕ್ಕೆ ಬಿಜೆಪಿಯಿಂದ ಡಾ. ಉಮೆಶ ಜಾಧವ ಅಭ್ಯರ್ಥಿಯಿಮದ ಘೊಷಣೆಯಾಗಿದೆ. ಕಾಂಗ್ರೆಸ್ ಯಾರನ್ನು ಕಣಕ್ಕೆ ಇಳಿಸಲಿದೆ ಎನ್ನುವುದು ಗುಟ್ಟಾಗಿ ಉಳಿಸಿದೆ.
ಬಿಜೆಪಿಯಲ್ಲಿ ಟಿಕೆಟ್ ರೇಸ್‌ನಲ್ಲಿರುವವರು ಯಾರು?
ಲೋಕಸಭೆ ಚುನಾವಣೆಗೆ ಬಿಜೆಪಿ ಪಕ್ಷವೂ ಎರಡು ಬಾರಿ ಸ್ಪರ್ಧಾರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ. ಇದರಿಂದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವುದು ಕಗ್ಗಂಟಾಗಿ ಉಳಿದಿದೆ. ಆದರೆ ಕಾಂಗ್ರೆಸ್ ಪಕ್ಷದಿಂದ ಇನ್ನೂ ಪೂರ್ಣ ಪ್ರಮಾಣದಲ್ಲಿ ಪಟ್ಟಿ ಬಿಡುಗಡೆ ಮಾಡಿಲ್ಲ. ಹೀಗಾಗಿ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ತಮಗೆ ಟಿಕೆಟ್ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಅದರಂತೆ ಮಾಜಿ ಸಂಸದ ಬಿ.ವಿ.ನಾಯಕ ಅವರು ತಾವು ಟಿಕೆಟ್ ಆಕಾಂಕ್ಷಿಯೆಂದು ಘೋಷಿಸಿಕೊಂಡಿದ್ದಾರೆ. ಅಲ್ಲದೇ ದೇವದುರ್ಗದ ಮಾಜಿ ಸಚಿವ ಕೆ.ಶಿವನಗೌಡ ನಾಯಕ, ರಾಯಚೂರು ಗ್ರಾಮಾಂತರ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಬಿಜೆಪಿಯಿಂದ ಟಿಕೆಟ್ ಬಯಸಿದ್ದಾರೆ.
2019 ರ ಲೋಕಸಭಾ ಚುನಾವಣೆ
ರಾಯಚೂರು ಕರ್ನಾಟಕ ಲೋಕಸಭಾ ಕ್ಷೇತ್ರವು ಭಾರತದ ರಾಜಕಾರಣದಲ್ಲಿ ಹೆಸರುವಾಸಿಯಾದ ರಾಜಕೀಯ ಶಕ್ತಿ ಕೇಂದ್ರವಾಗಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ, ಇದು ತೀವ್ರ ಪೈಪೋಟಿಯ ಕದನಕ್ಕೆ ಸಾಕ್ಷಿಯಾಯಿತು. ಬಿ ಜೆ ಪಿ ಅಭ್ಯರ್ಥಿ ರಾಜಾ ಅಮರೇಶ್ ನಾಯಕ್ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ 1,17,716 ಮತಗಳ ಗೆಲುವಿನ ಅಂತರದಿಂದ ಗೆದ್ದರು. 5,98,337 ಮತಗಳನ್ನು ಗಳಿಸಿದರು. 4,80,621 ಮತಗಳನ್ನು ಪಡೆದ ಐ ಎನ್ ಸಿ ಯ ಬಿವಿ ನಾಯಕ್ ಅವರನ್ನು ರಾಜಾ ಅಮರೇಶ್ ನಾಯಕ್ ಸೋಲಿಸಿದರು. ರಾಯಚೂರು ವೈವಿಧ್ಯಮಯ ಜನಸಮೂದಾಯವನ್ನು ಪ್ರತಿಬಿಂಬಿಸುತ್ತದೆ ಮತ್ತು ಕರ್ನಾಟಕ ನ ನಿರ್ಣಾಯಕ ಕ್ಷೇತ್ರವಾಗಿ ಉಳಿದಿದೆ. ಈ ಕ್ಷೇತ್ರದಲ್ಲಿ 2019 ವರ್ಷದಲ್ಲಿ 57.89 ಮತದಾನವಾಗಿದೆ. ಈಗ 2024 ನಲ್ಲಿ, ಮತದಾರರು ತಮ್ಮ ಮತದ ಶಕ್ತಿಯನ್ನು ತೋರಿಸಲು ಇನ್ನಷ್ಟು ಉತ್ಸುಕರಾಗಿದ್ದಾರೆ. ರಾಯಚೂರು ಲೋಕಸಭೆ ಚುನಾವಣೆಗಳ ಕುರಿತು ಇತ್ತೀಚಿನ ಅಪ್‌ಡೇಟ್‌ಗಳನ್ನು ಪಡೆಯಲು ಈ ಪುಟವನ್ನು ನೋಡುತ್ತಿರಿ.
ಜನಸಂಖ್ಯೆ:
ಕ್ಷೇತ್ರದ ಒಟ್ಟು ಜನಸಂಖ್ಯೆ 22,94,951. ಇವರಲ್ಲಿ ಶೇ 73.46ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿ, ಶೇ 26.54ರಷ್ಟು ಜನರು ನಗರ ಪ್ರದೇಶದಲ್ಲಿ ವಾಸಿಸುತ್ತಾರೆ. ಶೇ 21.72 ರಷ್ಟು ಎಸ್‌ಸಿ ಮತ್ತು ಶೇ 18.19ರಷ್ಟು ಎಸ್‌ಸಿ ಸಮುದಾಯದವರು ಇದ್ದಾರೆ.
ರಾಯಚೂರಿನ ಸಮಸ್ಯೆಗಳು:
ಬಿಸಿಲ ನಗರಿ ಎಂದು ರಾಯಚೂರನ್ನು ಕರೆಯಲಾಗುತ್ತದೆ. ಬಿಸಿಲಿನ ಝಳ ಹೆಚ್ಚು ಅಂತರ್ಜಲದ ಮಟ್ಟ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ತುಂಗಭದ್ರಾ ಅಣೆಕಟ್ಟು ತುಂಬಿದರೆ ವರ್ಷಪೂರ್ತಿ ಕುಡಿಯುವ ನೀರಿನ ಕೊರತೆ ಎದುರಾಗುವುದಿಲ್ಲ. ಆದರೆ ರಾಯಚೂರಿನಲ್ಲಿ ಮಳೆಗಾಲದಲ್ಲೂ ಮೂರು ನಾಲ್ಕು ದಿನಕ್ಕೊಮ್ಮೆ ನೀಡು ಬಿಡಲಾಗುತ್ತದೆ.
ಕೃಷ್ಣ ಮತ್ತು ತುಂಗಭದ್ರ ನದಿ ಹರಿಯುತ್ತಿದ್ದರೂ ಜಿಲ್ಲೆಯಲ್ಲಿ ನೀರಾವರಿ ಸಮಸ್ಯೆ ಇದೆ. ಆಯ್ಕೆಯಾದ ಜನಪ್ರತಿನಿಧಿಗಳು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ಪಡೆಬೇಕು ಎಂಬುದು ಜನರ ಆಶಯವಾಗಿದೆ. ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂದು ರಾಯಚೂರನ್ನು ಗುರುತಿಸಲಾಗುತ್ತದೆ.
ರಾಯಚೂರಿನ ಶಕ್ತಿ ನಗರದಲ್ಲಿರುವ ಶಾಖೋತ್ಪನ್ನ ವಿದ್ಯುತ್ ಸ್ಥಾವರ ಕರ್ನಾಟಕಕ್ಕೆ ಬೆಳಕು ನೀಡುತ್ತದೆ. ಆದರೆ, ಈ ಕೇಂದ್ರದ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಕಲ್ಲಿದ್ದಲು ಕೊರತೆ ವಿದ್ಯುತ್ ಸ್ಥಾವರವನ್ನು ಸದಾ ಕಾಡುತ್ತದೆ. ಉದ್ಯೋಗ ಸೃಷ್ಟಿಯಾಗುವಂತಹ ಯಾವುದೇ ಕೈಗಾರಿಕೆಗಳನ್ನು ಕ್ಷೇತ್ರ ಒಳಗೊಂಡಿಲ್ಲ. ಇದರಿಂದಾಗಿ ಜಿಲ್ಲೆಯ ಜನರು ಉದ್ಯೋಗವನ್ನು ಹುಡುಕಿಕೊಂಡು ಗುಳೆ ಹೋಗುವುದು ತಪ್ಪಿಲ್ಲ. ಅದರಲ್ಲೂ ಮಳೆ ಕೈ ಕೊಟ್ಟಾಗ ರೈತರು ಉದ್ಯೋಗ ಹುಡುಕಿ ಬೇರೆ ಜಿಲ್ಲೆ, ರಾಜ್ಯಗಳಿಗೆ ವಲಸೆ ಹೋಗುತ್ತಾರೆ.
ಇನ್ನೂ ಚಿನ್ನದ ಗಣಿ ಇರುವುದರಿಂದ ಇದನ್ನು ಚಿನ್ನದ ಜಿಲ್ಲೆ ಅಂತಲೂ ಕರೆಯಲಾಗುತ್ತದೆ. ಕರ್ನಾಟಕದಲ್ಲಿ ಚಿನ್ನ ಉತ್ಪಾದಿಸುವ ಹಟ್ಟಿ ಚಿನ್ನದ ಗಣಿ ಇಲ್ಲಿದೆ. ಆದರೆ ಈ ಪ್ರದೇಶ ಮಾತ್ರ ಅಭಿವೃದ್ದಿಯನ್ನು ಕಂಡಿಲ್ಲ. ಹೀಗೆ ರಾಜನ ಊರು ರಾಯಚೂರು ರಾಜ್ಯಕ್ಕೆ ಚಿನ್ನ, ಅನ್ನ ಹಾಗೂ ಬೆಳಕು ನೀಡಿದರೂ ಇಲ್ಲಿನ ಸಮಸ್ಯೆಗಳು ಮಾತ್ರ ಎಲ್ಲಾ ಜಿಲ್ಲೆಗಳಿಗೆ ಹೋಲಿಸಿದರೆ ಮುಂಚುಣಿಯಲ್ಲಿವೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications